ವಾಲ್ಮಿಕಿ ಜಾತ್ರೆಗೆ ಗೈರಾದ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಪ್ಪಿಕೊಂಡ ಕಾರ್ಯಕ್ರಮಗಳನ್ನು ಮಿಸ್ ಮಾಡಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದವರಲ್ಲ. ಆದರೆ ವಾಲ್ಮಿಕಿ ಜಾತ್ರೆಗೆ ಗೈರಾಗಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾಣವಾಗಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಲ್ಮಿಕಿ ಜಾತ್ರೆಗೆ ಸುದೀಪ್ ಹಾಜರಿ ಹಾಕಿಲ್ಲ. ಕಿಚ್ಚ ಬಂದಿಲ್ಲ ಎಂದು ರೊಚ್ಚಿಗೆದ್ದ ಅಭಿಮಾನಿಗಳು ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಸುದೀಪ್ ಕಾರ್ಯಕ್ರಮಕ್ಕೆ ಗೈರಾಗಿದ್ದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಸುದೀಪ್ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಸುದೀಪ್ ಬರ್ತಾರೆ ಎಂದು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ಸುದೀಪ್ ಬಗ್ಗೆ ಘೋಷಣೆ ಕೂಗುತ್ತಿದ್ದರು. ಆದರೆ ಕಿಚ್ಚ ಎಂಟ್ರಿ ಕೊಟ್ಟಿಲ್ಲ. ವಾಲ್ಮೀಕಿ ಪೀಠಾಧಿಪತಿ ಪ್ರಸನ್ನಾನಂದಪುರಿ ಸ್ವಾಮೀಜಿ ಶಾಂತಿಯಿಂದ ಇರುವಂತೆ ಕೇಳಿಕೊಂಡರು. ಅಷ್ಟೆಯಲ್ಲದೇ ಸುದೀಪ್ ಬರ್ತಿದ್ದಾರೆ ಎನ್ನುವ ಭರವಸೆ ಕೂಡ ನೀಡಿದರು. ಆದರೆ ಕಾರ್ಯಕ್ರಮ ಮುಗಿಯುತ್ತಾ ಬಂದರೂ ಸುದೀಪ್ ಬರದೇ ಇರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಯಿತು. ಸಿಟ್ಟಿಗೆದ್ದ ಅಭಿಮಾನಿಗಳು ಕುರ್ಚಿಗಳನ್ನು ಒಡೆದು ಪುಡಿಪುಡಿ ಮಾಡಿದರು.
Sudeep: ನನ್ನ ಸೂಪರ್ ಹೀರೋ...; ಚಿತ್ರರಂಗದಲ್ಲಿ 27 ವರ್ಷ ಪೂರೈಸಿದ ಕಿಚ್ಚನಿಗೆ ಪ್ರಶಾಂತ್ ಸಂಬರ್ಗಿ ವಿಶೇಷ ವಿಶ್
ಕಿಚ್ಚನ ಸ್ಪಷ್ಟನೆ
ಈ ಬಗ್ಗೆ ಗೊತ್ತಾಗುತ್ತಿದ್ದಂತೆ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ಸ್ನೇಹಿತರಿಗೆ ನಮಸ್ಕಾರ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ, ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಅತೀವ ಆಸೆ . ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತರೀತಿಯಿಂದ ವರ್ತಿಸಿ. ಪ್ರೀತಿಯೊಂದಿಗೆ ನಿಮ್ಮ ಕಿಚ್ಚ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
27 ವರ್ಷಗಳ ಸಿನಿ ಜರ್ನಿ ಪೂರೈಸಿದ ಸುದೀಪ್: ಕಿಚ್ಚನ ಮೊದಲ ಸಿನಿಮಾ ಬಗ್ಗೆ ನಿಮಗೆ ಗೊತ್ತಾ?
ಸುದೀಪ್ ತಂದೆಗೆ ಆಹ್ವಾನ
ಸುದೀಪ್ ಟ್ವೀಟ್ ಮಾಡುತ್ತಿದ್ದಂತೆ ಅಹ್ವಾನ ನೀಡಿದ ಫೋಟೋ ವೈರಲ್ ಆಗುತ್ತಿದೆ. ಸ್ವತಃ ಪ್ರಸನ್ನಾನಂದಪುರಿ ಸ್ವಾಮೀಜಿ ಅವರೇ ಕಿಚ್ಚನ ಮನೆಗೆ ಹೋಗಿ ಆಹ್ವಾನ ನೀಡಿದ್ದ ಫೋಟೋ ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ನೀಡಿದ್ದರು. ಈ ಫೋಟೋಗಳು ವೈರಲ್ ಆಗಿವೆ.
