ಉದ್ಯೋಗ ಸೃಷ್ಟಿಗೆ ರಾಜ್ಯ ಕಾಂಗ್ರೆಸ್ ನಿಂದ ವೆಬ್‌ಸೈಟ್ ಆರಂಭ
ಉದ್ಯೋಗ ಭರವಸೆ ನೀಡಿ ಕೇಂದ್ರ ಸರ್ಕಾರ ವಂಚಿಸಿದೆ ಎಂದು ಆರೋಪಿಸಿ ಉದ್ಯೋಗ ಸೃಷ್ಟಿಗೆ ಕಾಂಗ್ರೆಸ್ ಪಕ್ಷದಿಂದ ವೆಬ್‌ಸೈಟ್ ಆರಂಭಿಸಲಾಗಿದೆ. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಚಾಲನೆ ನೀಡಲಾಗಿದೆ.
ಬೆಂಗಳೂರು (ಸೆ.11): ಉದ್ಯೋಗ ಭರವಸೆ ನೀಡಿ ಕೇಂದ್ರ ಸರ್ಕಾರ ವಂಚಿಸಿದೆ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಇದೀಗ ಯುವಕರಿಂದ ಉದ್ಯೋಗ ಸೃಷ್ಟಿಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ತಾನೇ ವೆಬ್‌ಸೈಟ್ ಆರಂಭಿಸಿದೆ. https://www.udyogasrishti.in/ ವೆಬ್‌ಸೈಟ್‌ಗೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಚಾಲನೆ ನೀಡಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯುವಕರಿಗೆ ವಂಚಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಖಾಸಗಿ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗವಕಾಶ ಒದಗಿಸಲು ಬದ್ಧವಾಗಿದ್ದೇವೆ. ಈ ಸಂಬಂಧ ಯುವಕರಿಂದ ಅಭಿಪ್ರಾಯ ಸಂಗ್ರಹಿಸಲು ವೆಬ್‌ಸೈಟ್‌ಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ದೇಶ ಒಗ್ಗೂಡಿಸಲು ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಇದೇ ವೇಳೆ ಉದ್ಯೋಗ ಸೃಷ್ಟಿ ಸಂಬಂಧ ಯುವಕರಿಂದ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ವೆಬ್‌ಸೈಟ್‌ಗೆ ಚಾಲನೆ ನೀಡಿದ್ದೇವೆ. ರಾಹುಲ್ ಗಾಂಧಿ ಭೇಟಿಯಾಗುವವರು ಕೂಡ ಈ ವೆಬ್‌ಸೈಟ್ ನೋಂದಣಿ ಮಾಡಲಿ. ಉದ್ಯೋಗ ಸೃಷ್ಟಿಮಾಡಲು, ನಿರುದ್ಯೋಗ ಸಮಸ್ಯೆ ನಿವಾರಿಸಲು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವವರು ಈ ವೆಬ್‌ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಮುಂದೆ ನಾವು ಅಧಿಕಾರಕ್ಕೆ ಬಂದ ಬಳಿಕ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಹೇಳಿದರು. ಈಗಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಹೋಗಿ 40 ಸಾವಿರ ನಿರುದ್ಯೋಗಿಗಳ ಹೆಸರು ನೋಂದಣಿ ಮಾಡಿಸಿದ್ದಾರೆ. ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಬಯಸುವವರು ನೋಂದಣಿ ಮಾಡಿಕೊಳ್ಳಬಹುದು. ರಾಹುಲ್ ಗಾಂಧಿ ಅವರ ಜತೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಭೇಟಿಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದರು.
ಎಸ್.ಆರ್. ಪಾಟೀಲ್ ಮನವೊಲಿಕೆಗೆ ಹಿರಿಯ ಕಾಂಗ್ರೆಸ್ಸಿಗರ ಯತ್ನ
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಹಿರಿಯ ನಾಯಕ ಎಸ್.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಹಿರಿಯ ನಾಯಕರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮನವೊಲಿಸಲು ಯತ್ನಿಸಿದ್ದಾರೆ.
ಕಣ್ಣಿಲ್ಲದ ಟೆಕ್ಕಿಗೆ ವಾರ್ಷಿಕ 47 ಲಕ್ಷ ವೇತನದ ಕೆಲಸ: ಆಫರ್ ನೀಡಿದ ಮೈಕ್ರೋಸಾಫ್ಟ್ ಕಂಪನಿ
ಶುಕ್ರವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂವರೂ ನಾಯಕರು ಎಸ್.ಆರ್. ಪಾಟೀಲ್ ನಿವಾಸಕ್ಕೆ ಭೇಟಿ ನೀಡಿ ಮನವೊಲಿಕೆ ಪ್ರಯತ್ನ ಮಾಡಿದರು.
ಬೆಂಗ್ಳೂರು ಐಟಿ ಕಂಪನಿಗಳ ಗುಳೆ ಎಚ್ಚರಿಕೆ! ಕಂಪನಿಗಳ ಜತೆ ಸಚಿವ ಅಶ್ವತ್ಥನಾರಾಯಣ ಸಭೆ
ಹೈಕಮಾಂಡ್ ನಿರ್ಧಾರದ ಬಗ್ಗೆ ಬೇಸರ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಹೈಕಮಾಂಡ್ ನಿಮ್ಮನ್ನು ಪರಿಗಣಿಸುತ್ತದೆ. ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ಮನವಿ ಮಾಡಿದರು. ಇದಕ್ಕೆ ಎಸ್.ಆರ್. ಪಾಟಿಲ್ ಅವರೂ ಪೂರಕವಾಗಿ ಸ್ಪಂದಿಸಿದ್ದು, ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.