Kannadigas Industries Priority: ಕನ್ನಡಿಗರಿಗೆ ಆದ್ಯತೆ ನೀಡದ ಕೈಗಾರಿಕೆಗಳಿಗೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

ಹೊಸ ಕೈಗಾರಿಕಾ ನೀತಿ - 2020 - 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ  ತಿಳಿಸಿದ್ದಾರೆ

Minister Murugesh Nirani warns action against industries not giving priority for Kannadigas in jobs gow

ಬೆಂಗಳೂರು(ಮಾ.9):  ಹೊಸ ಕೈಗಾರಿಕಾ ನೀತಿ 2020 - 25ರ (2020-25 Industrial Policy) ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ (Kannadigas) ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ( industries) ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಅವರು ಹೇಳಿದರು.

KPSC Recruitment 2022: ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲ್ಬುರ್ಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ' ಎಂದು ಹೇಳಿದರು.

ಕೋಲಾರದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಕಾರ್ಖಾನೆಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವುದಿಲ್ಲ, ಬಿಇಎಂಎಲ್ ಕಾರ್ಖಾನೆ ಕೇಂದ್ರದ ಅಧೀನದಲ್ಲಿದ್ದು, ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದರು.

AHVS Karnataka Recruitment 2022: ಎಹೆಚ್‌ವಿಎಸ್‌ 400 ಪಶುವೈದ್ಯಾಧಿಕಾರಿ ಹುದ್ದೆಗೆ ನೇಮಕಾತಿ

48 ಯೋಜನೆಗಳಿಗೆ ಅನುಮೋದನೆ, 6,393 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿ: ಕೈಗಾರಿಕಾ ಬೆಳವಣಿಗೆಗೆ ರಾಜ್ಯದಲ್ಲಿ ಇನ್ನಷ್ಟು  ಉತ್ತೇಜನ ನೀಡುವ ಮೂಲಕ ಕರ್ನಾಟಕ ಸರ್ಕಾರವು ಶನಿವಾರ  2,062.21 ಕೋಟಿ ಮೌಲ್ಯದ 48 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದಾಗಿ ರಾಜ್ಯದಲ್ಲಿ 6,393 ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ಸಚಿವ ಮುರುಗೇಶ್ ಆರ್ ನಿರಾಣಿ (Murugesh Nirani) ಹೇಳಿದ್ದಾರೆ.

ಶನಿವಾರ ಸಂಜೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 130ನೇ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಎಸ್‍ಡಬ್ಲ್ಯೂಸಿಸಿ) ಸಭೆಯಲ್ಲಿ ಈ  ಯೋಜನೆಗಳಿಗೆ ಅನುಮೋದನೆ ನೀಡಿದೆ.

ಸಮಿತಿಯು 50 ಕೋಟಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1275.67 ಕೋಟಿ ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 3181 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಸಚಿವ ನಿರಾಣಿ ಹೇಳಿದ್ದಾರೆ.

15 ಕೋಟಿಗಿಂತ ಹೆಚ್ಚು ಮತ್ತು 50 ಕೋಟಿಗಿಂತ ಕಡಿಮೆ ಹೂಡಿಕೆಯ 40 ಹೊಸ ಯೋಜನೆಗಳನ್ನು ಅನುಮೋದಿಸಲಾಯಿತು.
724.87 ಕೋಟಿ ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 3212 ಜನರಿಗೆ ಉದ್ಯೋಗಗಳನ್ನು ನೀಡಲಿದೆ.ವ 61.67 ಕೋಟಿ ಹೂಡಿಕೆಯ ಮತ್ತೊಂದು ಯೋಜನೆಗೆ ಅನುಮೋದನೆ ನೀಡಲಾಗಿದೆ. ಒಟ್ಟು  2,062.21 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,393 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 48 ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಎಂದರು.

Latest Videos
Follow Us:
Download App:
  • android
  • ios