ಗರ್ಭಪಾತ ಅವಧಿ ಹೆಚ್ಚಿಸಿದ ಕೇಂದ್ರ ಸರ್ಕಾರ| ಮಹಿಳೆಯ ಸಂತಾನೋತ್ಪತ್ತಿ ಹಕ್ಕಿನ ರಕ್ಷಣೆ| ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ|  ಗರ್ಭಪಾತ ಅವಧಿಯನ್ನು 24 ವಾರಗಳಿಗೆ ಹೆಚ್ಚಳ ಮಾಡಿದ ಕೇಂದ್ರ| ಈ ಹಿಂದೆ ಗರ್ಭಪಾತದ ಅವಧಿ 20 ವಾರವಾಗಿತ್ತು| ‘ಮಹಿಳೆಗೆ ತನ್ನ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಹಕ್ಕಿದೆ’|

ನವದೆಹಲಿ(ಜ.29): ಮಹತ್ವದ ಬೆಳವಣಿಗೆಯೊಂದರಲ್ಲಿ ಗರ್ಭಪಾತ ಕಾನೂನಿನಲ್ಲಿ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಗರ್ಭಪಾತದ ಅವಧಿಯನ್ನು ಹೆಚ್ಚಿಸಿದೆ.

ಈ ಹಿಂದೆ ಇದ್ದ 20 ವಾರ ಗರ್ಭಪಾತ ಅವಧಿಯನ್ನು 24 ವಾರಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.

Scroll to load tweet…

ಮಹಿಳೆಯರ ಸಂತಾನೋತ್ಪತ್ತಿ ಹಕ್ಕನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗರ್ಭಪಾತ ಕಾನೂನಲ್ಲಿ ಬದಲಾವಣೆ ತರಲಾಗಿದೆ ಎಂದು ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ.

ಮಾನಸಿಕವಾಗಿ, ದೈಹಿಕವಾಗಿ ಹೆಣ್ಣನ್ನು ಹೈರಾಣಿಗಿಸೋ ಗರ್ಭಪಾತ!

ಮಹಿಳೆಗೆ ತನ್ನ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಹಕ್ಕು ಇದೆ ಎಂದಿರುವ ಕೇಂದ್ರ ಸರ್ಕಾರ, ಗರ್ಭಪಾತ ಅವಧಿ ಹೆಚ್ಚಳ ಆಕೆಯ ಸಂತಾನೋತ್ಪತ್ತಿ ಹಕ್ಕನ್ನು ಖಾತ್ರಿಪಡಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.