ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು.
ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬೇಕಾದರೆ ಶಾಸಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ರವರ ಆಶೀರ್ವಾದ ಪಡೆದುಕೊಳ್ಳಲಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ರಾಜ್ಯ ಸರ್ಕಾರದವರು ಎಸ್ ಟ್ಯಾಕ್ಸ್ ಎಂಬ ನೀತಿಯನ್ನು ಜಾರಿಗೆ ತಂದಿದ್ದಾರೆ. ಗುತ್ತಿಗೆದಾರರಿಗೆ, ಅಧಿಕಾರಿಗಳ ವರ್ಗಾವಣೆಗೆ ಹಾಕುವ ಟ್ಯಾಕ್ಸ್ ಅಂದರೆ ಎಸ್ ಟ್ಯಾಕ್ಸ್ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ನೆರವಿಗೆ ಬಂದಿದ್ದಾರೆ.. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ.
ಪಂಚಾಯಿತಿಗೊಂದು ಮಾದರಿ ಶಾಲೆ ಮಾಡುವ ನಿಟ್ಟಿನಲ್ಲಿ ಮಾಗಡಿ ತಾಲೂಕಿಗೆ 5 ಕೆಪಿಎಸ್ಸಿ ಶಾಲೆ ಮಂಜೂರಾತಿ ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹೇಳಿದರು.
ಎಷ್ಟು ನೀರಿನ ಪಾಲನ್ನು ಬಿಡುಗಡೆ ಮಾಡಿದ್ದೇವೆ ಎಂಬುದನ್ನು ಸರ್ಕಾರವೇ ತಿಳಿಸುವ ಕೆಲಸ ಆಗಬೇಕು. ಇಲ್ಲವಾದರೆ ಪ್ರತಿಭಟನೆ ಉಗ್ರ ಸ್ವರೂಪ ತಾಳುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಎಚ್ಚರಿಕೆ ನೀಡಿದರು.
ಮನುಷ್ಯರು ಚಿರತೆ ಜೊತೆ ಹೊಂದಿಕೊಂಡು ವಾಸಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದ್ದು ಬೀದಿ ನಾಯಿಗಳಿಗಿಂತ ಚಿರತೆಗಳೇ ಹೆಚ್ಚಾಗಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.
ನಮ್ಮ ನೀರು ನಮ್ಮ ಹಕ್ಕು ವಿಚಾರವಾಗಿ ಮರೂರು ಹ್ಯಾಂಡ್‌ಪೋಸ್ಟ್‌ನಲ್ಲಿ ರಸ್ತೆ ತಡೆ ನಡೆಸುತ್ತಿದ್ದು, ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.