ಶಿವಮೊಗ್ಗ, [ಡಿ.16]: ಖಾಸಗಿ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಉದ್ಯೋಗದಾತರನ್ನು ಉತ್ತೇಜಿಸಲು ಸರ್ಕಾರ ‘ಆಶಾದೀಪ’ ಎಂಬ ನೂತನ ಯೋಜನೆಯನ್ನು ರೂಪಿಸಿದೆ.

ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿಯು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಜಾರಿಗೊಳಿಸಿದೆ.

ಮೈತ್ರಿ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ

ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದವರಿಗೆ ಉದ್ಯೋಗ ದೊರಕಿಸಿಕೊಡುವುದು, ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಂಡ ಸಂಸ್ಥೆಗಳಿಗೆ ಅಂತಹ ನೌಕರರ ಇ.ಎಸ್.ಐ ಹಾಗೂ ಪಿ.ಎಫ್ ವಂತಿಕೆಯನ್ನು ಮರು ಪಾವತಿಸುವ ಮೂಲಕ ಆರ್ಥಿಕ ಸಹಾಯ ನೀಡುವುದು ಹಾಗೂ ತರಬೇತಿ ಪಡೆಯುವ ಅಪ್ರೆಂಟಿಸ್ ಗಳಿಗೆ  ಶಿಷ್ಯ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

* ಯೋಜನೆಯ ಸೌಲಭ್ಯ:
• ಮಾಲಿಕರು ಪಾವತಿಸುವ ಇ.ಎಸ್.ಐ ಮತ್ತು ಪಿ.ಎಫ್ ವಂತಿಕೆ ಮರುಪಾವತಿ:
ಖಾಸಗಿ ವಲಯದ ಸಂಸ್ಥೆಗಳಲ್ಲಿ ಹೊಸದಾಗಿ ನೇಮಿಸಿಕೊಳ್ಳುವ ಪರಿಶಿಷ್ಟ ಜಾತಿ/ಪಂಗಡದ ಉದ್ಯೋಗಿಗಳಿಗೆ ಕಡ್ಡಾಯವಾಗಿ ಪಾವತಿಸಬೇಕಾದ ಭವಿಷ್ಯನಿಧಿ ಹಾಗೂ ಇ.ಎಸ್.ಐ ವಂತಿಕೆಯನ್ನು ರಾಜ್ಯ ಸರ್ಕಾರದಿಂದ ಮಾಲಿಕರು/ಉದ್ಯೋಗದಾತರಿಗೆ 2 ವರ್ಷಗಳ ಅವಧಿವರೆಗೆ ಮರುಪಾವತಿ.

'ಸರೋಜಿನಿ ಮಹಿಷಿ ಆಯೋಗದ ವರದಿಯಂತೆ ಕನ್ನಡಿಗರಿಗೆ 80% ಉದ್ಯೋಗ ಮೀಸಲು ಕಡ್ಡಾಯ'

• ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯ ವೇತನ ಮರುಪಾವತಿ:
 ಒಂದು ವರ್ಷದ ಅವಧಿಯ ಸಾಮಾನ್ಯ ಹಾಗೂ 2 ವರ್ಷಗಳ ಅವಧಿಯ ಸಮಗ್ರ ಅಪ್ರೆಂಟೈಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ಪಾವತಿಸಬೇಕಾದ ಮಾಸಿಕ ಶಿಷ್ಯವೇತನ ಮೊತ್ತದಲ್ಲಿ ಶೇ. 50ರಷ್ಟು (ಗರಿಷ್ಠ ಮಾಸಿಕ ರೂ.3000) ಮರುಪಾವತಿ.

• ಅಪ್ರೆಂಟಿಸ್ ನಂತರ ಖಾಯಂ ಮಾಡಿದಲ್ಲಿ ವೇತನ ಮರುಪಾವತಿ
 ಅಪ್ರೆಂಟೈಸ್ ತರಬೇತಿ ಪಡೆದ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳನ್ನೇ ಖಾಯಂ ಹುದ್ದೆಗಳಲ್ಲಿ ನೇಮಕಾತಿ ಮಾಡಿಕೊಂಡಲ್ಲಿ, ಅಂತಹ ನೌಕರರಿಗೆ ಆಯಾ ಹುದ್ದೆಗಳಿಗೆ ಸರ್ಕಾರ ನಿಗದಿ ಪಡಿಸಿದ ಕನಿಷ್ಠ ವೇತನ ದರದಲ್ಲಿ ಶೇ.50 ರಷ್ಟು ಮೊತ್ತವನ್ನು ಉದ್ಯೋಗದಾತರಿಗೆ ಗರಿಷ್ಠ 2 ವರ್ಷಗಳ ಅವಧಿಗೆ ಮರುಪಾವತಿ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾದೀಪ ಯೋಜನೆ) ಸೊಸೈಟಿ ಅಥವಾ ದೂರವಾಣಿ ಸಂಖ್ಯೆ 080-29759983/8833,ವೈಬ್ ಸೈಟ್ ksuwssb.karnataka.gov.in ಜಿಲ್ಲಾ ಮತ್ತು ತಾಲೂಕು ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.