BMRCL Recruitment 2022: ನಮ್ಮ ಮೆಟ್ರೋದಲ್ಲಿ 144 ಇಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ

  • ಬಿಎಂಆರ್‌ಸಿಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜನವರಿ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನ
  • ಒಟ್ಟು 144  ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ
bmrcl recruitment 2022 apply for engineer post in namma metro gow

ಬೆಂಗಳೂರು(ಡಿ7): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Limited-BMRCL)  ಖಾಲಿ ಇರುವ 144 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಕ್ಸಿಕ್ಯೂಟಿವ್ ಎಂಜಿನಿಯರ್, ಚೀಫ್​ ಎಂಜಿನಿಯರ್, ಡೆಪ್ಯುಟಿ ಚೀಫ್​ ಎಂಜಿನಿಯರ್ ಸೇರಿ ಹಲವು ಎಂಜಿನಿಯರ್ ಹುದ್ದೆಗಳು ಖಾಲಿ ಇದೆ. ಬಿಇ, ಬಿ.ಟೆಕ್​, ಎಂಎಸ್ಸಿ, ಎಂಟೆಕ್​, ಎಂಇ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜನವರಿ 17 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದ್ದು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ bmrc.co.in ಗೆ ಭೇಟಿ ನೀಡಲು ಕೋರಲಾಗಿದೆ.

ಹುದ್ದೆಯ ಮಾಹಿತಿ: ಒಟ್ಟು 144 ಹುದ್ದೆಗಳು ಖಾಲಿ ಇದ್ದು ವಿವರ ಇಂತಿದೆ.
ಜೂನಿಯರ್ ಎಂಜಿನಿಯರ್ - 23
ಅಸಿಸ್ಟೆಂಟ್​ ಎಂಜಿನಿಯರ್- 43
ಮ್ಯಾನೇಜರ್- 01
ಡೆಪ್ಯುಟಿ ಮ್ಯಾನೇಜರ್- 02
ಡೆಪ್ಯುಟಿ ಜನರಲ್ ಮ್ಯಾನೇಜರ್- 01
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​ ಎಂಜಿನಿಯರ್- 09
ಸೆಕ್ಷನ್​ ಎಂಜಿನಿಯರ್- 51
ಎಕ್ಸಿಕ್ಯೂಟಿವ್ ಎಂಜಿನಿಯರ್- 06
ಚೀಫ್​ ಎಂಜಿನಿಯರ್- 02
ಡೆಪ್ಯುಟಿ ಚೀಫ್​ ಎಂಜಿನಿಯರ್- 06

ವಿದ್ಯಾರ್ಹತೆ-ಅರ್ಜಿ ಶುಲ್ಕ: ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, ಎಂಎಸ್ಸಿ, ಎಂಟೆಕ್​, ಎಂಇ ಪೂರ್ಣಗೊಳಿಸಿರಬೇಕು. 

KSP RECRUITMENT 2022: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಹ್ವಾನ

ವಯೋಮಿತಿ ಮತ್ತು ಉದ್ಯೋಗ ಸ್ಥಳ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ ಮತ್ತು ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  30,000 ರೂ ರಿಂದ 1,45,000 ರೂ ವೇತನ ನಿಗದಿಯಾಗಿದೆ.

KIMS Hubballi Recruitment 2022: ಕಿಮ್ಸ್ ನಲ್ಲಿ ಖಾಲಿ ಇರುವ 37 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ಮೆಟ್ರೋದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಮಾಜಿ ಸೈನಿಕರಿಗೆ ಸಿಬ್ಬಂದಿ ಕೆಲಸ ಖಾಲಿ ಇದೆ: ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Limited-BMRCL)  ಗುತ್ತಿಗೆ ಆಧಾರದ ಮೇಲೆ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಸ್ಟೇಷನ್ ಕಂಟ್ರೋಲರ್/ ರೈಲು ನಿರ್ವಾಹಕರ 50 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮಾಜಿ ಸೈನಿಕ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಸ್ಟೇಷನ್‌ ಕಂಟ್ರೋಲರ್ /ಟ್ರೈನ್ ಆಪರೇಟರ್ (ಎಸ್‌ಸಿ/ಟಿಒ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ, ಡಿಪ್ಲೋಮಾ ಪಾಸಾದ  ಅಭ್ಯರ್ಥಿಗಳು ಆನ್​​​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಗೆ ಭೇಟಿ ನೀಡಲು ಕೋರಲಾಗಿದೆ.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್​​​​ನಿಂದ ಕಡ್ಡಾಯವಾಗಿ 10ನೇ ತರಗತಿ ಮತ್ತು ಡಿಪ್ಲೋಮಾ ಪಾಸಾಗಿರಬೇಕು. ಇದು ನಿವೃತ್ತ ಮಿಲಿಟರಿ ಸಿಬ್ಬಂದಿಗೆ ಆಯೋಜಿಸಲಾಗಿರುವ ವಿಶೇಷ ನೇಮಕಾತಿಯಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Latest Videos
Follow Us:
Download App:
  • android
  • ios