'ಆಡೇ ನಮ್ಮ God'ಟೀಸರ್ ರಿಲೀಸ್: ಚಿತ್ರದಲ್ಲಿದೆ ಆಡು ಸ್ವಾಮಿಯ ಮಹಿಮೆ

'ಆಡೇ ನಮ್ಮ God' ಎನ್ನುವ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ಸಿದ್ಧವಾಗಿದೆ. ಸದ್ಯ 'ಆಡೇ ನಮ್ಮ God' ಟೀಸರ್ ರಿಲೀಸ್  ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.

Aade namma God kannada film teaser released sgk

ಸ್ಯಾಂಡ‌ಲ್‌ವುಡ್ ಮತ್ತೊಂದು ವಿಭಿನ್ನ ಪ್ರಯತ್ನದ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಅದೇ 'ಆಡೇ ನಮ್ಮ God'. ಸದ್ಯ ಟೀಸರ್ ಮೂಲಕ  'ಆಡೇ ನಮ್ಮ God'ಅಭಿಮಾನಿಗಳ ಮುಂದೆ ಬಂದಿದೆ. ಈ ಸಿನಿಮಾದಲ್ಲಿ  ಆಡನ್ನು ದೇವರಾಗಿ  ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಹಾಸ್ಯಾಸ್ಪದವಾಗಿ ಕಟ್ಟಿಕೊಡಲಾಗಿದೆ. ಈ ಸಿನಿಮಾದಲ್ಲಿ ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಪಿಂಕಿ ಎಲ್ಲಿ ಚಿತ್ರದ ಅನೂಪ್ ಶೂನ್ಯ, ಸಾರಿಕ ರಾವ್, ಬಿ ಸುರೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಪಂಚಮ ವೇದ, ಶ್ರೀಗಂಧ, ಅರಗಿಣಿ, ಅರುಣೋದಯ, ರಂಗೋಲಿ, ಅಂಡಮಾನ್, ಮುಂಜಾನೆ ಮಂಜು, ಮುಸುಕು ಸಿನಿಮಾಗಳ ಖ್ಯಾತಿ ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಆಡೇ ನಮ್ಮ‌ God ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 
ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವೆರೆಸ್ಟ್ ಇಂಡಿಯಾ ಎಂಟರ್ ಟೈನರ್ಸ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿದ್ದಾರೆ. 

ಈ ಸಿನಿಮಾದ ಬಗ್ಗೆ ನಿರ್ದೇಶಕರಾದ ಪಿ.ಎಚ್.ವಿಶ್ವನಾಥ್ ಮಾತನಾಡಿ, ಜನಗಳು ಯಾವುದಾದರೂ ಒಂದು ವಿಷಯಕ್ಕೆ ಬೇಗ ಪ್ರಭಾವಕ್ಕೆ ಒಳಗಾಗುತ್ತಾರೆ. ನಮ್ಮಲ್ಲಿ ಹಂದಿಯನ್ನು ವರಾಹ ಎಂದು ಪೂಜೆ ಮಾಡುತ್ತೇವೆ. ಹಾವು, ಕಪ್ಪೆ ಮೊಸಳೆ ಎಲ್ಲವನ್ನೂ ಪೂಜೆ ಮಾಡುತ್ತವೆ. ಈ ಬಗ್ಗೆ ಯೋಚನೆ ಮಾಡುತ್ತಾ ನಾನು ಕಂಡ ಒಬ್ಬ ವ್ಯಕ್ತಿ ಮತ್ತು ನನಗೇ ಆದ ಅನುಭವಗಳ ಆಧಾರದ ಮೇಲೆ ಆಡು‌ ಕೂಡ ಒಂದು ದೇವರು ಆಗಬಹುದು ಅನ್ನಿಸಿ ಅದನ್ನೇ ಚಿತ್ರವಾಗಿಸಿದ್ದೇವೆ. ಮೂಡನಂಬಿಕೆ ನಂಬಿಕೊಂಡು ಹೋಗುವ ಜನರ ಹಿಂದೆ ಇಡೀ ಸಿನಿಮಾವಿದೆ. ನಾಲ್ಕು ಜನ ಯುವಕರ ಜೀವನದಲ್ಲಿ ಒಂದು ಆಡು ಬಂದಾಗ ಏನಾಗುತ್ತದೆ ಎನ್ನುವುದು ಚಿತ್ರದ ತಿರುಳು' ಎಂದು ಹೇಳಿದ್ದಾರೆ. 

Nano Narayanappa Film Review: ವಿಷಾದ ಹೊದ್ದಿರುವ ಮನರಂಜನಾತ್ಮಕ ಭಾವುಕ ಕಥನ

ಆಡೇ ನಮ್GOD ಯಾವ ಕಟ್ಸ್ ಇಲ್ಲದೇ  ಸೆನ್ಸಾರ್ ಆಗಿ ಬಿಡುಗಡೆಯ ಸಿದ್ಧವಾಗಿದೆ. ಹಿರಿಯ ನಟ ಬಿ.ಸುರೇಶ್ ಮಾತನಾಡಿ, ಕೊರೋನಾ ನಂತರದ ಕಾಲಘಟ್ಟದಲ್ಲಿ ಸಿನಿಮಾ ಮಾಡುವುದು ಸುಲಭದ ಕೆಲಸವಲ್ಲ. ಮೊದಲು ಸುಲಭ ಇತ್ತು ಅಂತಲ್ಲ. ಬಸವರಾಜ್ ಹಾಗೂ ವಿಶ್ವನಾಥ್ ಅವರು ದೊಡ್ಡ ಸಾಹಸ ಮಾಡಿದ್ದಾರೆ. ತುಂಬಾ ವಿಶಿಷ್ಟವಾದ ಕಥೆ. ಪಿ ಎಚ್ ವಿಶ್ವನಾಥ್ ಅವರ ಬಗ್ಗೆ ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಂಚಮವೇದ ಚಿತ್ರದಿಂದ ಇಲ್ಲಿವರೆಗೂ ಹಲವಾರು ಬಗೆಯ ಸಿನಿಮಾ ಮಾಡಿದ್ದಾರೆ. ಹೊಸಬರಿಗೆ ನಟನೆಯ ಭಾಷೆ, ಸಿನಿಮಾ ಹೇಳಿಕೊಟ್ಟಿದ್ದಾರೆ ಎಂದರು.

ತೆರೆಮೇಲೆ ಬ್ಲಾಕ್‌ಬಸ್ಟರ್ ಹಿಟ್ ಸಂಜು ವೆಡ್ಸ್ ಗೀತಾ ಪಾರ್ಟ್ 2: ನಾಯಕಿ ಯಾರು ಗೊತ್ತಾ..?

ನಟ ನಟರಾಜ್ ಮಾತನಾಡಿ, ಪುಟ್ಟಣ್ಣ ಕಣಗಾಲ್ ಸರ್ ಬಗ್ಗೆ ನಾವು ಕೇಳುತ್ತಿದ್ದೆವು. ಅವರ ಶಿಷ್ಯ ಅಂದರೆ ಹೇಗೆ ಇರ್ತಾರೆ ಎಂಬ ಭಯ ಇತ್ತು. ನೀನು ಮಾಡಿರುವ ಸಿನಿಮಾ ಎಲ್ಲಾ ನೋಡಿದ್ದೇನೆ ಕಥೆ ಹೇಳಬಹುದಾ ಎಂದರು.  ಇಡೀ ಚಿತ್ರದ ಕಥೆ ಹೇಳಿದರು. ಬಳಿಕ ನನ್ನ ಪಾತ್ರದ ಬಗ್ಗೆ ತಿಳಿಸಿದರು. ಇಂತಹ ದಿಗ್ಗಜರ ಜೊತೆ ಸಿನಿಮಾ ಮಾಡಿರುವುದು ಖುಷಿ ಕೊಟ್ಟಿದೆ. ಸಾಂಗ್ಸ್, ಸಿನಿಮಾ ಎಲ್ಲವೂ ಚೆನ್ನಾಗಿ ಮೂಡಿಬಂದಿದೆ. ಹಿರಿಯ ತಂತ್ರ್ಯಜ್ಞರ ಜೊತೆ ಕೆಲಸ ಮಾಡಿರುವುದು ದೊಡ್ಡ ಅನುಭವ ಎಂದರು. ಸದ್ಯ ದಲ್ಲೇ ಈ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. 

Latest Videos
Follow Us:
Download App:
  • android
  • ios