ಸಿನಿಮಾ ಸ್ಟಾರ್ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಕೆ ಸರಿಯಲ್ಲ; ನಟ ಚೇತನ್
'ಚಲನಚಿತ್ರ ಸ್ಟಾರ್ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಬಾರದು' ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

'ಚಲನಚಿತ್ರ ಸ್ಟಾರ್ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಬಾರದು' ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಇತ್ತೀಚಿಗಷ್ಟೆ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣ ಆಗಿದೆ. ಅನೇಕ ವರ್ಷಗಳ ಬಳಿಕ ಸ್ಮಾರಕ ನಿರ್ಮಾಣ ಆಗಿದ್ದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಇದು ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಆದರೆ ಸ್ಮಾರಕ ಉದ್ಘಾಟನೆ ಆದ ಬೆನ್ನಲ್ಲೇ ಆ ದಿನಗಳು ಖ್ಯಾತಿಯ ನಟ ಚೇತನ್ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚೇತನ್ ಪೋಸ್ಟ್ ಮಾಡಿದ್ದಾರೆ. ‘ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್ಗಳು ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ. ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತು ಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಒಳ್ಳೆಯ ಉಪಯೋಗಕ್ಕೆ ಬರುತ್ತವೆ’ ಎಂದು ಚೇತನ್ ಹೇಳಿದ್ದಾರೆ.
Pathaan ಕೇಸರಿ ಬಿಕಿನಿ ವಿವಾದ; ಬಸವಣ್ಣ, ಬುದ್ದ ಅನೇಕರು ಹಾಕಿದ್ದಾರೆ, ಹಿಂದುತ್ವದ ಬಣ್ಣ ಆಗಲಾರದು; ನಟ ಚೇತನ್
ಅದಾನಿ ವಿರುದ್ಧ ಆಕ್ರೋಶ
'ಇಡೀ ಭಾರತ ದೇಶವು ಕೋವಿಡ್ ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿದ್ದಾಗ ಗೌತಮ್ ಅದಾನಿಯವರು ಏಷ್ಯಾದ ಅತೀ ಶ್ರೀಮಂತ ಪಟ್ಟಿಯಲ್ಲಿರುತ್ತಾರೆ. ಈಗ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಗೌತಮ್ ಅದಾನಿಯವರ ವಂಚನೆಯನ್ನು ಬಯಲಿಗೆಳೆದಿದೆ. ತನ್ನ ಮೇಲಿನ ಆರೋಪವನ್ನು ‘ಭಾರತದ ಮೇಲಿನ ದಾಳಿ’ ಎಂದು ಅವರು ದುರಹಂಕಾರದಿಂದ ಹೇಳಿಕೊಂಡು ವಂಚನೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ' ಎಂದು ಹೇಳಿದ್ದಾರೆ.
'ಅದಾನಿಯವರು ಭಾರತವನ್ನು ಕೆಟ್ಟ ರೀತಿಯಲ್ಲಿ ಪ್ರತಿನಿಧಿಸುತ್ತಿದ್ದಾರೆ, ಇವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು' ಎಂದು ಚೇತನ್ ಅಹಿಂಸ ಒತ್ತಾಯಿಸಿದ್ದಾರೆ.
ನಟ ಚೇತನ್ ಹೇಳಿಕೆ ಪರ-ವಿರೋಧ ಚರ್ಚೆಯಾಗುತ್ತಿದೆ. ಅನೇಕರು ಚೇತನ್ ಪರ ಮಾತನಾದ್ರೆ ಇನ್ನು ಕೆಲವರು ಚೇತನ್ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಚೇತನ್ ಅವನೇಕ ವಿಚಾರಗಳ ಬಗ್ಗೆ ಆಗಾಗ ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಇದೀಗ ಸಿನಿಮಾ ಸ್ಟಾರ್ ಗಳ ಸ್ಮಾರಕ ವಿಚಾರವಾಗಿ ನೀಡಿರುವ ಹೇಳಿಕೆ ಹೊಸ ಚರ್ಚೆಗೆ ಕಾಣವಾಗಿದೆ.