Asianet Suvarna News Asianet Suvarna News

ದೂದ್‌ಪೇಡಾ ದಿಗಂತ್‌ಗೆ 'ಪೌಡರ್' ಹಾಕೋದು ಮುಂದೂಡಿದ ಚಿತ್ರತಂಡ; ಯಾಕೆ ಈ ನಿರ್ಧಾರ?

ಮೊದಲೇ ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಬಾಕ್ಸಾಫೀಸ್ ವಾರ್ ಬೇಡ ಎಂಬುದನ್ನು ಅರಿತ ಕೆಆರ್ ಜಿ ಸಂಸ್ಥಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ. 

actor diganth lead movie powder to release date postponed for one week later srb
Author
First Published Jul 30, 2024, 8:51 PM IST | Last Updated Jul 30, 2024, 8:56 PM IST

ಕಾರ್ತಿಕ್ ಗೌಡ ಒಡೆತನದ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ 'ಪೌಂಡರ್'.  ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ ಪ್ರಚಾರ ಕಾರ್ಯ ಕೂಡ ನಡೆಸಿತ್ತು. ಆದರೆ ಈಗ ಪೌಡರ್ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ. ಕನ್ನಡ ಸಿನಿಮಾಗಳ ಉಳಿವಿಗಾಗಿ ಕೆಆರ್ ಜಿ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ.

ಆಗಸ್ಟ್ 15ರಂದು ಸಾಕಷ್ಟು  ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. ಒಂದೇ ದಿನ ಸಾಕಷ್ಟು ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸಾಫೀಸ್ ನಲ್ಲಿ ಕ್ಲ್ಯಾಷ್ ಆಗಲಿದೆ. ಕಲೆಕ್ಷನ್ ಮೇಲೆಯೂ ಹೊಡೆತ ಬೀಳಲಿದೆ. 

ಕೊಲ್ಲೂರು ಪ್ರಸಾದಕ್ಕೂ ಮನೆಯೂಟ ಅರ್ಜಿ ವಾಪಸಾತಿಗೂ ಏನಿದೆ ಲಿಂಕ್? ಯಾಕೆ ಚರ್ಚೆಯಾಗ್ತಿದೆ..?

ಮೊದಲೇ ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಬಾಕ್ಸಾಫೀಸ್ ವಾರ್ ಬೇಡ ಎಂಬುದನ್ನು ಅರಿತ ಕೆಆರ್ ಜಿ ಸಂಸ್ಥಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ. 
ಜನಾರ್ದನ್ ಚಿಕ್ಕಣ್ಣ ನಿರ್ದೇಶನದ 'ಪೌಡರ್' ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. 

ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. ಈ ಚಿತ್ರವು ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದ್ದು, ಬಿಡುಗಡೆ ಬಳಿಕ ಏನಾಗಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. 

ತಣ್ಣೀರ್ ಬಾವಿ ಬಗ್ಗೆ ಹೇಳಿ ಆ್ಯಂಕರ್​ ಅನುಶ್ರೀ-ರಾಜ್ ಬಿ ಶೆಟ್ಟಿ ನಕ್ಕಿದ್ದು ಯಾಕೆ? ಏನೋ ಇದೆ ಮ್ಯಾಟರ್...!

Latest Videos
Follow Us:
Download App:
  • android
  • ios