Asianet Suvarna News Asianet Suvarna News

Bengaluru Udyoga Mela 2022: ಬೆಂಗಳೂರಿನಲ್ಲಿ ಮಾರ್ಚ್ 27ರಂದು ಉದ್ಯೋಗ ಮೇಳ

ಮಾರ್ಚ್ 27ರಂದು  ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಬೆಂಗಳೂರಿನ ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
 

Udyoga Mela in Bengaluru on March 27th gow
Author
Bengaluru, First Published Mar 17, 2022, 9:14 PM IST

ಬೆಂಗಳೂರು (ಮಾ.17): ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ (Deen Dayal Upadhyaya Grameen Kaushalya Yojana - DDU-GKY) 18ರಿಂದ 25 ವರ್ಷದ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ದಿನಾಂಕ  ಮಾರ್ಚ್ 27ರಂದು  ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ (Rajarajeswari College of Engineering) ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ,ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ  ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ (Job fair) ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳು ಕನಿಷ್ಠ  ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಹೊಂದಿರಬೇಕು.

ಪಿಯುಸಿ, ಐಟಿಐ, ಡಿಪ್ಲೋಮ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಎಂಕಾಂ, ಎಂಬಿಎ, ಎಂಎ, ಎಂಸಿಎ ಪದವಿಗಳನ್ನು ಹೊಂದಿದ ಉದ್ಯೋಗಕಾಂಕ್ಷಿಗಳಿಗೆ  ಒಂಭತ್ತು ವಿವಿಧ ಪ್ರತಿಷ್ಠಿತ  ಖಾಸಗಿ ಕಂಪನಿಗಳಾದ ಮುತ್ತೂಟ್ ಗ್ರೂಪ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್,ಯುರೇಕಾ ಫೋರ್ಬ್ಸ್, ಟೀಮ್ ಲೀಸ್, ಯು ಟಿ ಎಲ್ ಟೆಕ್ನಾಲಜಿ ಲಿಮಿಟೆಡ್, ಜಸ್ಟ್ ಡಯಲ್, ಇಂಪ್ಯಾಕ್ಟ್, ರಿಲೆಯನ್ಸ್ ಗಳಲ್ಲಿ ಉದ್ಯೋಗ  ಪಡೆದುಕೊಳ್ಳುವ ಅವಕಾಶ ಇದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ: 9964907444 / 7975014738 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಗಪ್ಪರವರು  ತಿಳಿಸಿದ್ದಾರೆ.

SAI Recruitment 2022: ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ, ಕೆಲವೇ ದಿನ ಬಾಕಿ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಮಹತ್ವದ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ: ಕೇಂದ್ರ ಸರ್ಕಾರಿ ನೌಕರು ಪಡೆಯುತ್ತಿರುವ ವೇತನಕ್ಕೆ ಸಮನಾಗಿ ಕರ್ನಾಟಕ ಸರ್ಕಾರಿ ನೌಕರರ ವೇತನ ಪರಿಷ್ಕಸಬೇಕೆಂಬ ಬಹುಕಾಲದ ಬೇಡಿಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ಸ್ಪಂದಿಸಿದ್ದು, 7ನೇ ವೇತನ ಆಯೋಗ (7th pay commission) ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.

ಹೌದು...ಆಯೋಗ ರಚಿಸುವ ವಿಚಾರವನ್ನ ವಿಧಾನಸಭೆಯಲ್ಲಿ ಸಿಎಂ ಬುಧವಾರ ತಿಳಿಸಿದ್ದು, ಆದಷ್ಟು ಬೇಗ ಆಯೋಗ ರಚಿಸುತ್ತೇನೆ. ಅದು ನೀಡುವ ವರದಿ ಆಧರಿಸಿ ನೌಕರರ ವೇತನ ರಿಷ್ಕರಣೆ ಮಾಡುಲಾಗುವುದು ಎಂದು ಭರವಸೆ ನೀಡಿದರು.

ನಾನು ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡದ ಕಾರಣ, ಸಂಘದ ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿ ಬೇಡಿಕೆಯನ್ನು ಮುಂದಿಟ್ಟಿದ್ದರು. ಹಾಗಾಗಿ, ಆದಷ್ಟು ಬೇಗ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಆಯೋಗ ಇತರ ರಾಜ್ಯಗಳ ನೌಕರರ ವೇತನವನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಮಾಡಲಿದೆ ಎಂದು ವಿಧಾನಸಭೆಯಲ್ಲಿ ಬಜೆಟ್ ಚರ್ಚೆ ವೇಳೆ ಬೊಮ್ಮಾಯಿಯವರು ತಿಳಿಸಿದರು.

Raichur Anganwadi Recruitment 2022: ರಾಯಚೂರು ಜಿಲ್ಲೆಯ ಅಂಗನವಾಡಿ ಹುದ್ದೆ

3.5 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, 4.5 ಲಕ್ಷ ಉದ್ಯೋಗಗಳನ್ನು ಹೊರಗುತ್ತಿಗೆಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌ಕೆ ಪಾಟೀಲ್‌ ಅವರು ಹೇಳಿದರು.

ಇದಕ್ಕೆ ಉತ್ತರಿಸಿದ ಸಿಎಂ, 77,000 ಕೌಶಲ್ಯರಹಿತ ಗ್ರೂಪ್-ಡಿ ಸಿಬ್ಬಂದಿ ಸೇರಿದಂತೆ ಸುಮಾರು 91,000 ಮಂದಿಯನ್ನು ಮಾತ್ರ ಹೊರಗುತ್ತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಹೊರಗುತ್ತಿಗೆ ಸಿಬ್ಬಂದಿಯನ್ನೇ ಮುಂದುವರಿಸಿದರೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಮೀಸಲಾತಿ ನಿರಾಕರಣೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ತತ್ವಕ್ಕೆ ವಿರುದ್ಧವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೌಕರರ ಪರವಾಗಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Follow Us:
Download App:
  • android
  • ios