ರಾಮನಗರದಲ್ಲಿ ಭಾರೀ ಮಳೆ : ಹಲವು ಪ್ರದೇಶ ಜಲಾವೃತ
ರಾಮನಗರ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ನೀರಿನಿಂದಾವೃತವಾಗಿದೆ.
ರಾಮನಗರ [ಅ.08]: ರಾಮನಗರ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ವ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಚನ್ನಪಟ್ಟಣದ ಹಲವು ಪ್ರದೇಶಗಳು ನೀರಿನಿಂದ ಆವೃತವಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಚನ್ನಪಟ್ಟಣದ RMC ವಾರ್ಡ್, ಇಂದಿರಾ ಕಾಟೇಜ್, ಆನಂದಪುರದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ನೀರು ಹೊರಹಾಕುವುದರಲ್ಲೇ ರಾತ್ರಿ ಕಳೆದಿದ್ದಾರೆ.