ಫೆ.14 ರಿಂದ ಹಾವೇರಿ, ಕೊಪ್ಪಳ, ತುಮಕೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ
ಹಾವೇರಿಯಲ್ಲಿ ಫೆ.14 ರಂದು ಕೊಪ್ಪಳ ಮತ್ತು ತುಮಕೂರಿನಲ್ಲಿ ಫೆ.15ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದೆ. ಫೆ.16 ರಂದು ಬಾಗಲಕೋಟೆಯಲ್ಲಿ ಮಾತ್ರವಲ್ಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಹಾವೇರಿ (ಫೆ.12): ಹಾವೇರಿಯಲ್ಲಿ ಇದೇ ಫೆ. 14ರಂದು ಉದ್ಯೋಗ ಮೇಳ ನಡೆಯಲಿದ್ದು, ಪದವಿ ಮತ್ತು ಪಿಯುಸಿ ಓದುವ ಆಸಕ್ತಿ ಹೊಂದಿದ 18ರಿಂದ 40 ವಯಸ್ಸಿನ ವಿದ್ಯಾರ್ಥಿಗಳು ಈ ಉದ್ಯೋಗಮೇಳದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಸಂತೋಷ ಹಿರೇಮಠ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ವಾಣಿಜ್ಯೋದ್ಯಮ ಮಂಡಳಿ, ಭಾರತೀಯ ವೈದ್ಯಕೀಯ ಸಂಸ್ಥೆ, ಜಿಲ್ಲಾ ಕೈಗಾರಿಕಾ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ಹಾವೇರಿಯಲ್ಲಿ ಇದೇ ಫೆ. 14ರಂದು ನಡೆಯಲಿರುವ ಉದ್ಯೋಗ ಮೇಳದ ಕುರಿತು ತಾಲೂಕು ಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉದ್ಯೋಗ ಬಗ್ಗೆ ಪರಿಕಲ್ಪನೆ ಮೂಡಿಸಬೇಕು. ವಿವಿಧ ಕಂಪನಿಗಳು ಮನೆ ಬಾಗಿಲಿಗೆ ಬಂದು ಉದ್ಯೋಗ ನೀಡುತ್ತಿದ್ದು, ಅದರ ಸದುಪಯೋಗ ಪಡೆಯಲು ಮುಂದಾಗಬೇಕು. ವಿದ್ಯಾರ್ಥಿಗಳು ತಕ್ಕಂತೆ ಉದ್ಯೋಗಗಳು ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಸ್ವವಿವರಣೆ ನೀಡಬೇಕು ಎಂದರು.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಚಾರ ಮಾಡಲಾಗುತ್ತಿದೆ. ತಾಲೂಕಿನ ಎಲ್ಲ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಬಗ್ಗೆ ಸರಿಯಾಗಿ ಶಿವಾನಂದ ಮಾಹಿತಿ ನೀಡಿ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ. ಉದ್ಯೋಗ ಅವಶ್ಯವಿಲ್ಲದ
ವಿದ್ಯಾರ್ಥಿಗಳಿಗೂ ಅವಕಾಶ ಅವರಲ್ಲಿ ಉದ್ಯೋಗದ ಬಗ್ಗೆ ತಿಳಿವಳಿಕೆ ಮೂಡಿಸಿ. ಉದ್ಯೋಗ ಮೇಳಕ್ಕೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಮೂಲ ಅಂಕಪಟ್ಟಿಪ್ರಮಾಣಪತ್ರ, ದೃಢೀಕರಿಸಿದ ಪ್ರಮಾಣ ಪತ್ರ, ಸ್ವವಿವರದ ಪ್ರತ ಸೇರಿದಂತೆ ಅರ್ಹತೆಗೆ ದಾಖಲಾತಿಗಳನ್ನು ಹಲವು ನೀಡಬೇಕು. ಮೇಳದಲ್ಲಿ ಕನಿಷ್ಠ 25ರಿಂದ 30 ವಿವಿಧ ಕಂಪನಿಗಳು ಭಾಗವಹಿಸಲಿದೆ ಎಂದರು. ಪಂಚಾಯ್ತಿ ಯೋಜನಾಧಿಕಾರಿ ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪತಹಸೀಲ್ದಾರ್ ರವಿ ಕೊರವರ, ಸಾಂಖಿಕ ಅಧಿಕಾರಿ ಸಣ್ಣಕ್ಕಿ ತಾಲೂಕಿನ ಎಲ್ಲ ಸೇರಿದಂತೆ ಕಾಲೇಜುಗಳ ಪ್ರಾಚಾರ್ಯ, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಇದ್ದರು.
