Jaggesh: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನವರಸ ನಾಯಕ

ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿರುವ ಮಹಾರಾಷ್ಟ್ರದ ಎಂಇಎಸ್‌ ಕಾರ್ಯಕರ್ತರ ವಿರುದ್ಧ ಸ್ಯಾಂಡಲ್‌ವುಡ್‌ನ ನವರಸ ನಾಯಕ ಜಗ್ಗೇಶ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿ ಟ್ವೀಟರ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

Actor Jaggesh Outraged in mes Activists for kannada flag set on fire gvd

ಕನ್ನಡ ಧ್ವಜಕ್ಕೆ (Kannada Flag) ಬೆಂಕಿ ಇಟ್ಟಿರುವ ಮಹಾರಾಷ್ಟ್ರದ ಎಂಇಎಸ್‌ ಕಾರ್ಯಕರ್ತರ ವಿರುದ್ಧ ಸ್ಯಾಂಡಲ್‌ವುಡ್‌ನ ನವರಸ ನಾಯಕ ಜಗ್ಗೇಶ್‌ (Jaggesh) ತೀವ್ರ ಆಕ್ರೋಶ ವ್ಯಕ್ತಪಡಿಸಿ ಟ್ವೀಟರ್‌ನಲ್ಲಿ (Twitter) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ ಕೃತ್ಯ ಕೈಗೊಂಡವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗೃಹಮಂತ್ರಿ ಆರಗ ಜ್ಞಾನೇಂದ್ರ (Araga Jnanendra) ಅವರನ್ನು ಒತ್ತಾಯಿಸಿದ್ದಾರೆ. ಜೊತೆಗೆ ಬಿಜೆಪಿ ಮುಖಂಡರು ಆಗಿರುವ ಜಗ್ಗೇಶ್‌ ಅವರು ಸೋಷಿಯಲ್ ಮೀಡಿಯಾ (Social  Media) ಮೂಲಕ ಎಂಇಎಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಜಗ್ಗೇಶ್ ಅವರು 'ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ. ಹಾಗೂ ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಮುಂದುವರೆದು 'ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ' ಎಂದು ಬರೆದುಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಇಡುತ್ತಿರುವ ಚಿತ್ರವನ್ನು ಜಗ್ಗೇಶ್ ತಮ್ಮ ಟ್ವೀಟರ್‌ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಎಂಇಎಸ್‌ನವರ ಈ ಕ್ರಮಕ್ಕೆ ಹಲವರು ಟೀಕೆ ವ್ಯಕ್ತಪಡಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಖಂಡನೆ ವ್ಯಕ್ತವಾಗಿದೆ.

ತೋತಾಪುರಿ ಸಿನಿಮಾ ಪ್ಯಾನ್ ಇಂಡಿಯಾವೋ, ಅಲ್ಲವೋ? ನೆಟ್ಟಿಗರು ಕೇಳ್ತಿದ್ದಾರೆ

ನಡೆದಿದ್ದೇನು: ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ದೀಪಕ‌ ದಳವಿಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಪುಂಡತನ ಮೆರೆದಿದ್ದರು. ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ಸಮಯದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿತನ ಮಾಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಜಗ್ಗೇಶ್ ಅವರು 'ತೋತಾಪುರಿ' ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, 'ನೀರ್‌ದೋಸೆ' (Neer Dose) ಚಿತ್ರದ ಮೂಲಕ ಯಶಸ್ಸು ಕಂಡ ನಿರ್ದೇಶಕ ವಿಜಯ್​ ಪ್ರಸಾದ್ (Vijay Prasad) ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹಾಗೂ ಚಿತ್ರದಲ್ಲಿ ಧನಂಜಯ್ 'ನಾರಾಯಣ್ ಪಿಳ್ಳೈ' ಆಗಿ ನಟಿಸುತ್ತಿದ್ದಾರೆ. 'ಸುರೇಶ್ ಆರ್ಟ್ಸ್‌' ಬ್ಯಾನರ್‌ನ ಕೆ.ಎ. ಸುರೇಶ್ (K.A.Sueresh) ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜಗ್ಗೇಶ್ ನಟನೆಯ 'ಎದ್ದೇಳು ಮಂಜುನಾಥ' (Eddelu Manjunatha), 'ನೀರ್‌ ದೋಸೆ' (Neer Dose) ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ (Anoop Seelin) 'ತೋತಾಪುರಿ'ಗೂ ಸಂಗೀತ ನಿರ್ದೇಶನ ಮಾಡಿದ್ದು, ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. 

ಬಿಡುಗಡೆಗೂ ಮುನ್ನವೇ ತೋತಾಪುರಿ ಹೊಸ ದಾಖಲೆ!

ನಿರಂಜನ್ ಬಾಬು ಕ್ಯಾಮರಾ ಕೈ ಚಳಕ, ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದ್ದು, ಅದಿತಿ ಪ್ರಭುದೇವ, ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರದ ನಾಯಕಿ ಅದಿತಿ ಪ್ರಭುದೇವ (Aditi Prabhudeva) ಮುಸ್ಲಿಂ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸುಮನ್ ರಂಗನಾಥ್ (Suman Ranganath) ಕ್ರಿಶ್ಚಿಯನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ದತ್ತಣ್ಣ (Dattanna) ಅವರು ಜಗ್ಗೇಶ್ ಅವರ ಮಾವನ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಒಟ್ಟಾರೆಯಾಗಿ 'ನೀರ್‌ದೋಸೆ' ಚಿತ್ರತಂಡ ಈ ಚಿತ್ರದ ತಾರಾಬಳಗದಲ್ಲಿದೆ.
 

Latest Videos
Follow Us:
Download App:
  • android
  • ios