Asianet Suvarna News Asianet Suvarna News
breaking news image

ದರ್ಶನ್‌ಗೆ ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ತಾಳೆ; ಫ್ಯಾನ್ಸ್‌ಗೆ ವಿಜಯಲಕ್ಷ್ಮೀ ಶಾಂತಿ ಪಾಠ

ನಟ ದರ್ಶನ್ ಅವರಿಗೆ ಕೇಡು ಬಯಸಿದವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ. ಆದರೆ, ದರ್ಶನ್ ಅಭಿಮಾನಿಗಳು ತಾಳ್ಮೆ ಕಳೆದುಕೊಂಡು ಮಾತನಾಡದೇ ಶಾಂತಿಯಿಂದ ಇರಬೇಕು ಎಂದು ವಿಜಯಲಕ್ಷ್ಮೀ ದರ್ಶನ್ ಹೇಳಿದ್ದಾರೆ.

actor darshan harm wishers will get punishment from god chamundeshwari  says Vijayalakshmi sat
Author
First Published Jun 26, 2024, 7:03 PM IST

ಬೆಂಗಳೂರು (ಜೂ.26): ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ಅಭಿಮಾನಿಗಳೆಂದರೆ ಅಪಾರ ಪ್ರೀತಿ. ನಿಮ್ಮನ್ನು 'ಸೆಲೆಬ್ರಿಟಿಗಳಾಗಿ' ತಮ್ಮ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ ಎಂದು ಸಂದೇಶವನ್ನು ಆರಂಭಿಸುತ್ತಲೇ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಅಭಿಮಾನಿಗಳಿಗೆ ಶಾಂತಿ ಪಾಠವನ್ನು ಸಾರಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಜನರು ನಾಲ್ಕು ದಿನಗಳನ್ನು ಕಳೆದಿದ್ದಾರೆ. ಆದರೆ, ಗಂಡನ ಮೇಲೆ ಆರೋಪ ಬಂದ ಹಿನ್ನೆಲೆಯಲ್ಲಿಯೇ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ವಿಜಯಲಕ್ಷ್ಮೀ ದರ್ಶನ್ ಅವರು ಈಗ ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಜೊತೆಗೆ ದರ್ಶನ್ ಅಭಿಮಾನಿಗಳಿಗೆ ಶಾಂತಿ ಪಾಠವನ್ನೂ ಮಾಡಿದ್ದಾರೆ.

ದರ್ಶನ್ ಗ್ಯಾಂಗ್ ಸಹಚರರ ಕೈಗೆ ಕಬ್ಬಿಣದ ಸರಪಳಿ, ಸುತ್ತಲೂ ಖಾಕಿಪಡೆ; ನೆನಪಾಗುತ್ತೆ ಅಂಬರೀಶ್ ಅಂತ ಸಿನಿಮಾ ದೃಶ್ಯ!

ಪೋಸ್ಟ್‌ನಲ್ಲಿ ಹೀಗಿದೆ ನೋಡಿ.. 
'ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು" ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನ ಅವರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ' ಎಂದು ಪೋಸ್ಟ್ ಅನ್ನು ಬರೆದುಕೊಂಡದ್ದಾರೆ. ಇದನ್ನು ಇಂಗ್ಲೀಷ್‌ನಲ್ಲಿಯೂ ತರ್ಜುಮೆ ಮಾಡಿ ಮತ್ತೊಂದು ಪೋಸ್ಟ್ ಅನ್ನೂ ಹಂಚಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios