1 ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಈ ವರ್ಷವೇ ಆರಂಭ: ಸಿಎಂ ಬೊಮ್ಮಾಯಿ

ಧಾರವಾಡದಲ್ಲಿ ಎಫ್ ಎಂ ಸಿ ಜಿ ಕ್ಲಸ್ಟರ್ ನ್ನು ಅಭಿವೃದ್ಧಿಪಡಿಸಿ ಇಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು ಎಂದಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Work on Dharwad FMCG cluster to start this year says Basavaraj Bommai gow

ಬೆಂಗಳೂರು (ಎ.30): ಧಾರವಾಡದಲ್ಲಿ ಎಫ್ ಎಂ ಸಿ ಜಿ ಕ್ಲಸ್ಟರ್ (FMCG cluster) ನ್ನು ಅಭಿವೃದ್ಧಿಪಡಿಸಿ ಇಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಒಂದು ಲಕ್ಷ ಉದ್ಯೋಗ (Emplyoment) ಸೃಷ್ಟಿಸುವ ಈ ಯೋಜನೆಯನ್ನು ಇದೇ ವರ್ಷ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಏ.29 ರಂದು ತೇಜು (Teju), ಜೆ.ಎಸ್.ಗ್ರೂಪ್ ಆಫ್ ಕಂಪನಿ ಇವರ ವತಿಯಿಂದ ಆಯೋಜಿಸಿದ ನೂತನ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಮಾತನಾಡಿದರು.

ಜನರಿಂದ ಜನರಿಗೋಸ್ಕರ ಇರುವ ಉದ್ಯಮಗಳು ದೇಶದ ಅವಶ‍್ಯಕತೆಯಾಗಿದೆ. ಕರ್ನಾಟಕ ಪ್ರಗತಿಪರ ರಾಜ್ಯ. ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ 180 ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿದೆ. ಐಟಿ , ಬಿಟಿ ರಫ್ತು , ಉತ್ಪಾದನಾ ವಲಯಗಳಲ್ಲಿ ದೇಶದ ಗರಿಷ್ಟ ರಫ್ತಿನ ಪಾಲು ಕರ್ನಾಟಕ, ಬೆಂಗಳೂರಿನಿಂದ ಆಗುತ್ತಿದೆ.  ಕರ್ನಾಟಕಕ್ಕೆ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಉತ್ತಮ ಸ್ಥಾನದಲ್ಲಿದೆ.

NTPC RECRUITMENT 2022: ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ

 

ಬೆಂಗಳೂರು ಮತ್ತು ಕರ್ನಾಟಕದಲ್ಲಿ ಅಂತರರಾಷ್ಟ್ರೀಯ ಮಟ್ಟದ ಉದ್ಯೋಗ ಸೃಷ್ಟಿಯಾಗುತ್ತಿದೆ. ರಾಜ್ಯಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಕರ್ನಾಟಕದಲ್ಲಿ ಉದ್ಯಮ, ಉದ್ಯೋಗ, ತಂತ್ರಜ್ಞಾನ ಹಾಗೂ ಬಂಡವಾಳವನ್ನು ಹೂಡಲು ಉದ್ದಿಮೆದಾರರಿಗೆ ಮುಖ್ಯಮಂತ್ರಿಗಳು ಕರೆ ನೀಡಿದರು.

ಉದ್ಯಮ ಬೆಳೆಸಲು ಗುರಿ, ಛಲ ಇರಬೇಕು: ಕರ್ನಾಟಕ ಯುವಜನತೆ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಂದು, ಆರ್ಥಿಕವಾಗಿ ಬೆಳೆಯಬೇಕು. ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವನ್ನು ದೊಡ್ಡದಾಗಿ ಬೆಳೆಸಲು ಗುರಿ ಹಾಗೂ ಸಾಧನೆಯ ಛಲ ಇರಬೇಕು. ಇಂದು ಉತ್ಪನ್ನಗಳಿಗೆ ಬ್ರ್ಯಾಡಿಂಗ್ ಅತ್ಯವಶ್ಯ. ಪ್ಯಾಕೇಜಿಂಗ್ ಗೂ ಕೂಡ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿವೆ. ಎಫ್ ಎಂ ಸಿ ಜಿ (fast-moving consumer goods) ವಿಭಾಗದಲ್ಲಿ ಬಹಳಷ್ಟು ಉದ್ಯೋಗ ಸೃಷ್ಟಿ ಸಾಧ್ಯವಿದೆ ಎಂದರು.

Indian Army Recruitment 2022: 4 ವರ್ಷಗಳ B.Sc  ನರ್ಸಿಂಗ್ ಕೋರ್ಸ್ 2022 ಗಾಗಿ ಅಧಿಸೂಚನೆ

ತೇಜು ಬ್ರ್ಯಾಂಡ್ ನೇಮ್: ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವನ್ನು ಇಂದು ರಾಷ್ಟ್ರಾದ್ಯಂತ ವಿಸ್ತರಿಸಿರುವ ತೇಜು ಉತ್ಪನ್ನಗಳ ಯಶೋಗಾಥೆ ಶ್ಲಾಘನೀಯ. ಯಾವುದೇ ಉದ್ಯಮ ಸಣ್ಣದಾಗಿ ಪ್ರಾರಂಭವಾದರೂ ನಮ್ಮ ಪರಿಶ್ರಮದಿಂದ ಅದು ಹೆಮ್ಮರವಾಗಿ ಬೆಳೆಯುತ್ತದೆ. 1990 ರ ಜಾಗತೀಕರಣದ ನಂತರ ವಿದೇಶಿ ಉತ್ಪನ್ನಗಳು ನಮ್ಮ ದೇಶಕ್ಕೆ ಬಂದಾಗ, ನಮ್ಮ ಸ್ವದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಉಳಿಸಿಕೊಳ್ಳಲು ಬ್ರ್ಯಾಂಡ್ ನೇಮ್ ನ ಅವಶ್ಯಕತೆ ಇದೆ. ಉತ್ತಮ ಗುಣಮಟ್ಟದ ಉತ್ಪನ್ನಗಳು ಮತ್ತು ಬ್ರ್ಯಾಂಡ್ ನೇಮ್ ನಿಂದಾಗಿ ತೇಜು ಉತ್ಪನ್ನಗಳು ಯಶಸ್ವಿಯಾಗಿದೆ. 4 ಸಾವಿರ ಜನರಿಗೆ ಉದ್ಯೋಗ ನೀಡಿದ್ದಾರೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನಗಳಲ್ಲಿ ಕರ್ನಾಟಕದ ತೇಜು ಉತ್ಪನ್ನಗಳು ಪ್ರಸಿದ್ಧವಾಗಿರುವುದು ಹೆಮ್ಮೆಯ ವಿಷಯ ಎಂದರು.

ಕರ್ನಾಟಕ ಮತ್ತು ಇತರ ರಾಜ್ಯಗಳು ಬಹು ಉದ್ಯೋಗಗಳನ್ನು ಸೃಷ್ಟಿಸಲು ಸಹಾಯ ಮಾಡುವ ದೊಡ್ಡ-ಟಿಕೆಟ್ ಹೂಡಿಕೆಗಳ ಏರಿಕೆಯಲ್ಲಿ ಹೆಮ್ಮೆಪಡುತ್ತವೆ, ಹೆಚ್ಚಾಗಿ ಬಿಳಿ ಕಾಲರ್, ಇದು MNREGA ನಂತಹ ಯೋಜನೆಗಳು ರಾಜ್ಯದಲ್ಲಿ ಲಕ್ಷಾಂತರ ಜನರಿಗೆ ದೈನಂದಿನ ಆಹಾರದ ಮೂಲವಾಗಿದೆ ಎಂದು HT ಏಪ್ರಿಲ್ 11 ರಂದು ವರದಿ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ ರಚಿಸಲಾದ ವ್ಯಕ್ತಿಗಳ ದಿನಗಳ ಸಂಖ್ಯೆಯು 2017-18 ರಲ್ಲಿ 8.58 ಕೋಟಿಯಿಂದ 2021-22 ರಲ್ಲಿ 16.28 ಕೋಟಿಗೆ ಏರಿದೆ.

Latest Videos
Follow Us:
Download App:
  • android
  • ios