‘ಹೆಡ್ ಬುಷ್’ ಚಿತ್ರದ ಮುಖ್ಯಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಎರಡು ಕೋಟಿ ವೆಚ್ಚದಲ್ಲಿ ಸೆಟ್‌ ನಿರ್ಮಾಣ

ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಲು ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರತಂಡ ಸೇರಿಕೊಳ್ಳುತ್ತಿದ್ದಾರೆ. ಈಗಾಗಲೇ ವಸಿಷ್ಠ ಸಿಂಹ, ಲೂಸ್ ಮಾದ ಯೋಗೀಶ್, ಶ್ರುತಿ ಹರಿಹರನ್, ಬಾಲು ನಾಗೇಂದ್ರ, ರಘು ಮುಖರ್ಜಿ
ಚಿತ್ರದಲ್ಲಿ ನಟಿಸುತ್ತಿದ್ದು, ಇದನ್ನೊಂದು ಮಲ್ಟಿಸ್ಟಾರ್ ಸಿನಿಮಾ ಆಗಿಸುತ್ತಿದ್ದಾರೆ.

ನಿರ್ದೇಶಕ ಶೂನ್ಯ. ಭೂಗತ ಲೋಕದ ಕತೆ ಇದಾಗಿದ್ದು, ಇಲ್ಲಿ ಧನಂಜಯ್ ಅವರು ಎಂ ಪಿ ಜಯರಾಜ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಗ್ನಿ ಶ್ರೀಧರ್ ಈ ಚಿತ್ರಕ್ಕೆ ಕತೆ ಬರೆದಿದ್ದಾರೆ. ತೆಲುಗಿನ ‘ಆರ್‌ಎಕ್‌ಸ್ 100’ ಚಿತ್ರದ ನಾಯಕಿ ಪಾಯಲ್ ರಜಪೂತ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ರಾಣಾ ಫಸ್ಟ್‌ ಲುಕ್, ಟೀಸರ್ ಬಿಡುಗಡೆ ಮಾಡಿದ ಉಪೇಂದ್ರ

ಚಿತ್ರದ ಮೇಕಿಂಗ್ ಅದ್ದೂರಿಯಾಗಿ ಮೂಡಿ ಬರಲಿದ್ದು, ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಕೋಟಿ ವೆಚ್ಚದಲ್ಲಿ ಸೆಟ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 70-80ರ ದಶಕದ ವಾತಾವರಣ ಮರು ಸೃಷ್ಟಿಸಲು ಕಲಾ ನಿರ್ದೇಶಕ ಬಾದಲ್ ನಂಜುಂಡಸ್ವಾಮಿ ವಿಶೇಷವಾದ ಸೆಟ್‌ಗಳನ್ನು ಹಾಕುತ್ತಿದ್ದಾರೆ.