ಬೆಂಗಳೂರು, (ಫೆ.09): ಡಿಜಿಟಲ್ ಎಜುಕೇಷನ್ ಆಯಂಡ್ ಎಂಪ್ಲಾಯ್‍ಮೆಂಟ್ ಡೆವಲಪ್‍ಮೆಂಟ್‍ನಲ್ಲಿ (ಐಡಿಇಇಡಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

 ಒಟ್ಟು 433 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 20.2.2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 433 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 217 ಸ್ಥಾನ, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 39, ಎಸ್ಸಿಗೆ 46, ಎಸ್ಟಿಗೆ 20 ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 111 ಸ್ಥಾನಗಳನ್ನು ಮೀಸಲಿರಿಸಲಾಗಿದೆ. 

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: SSLC, ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್‍ನಲ್ಲಿ ಪದವಿ/ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಕೋರ್ಸ್‍ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ: 20.2.2021ಕ್ಕೆ ಅನ್ವಯಿಸುವಂತೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ. ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋ ಸಡಿಲಿಕೆ ಇದೆ.

ಸ್ಟೈಪೆಂಡ್: ಅಪ್ರೆಂಟಿಸ್ ನಿಯಮದ ಪ್ರಕಾರ ಮಾಸಿಕ 11,500 ರಿಂದ 19,200 ರೂ.

ಅರ್ಜಿ ಶುಲ್ಕ: ಸಾಮಾನ್ಯವರ್ಗ, ಇತರ ಹಿಂದುಳಿದ ವರ್ಗ, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳು 550 ರೂ., ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ 400 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಆನ್‍ಲೈನ್ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ ಆಧರಿಸಿ ಶಾರ್ಟ್‍ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುವುದು. 

ಅಧಿಸೂಚನೆಗೆ:https://bit.ly/3pRAI8a
ಮಾಹಿತಿಗೆ: http://www.dsrvsindia.ac.in