ಇದ್ದಕ್ಕಿದ್ದಂತೆ ನಟ ದರ್ಶನ್‌ ತೂಗುದೀಪ ಅವರ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಅವರು ಪ್ರತ್ಯಕ್ಷರಾದರು. ಕೆಲ ವರ್ಷಗಳ ಕಾಲ ಅಜ್ಷಾತವಾಸವಾಸದಲ್ಲಿ ಇದ್ದ ಈ ಮ್ಯಾನೇಜರ್‌ ಏಕಾಏಕಿ ಮಾಧ್ಯಮದ ಮುಂದೆ ಬಂದು, ದರ್ಶನ್‌ ಅವರನ್ನು ಹೊಗಳಿದ್ದರು. ಇದಕ್ಕೆ ಈಗ ದರ್ಶನ್‌ ಸಹೋದರ ದಿನಕರ್‌ ತೂಗುದೀಪ ತಿರುಗೇಟು ಕೊಟ್ಟರು. 

ಇತ್ತೀಚೆಗೆ ನಟ ದರ್ಶನ್‌ ತೂಗುದೀಪ ಅವರ ಮ್ಯಾನೇಜರ್‌ ಆಗಿರುವ ಮಲ್ಲಿಕಾರ್ಜುನ್‌ ಅವರು ಸುದ್ದಿಗೋಷ್ಠಿ ಮಾಡಿ ಯಾಕೆ ಇಷ್ಟು ವರ್ಷ ಕಾಣಿಸಿಕೊಂಡಿರಲಿಲ್ಲ ಎಂದು ಹೇಳಿದ್ದರು. ಆದರೆ ಇವರು ನಂಬಿಕೆ ದ್ರೋಹಿ ಎಂದು ದಿನಕರ್‌ ತೂಗುದೀಪ ಅವರು ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ದಿನಕರ್‌ ತೂಗುದೀಪ ಹೇಳಿದ್ದೇನು?

ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಎಂಬ ಫ್ರಾಡ್ ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ ನನ್ನ ಹೆಸರನ್ನು, ದರ್ಶನ್ ಅವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿ, ನಮ್ಮ ಪರಿಚಯದವರ, ಸ್ನೇಹಿತರ ಹಾಗೂ ನಮ್ಮ ಸಂಪರ್ಕದಲ್ಲಿದ್ದ ಅನೇಕ ವ್ಯಕ್ತಿಗಳ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದವನು ಈಗ ದಿಢೀರನೆ ಪ್ರತ್ಯಕ್ಷನಾಗಿ 16-04-2026 ರಂದು ಪತ್ರಿಕಾಗೋಷ್ಠಿ ನಡೆಸಿರುತ್ತಾನೆ. ಅದರಲ್ಲಿ ಜನರನ್ನು ನಂಬಿಸಲು ತನಗೆ ಬೇಕಾದಂತೆ ಹೇಳಿಕೆ ಕೊಟ್ಟಿರುತ್ತಾನೆ.

ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ವಾಯಿತು ಎಂದು ಹೇಳಿರುವುದಿಲ್ಲ ಈತ ಮಹಾ ಮೋಸಗಾರ. ಆ ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ಅವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿರುತ್ತಾನೆ.

ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು, ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು ಇವನನ್ನು ಯಾರು ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ಅವರು ಯಾರು ಈತನನ್ನು ಸೇರಿಸುವುದಿಲ್ಲ.

ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ. ಈತ ಎಲ್ಲಾದರೂ ನಮ್ಮಗಳ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ... ದರ್ಶನ್ ಅವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರ ವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗ ಬೇಡಿ.

ಇಂತಿ ನಿಮ್ಮ

ದಿನಕರ್ ತೂಗುದೀಪ