ಫೆ. 15ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಬಳ್ಳಾರಿ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಫೆ. 15ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 15ಕ್ಕಿಂತ ಹೆಚ್ಚು ಕಂಪನಿಯವರು ಭಾಗವಹಿಸುತ್ತಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ ಅಥವಾ ಮೊ. 9148792888, 9148793888, 9148875888 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.15 ರಂದು ತುಮಕೂರಿನಲ್ಲಿ ಉದ್ಯೋಗ ಮೇಳ
ತುಮಕೂರು: ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರ ಹಾಗೂ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಎನ್‌ಸಿಎಸ್‌ಪಿ ಅಡಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 15 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇನ್ಫೋಸಿಸ್‌ನಲ್ಲಿ ಉದ್ಯೋಗ ಕಡಿತ, ಪರೀಕ್ಷೆ ಪಾಸ್ ಮಾಡದ 100ಕ್ಕೂ ಹೆಚ್ಚು ಹೊಸಬರ ವಜಾ!
ಉದ್ಯೋಗ ಮೇಳದಲ್ಲಿ ಬೆಂಗಳೂರು ಮತ್ತು ತುಮಕೂರಿನ ಹೆಸರಾಂತ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಬಿ.ಇ., ಎಂಸಿಎ, ಎಂಬಿಎ ಹಾಗೂ ಇನ್ನಿತರ ಸ್ನಾತಕೋತ್ತರ ಪದವಿ ಮತ್ತು ಐಟಿಐ, ಡಿಪ್ಲೊಮಾ ಎಲ್ಲಾ ಟ್ರೇಡ್ ಪಾಸಾದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಉದ್ಯೋಗದಾತರು/ನಿಯೋಜಕರು https://skillconnect.kaushalkar.com/candidatereg ವೆಬ್‌ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9880455484, 9945751254, 812328455, 8792669410ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
BENGALURU: ಇಂದು ಮಲ್ಲೇಶ್ವರಂನಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ: ಆಸಕ್ತರು ಪಾಲ್ಗೊಳ್ಳಿ
ಫೆ.16 ರಂದು ಬಾಗಲಕೋಟೆಯಲ್ಲಿ ಮಿನಿ ಉದ್ಯೋಗ ಮೇಳ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.16ರಂದು ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾಗಿರಿಯಲ್ಲಿರುವ ಬಸವೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿಧರರು, ಸ್ನಾತಕೋತ್ತರ ಹಾಗೂ ವೃತ್ತಿಪರ ಪದವೀಧರರಿಗೆ ಅವಕಾಶವಿರುತ್ತದೆ.
ಈ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು https://skillconnect.kaushalkar.com/candidatereg ಗೂಗಲ್ ಫಾರ್ಮ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು. ಉದ್ಯೋಗ ಮೇಳಕ್ಕೆ ಬರುವಾಗ ಅಂಕಪಟ್ಟಿ, ಆಧಾರ ಕಾರ್ಡ್ ಮತ್ತು ಬಯೋಡಾಟಾಗಳನ್ನು ಕನಿಷ್ಠ 5 ಝೆರಾಕ್ಸ್ ಪ್ರತಿಯೊಂದಿಗೆ ನೇರವಾಗಿ ಭಾವಹಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ. ಮಾಹಿತಿಗಾಗಿ ದೂಸಂ.083554-295210, 09538162203, 7676634184ಗೆ ಸಂಪರ್ಕಿಸಬಹುದಾಗಿದೆ.
ವಿಜಯಪುರದಲ್ಲಿ ಫೆ.15ರಂದು ಮಿನಿ ಉದ್ಯೋಗ ಮೇಳ
ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆ.15 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4.30 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಮಾನಿಕಬಾಗ ಅಟೋಮೊಬೈಲ್, ಐಸಿಐಸಿಐ ಹೋಮ ಲೋನ್, ಹುಂಡೈ ಮೋಟಾರ್ಸ್ ಮತ್ತು ಜನ ಸ್ಮಾಲ್ ಪೈನಾನ್ಸ್ ಬ್ಯಾಂಕ್, ಮುತ್ತೂಟ್ ಪೈನಾನ್ಸ್, ಫ್ಲಿಪ್‌ಕಾರ್ಚ್ ಲಾಜಿಸ್ಟಿಕ್ ಮುಂತಾದ ಕಂಪನಿಗಳು ಭಾಗವಹಿಸಲಿದ್ದಾರೆ. ಈ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಈ ಉದ್ಯೋಗಾವಕಾಶವು ಉಚಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಕಂಡ ಕ್ಯೂಆರ್ ಕೋಡನಲ್ಲಿ ಹೆಸರು ನೋಂದಾಯಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯನ್ನು ಖುದ್ದಾಗಿ ಅಥವಾ ಮೊ.9945000793 / 9071055557 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.