'ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ: 40,000 ಉದ್ಯೋಗವಕಾಶ'
ಸ್ಥಳೀಯ ಆಟಿಕೆಗಳನ್ನು ತಯಾರಿಸಲು ಹೊಸತಾಗಿ ಉದ್ಯಮಗಳನ್ನು ಆರಂಭಿಸಬೇಕೆಂದು ಪ್ರಧಾನಿ ಮೋದಿ ಭಾನುವಾರದ ಮನ್‌ಕಿ ಬಾತ್‌ನಲ್ಲಿ ಕರೆ ಕೊಟ್ಟ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, (ಆ.30): ದೇಶಿ ಆಟಿಕೆಗಳನ್ನು ಅಭಿವೃದ್ದಿ ಪಡಿಸಲು ಇದು ಸಕಾಲವಾಗಿದ್ದು ಸ್ಥಳೀಯ ಆಟಿಕೆಗಳನ್ನು ತಯಾರಿಸಲು ಹೊಸತಾಗಿ ಉದ್ಯಮಗಳನ್ನು ಆರಂಭಿಸಬೇಕೆಂದು ಪ್ರಧಾನಿ ಮೋದಿ ಭಾನುವಾರದ ಮನ್‌ಕಿ ಬಾತ್‌ನಲ್ಲಿ ಕರೆ ಕೊಟ್ಟಿದ್ದಾರೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೊಪ್ಪಳ ಜಿಲ್ಲೆಯಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಕ್ಲಸ್ಟರ್: ಹೂಡಿಕೆಗೆ ರಾಜ್ಯ ಸರ್ಕಾರ ಮುಕ್ತ ಆಹ್ವಾನ
ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರ ಓಕಲ್ ಫಾರ್ ಲೋಕಲ್ ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗು ಉದ್ಯೋಗಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದಿದ್ದಾರೆ.
ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗು ಉದ್ಯೋಗಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶ-ವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಭಾರತದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಅನ್ನು ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೂಲ ಸೌಕರ್ಯಗಳೊಂದಿಗೆ 400 ಎಕರೆ ಸ್ಥಳವನ್ನು ಗುರುತಿಸಲಾಗಿದೆ. ಇದರಿಂದ ಮುಂದಿನ 5 ವರ್ಷಗಳಲ್ಲಿ 40,000 ಉದ್ಯೋಗಗಳು ಸೃಷ್ಟಿಸಲಾಗುತ್ತದೆ ಎಂದು ಹೇಳಿದ್ದಾರೆ.