ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ  ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ   ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 

ಬೆಂಗಳೂರು(ಫೆ.4): ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (Karnataka Skill Development Corporation) ಫೆಬ್ರವರಿ 12ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಕಲಬುರಗಿ (Kalaburagi) ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ (PDA Engineering college) ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು (Udyoga Mela) ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Add Asianetnews Kannada as a Preferred SourcegooglePreferred

ಬಿ.ಇ, ಬಿ.ಕಾಂ, ಬಿ.ಎಸ್ಸಿ, ಬಿ.ಎ, ಬಿಸಿಎ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.

ಪ್ರಮುಖ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, 5 ಸಾವಿರಕ್ಕೂ ಅಧಿಕ ಉದ್ಯೋಗಗಳ ನೇಮಕಾತಿಯನ್ನು ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ನಕಲಿ ಪ್ರತಿ, 2 ಫೋಟೋ, ಆಧಾರ್ ಕಾರ್ಡ್ ಹಾಗೂ ಐದು ಸೆಟ್ ಸ್ವವಿವರದ ಅರ್ಜಿಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹತೆಗಳು, ವಯೋಮಿತಿ, ವೇತನ ಮತ್ತು ಉದ್ಯೋಗದ ಸಂಪೂರ್ಣ ವಿವರಗಳನ್ನು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ : 8277895931

ಉದ್ಯೋಗ ಮೇಳ ನಡೆಯುವ ಸ್ಥಳ : ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ, ಐವನ್ನ-ಎ-ಶಾಹಿ, ಶಂಭೋಜಿನಲ್ಲಿ, ಕಲಬುರ್ಗಿ-585102

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು https://skillconnect.kaushalkar.com/app/gulbarga-jobfair?utm_source=DH-MoreFromPub&utm_medium=DH-app&utm_campaign=DH ಲಿಂಕ್ ಬಳಸಿ ತಮ್ಮ ಹೆಸರನ್ನು ಈ ಕೂಡಲೇ ನೊಂದಾಯಿಸಿಕೊಳ್ಳಿ. ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ksdc.recruitment@gmail.com ವಿಳಾಸಕ್ಕೆ ಮೇಲ್ ಕೂಡ ಮಾಡಬಹುದು.

KEA ASSISTANT PROFESSOR EXAM SCHEDULE 2022: ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಸ್ತಾವಿತ ವೇಳಾಪಟ್ಟಿ ಬಿಡುಗಡೆ

ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಕಚೇರಿ ಆಡಳಿತಗಾರ ( Office Administrator ) ಹುದ್ದೆ ಖಾಲಿ ಇದ್ದು, ಅಭ್ಯರ್ಥಿಗಳುಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ ಪೂರ್ಣಗೊಳಿಸಿರಬೇಕು.

ಕೆಲಸದ ಅನುಭವ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫೀಸ್ ಕಮ್ಯುನಿಕೇಷನ್, ಬೇಸಿಕ್ ಅಕೌಂಟಿಂಗ್, ಟ್ಯಾಲಿ, ಎಂಎಸ್​ ಎಕ್ಸೆಲ್ ಮತ್ತು ಎಂಎಸ್ ಆಕ್ಸೆಸ್​ನಲ್ಲಿ ಡಾಟಾ ಎಂಟ್ರಿ ಯೂಸಿಂಗ್ ಮಾಡುವುದು ತಿಳಿದಿರಬೇಕು. ಅಕೌಂಟ್ಸ್​ ಮತ್ತು ಆಫೀಸ್ ಅಡ್ಮಿನಿಸ್ಟ್ರೇಷನ್​​ನಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವನ್ನು ಹೊಂದಿರಬೇಕು.

AAAL Recruitment 2022: ಕಮಾಂಡರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 25,000ರೂ ವೇತನ ನೀಡಲಾಗುತ್ತದೆ. ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ.