ಐಟಿ,ಬಿಟಿ ನೌಕರರಿಗೆ ಜುಲೈ 31ರವರೆಗೆ ವರ್ಕ್ ಫ್ರಮ್ ಹೋಮ್
ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಜುಲೈ 31ರವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹಾಗಾದ್ರೆ, ಮೇ, ಜೂನ್‌ಗೂ ಮುಗಿಯಲ್ವಾ ಲಾಕ್‌ಡೌನ್ ಎನ್ನುವ ಪ್ರಶ್ನೆ ಮೂಡಿಸುತ್ತಿದೆ.
ನವದೆಹಲಿ, (ಏ.28): ಐಟಿ ಕಂಪನಿಗಳು ಮತ್ತು ಅವರ ಉದ್ಯೋಗಿಗಳಿಗೆ ಮನೆಯಿಂದ ಕೆಲಸಗಳನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಮತ್ತು ಸಂವಹನ ಸಚಿವ ರವಿಶಂಕರ್ ಪ್ರಸಾದ್ ಮಂಗಳವಾರ ತಿಳಿಸಿದ್ದಾರೆ.
ಕೊರೋನಾ ಲಾಕ್‌ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ.
ವರ್ಕ್ ಫ್ರಂ ಹೋಮ್‌ಗೆ ಸೈಬರ್ ಕಳ್ಳರ ಭೀತಿ!
ಲಾಕ್ ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ವಿವರಿಸಿದರು.
ರಾಜ್ಯದ ಐಟಿ ವೃತ್ತಿಪರರಿಗೆ ಮುಂದಿನ ವರ್ಷ ಮಾರ್ಚ್‌ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್ ಫ್ರಮ್ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಐಟಿ ಸಿಬ್ಬಂದಿಗೆ ಜುಲೈ 31 ರವರೆಗೆ ವರ್ಕ್ ಫ್ರಮ್ ಹೋಮ್ ಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಘೋಷಣೆ ಮಾಡಿರುವುದರಿಂದ ಷರತ್ತುಗಳೊಂದಿಗೆ ಹಲವು ವಾಣಿಜ್ಯ ಚಟುವಟಿಕೆ ನಿರ್ವಹಣೆಗೆ ಅನುಮತಿ ನೀಡಲಾಗಿದೆ. ಕಡಿಮೆ ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಣೆಗೆ ಐಟಿ ವಲಯದ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆ ಜುಲೈ 31 ರ ವರೆಗೆ ವರ್ಕ್ ಫ್ರಂ ಹೋಮ್ ಗೆ ಕೇಂದ್ರ ಸರ್ಕಾರ ಅವಧಿ ವಿಸ್ತರಣೆ ಮಾಡಿದೆ.