ಬೆಂಗಳೂರು, (ಅ.13) : ಕೊರೋನಾ ವೈರಸ್ ಹಿನ್ನಲೆಯಲ್ಲಿ 18 ಜಿಲ್ಲಾ ಮಟ್ಟದ ಆಸ್ಪತ್ರೆಗಳ ಸಿಬ್ಬಂದಿಗಳನ್ನು 6 ತಿಂಗಳ ಮಟ್ಟಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವವರನ್ನು ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಲ್ಲಿ ನೌಕರರ ಕೊರತೆ ಎದುರಾಗಿತ್ತು. ಇಂತಹ ಸಂದರ್ಭದಲ್ಲಿ ಮುಂದಿನ ಆರು ತಿಂಗಳವರೆಗೆ ಎನ್ನುವಂತೆ ರಾಜ್ಯ 18 ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸುವ ಸಲುವಾಗಿ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ 6 ತಿಂಗಳವರೆಗೆ ಗುತ್ತಿಗೆ, ಹೊರಗುತ್ತಿಗೆ ಆಧರಾದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. 

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಿಬ್ಬಂದಿಗಳ ನೇಮಕಾತಿ ದಿನಾಂಕ ಸೆಪ್ಟೆಂಬರ್ 2020ಕ್ಕೆ ಕೊನೆಗೊಂಡಿತ್ತು. ಹೀಗಾಗಿ ಈ ನೌಕರರ ಅವಧಿಯನ್ನು ಮತ್ತೆ ಸರ್ಕಾರ, ದಿನಾಂಕ 31-12-2020ರವರೆಗೆ ಮುಂದುವರೆಸಿ ಆದೇಶಿಸಿದೆ. 

ಈ ಮೂಲಕ ಆರೋಗ್ಯ ಇಲಾಖೆಯಲ್ಲಿ 6 ತಿಂಗಳವರೆಗೆ ಕೊರೋನಾ ಕರ್ತವ್ಯಕ್ಕಾಗಿ ನೇಮಕಗೊಂಡಿದ್ದಂತ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.