Asianet Suvarna News Asianet Suvarna News

Puneeth Rajkumar: ಅಪ್ಪು ಕನಸಿನ 'ಗಂಧದ ಗುಡಿ'​ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ ನೀಡಿದ ಶಿವಣ್ಣ

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸಕ್ಕೆ ಶಿವಣ್ಣ ಪತ್ನಿ ಗೀತಾ ಅವರೊಂದಿಗೆ ತೆರಳಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ 'ಗಂಧದ ಗುಡಿ' ಸಾಕ್ಷ್ಯ ಚಿತ್ರದ ಟೀಸರ್ ಟೈಟಲ್​ ಬಿಡುಗಡೆಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. 

actor shivarajkumar invites CM Basavaraj Bommai to puneeth documentary title release program gvd
Author
Bangalore, First Published Dec 4, 2021, 6:14 PM IST

ಸ್ಯಾಂಡಲ್‌ವುಡ್‌ನ (Sandalwood) ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ನಮ್ಮ ರಾಜ್ಯದಲ್ಲಿರುವ ವನ್ಯಜೀವಿಗಳು ಹಾಗೂ ಅರಣ್ಯ ಸಂಪತ್ತಿನ ಕುರಿತಾಗಿ ಪಿಆರ್​​​​​ಕೆ ಬ್ಯಾನರ್​ ಅಡಿಯಲ್ಲಿ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿದ್ದಾರೆ. ಅದಕ್ಕೆ 'ಗಂಧದ ಗುಡಿ' (Gandhada Gudi) ಎಂದು ಶೀರ್ಷಿಕೆ ಇಡಲಾಗಿದೆ. ಡಿಸೆಂಬರ್​ 6 ರಂದು 'ಅಪ್ಪು ಅವರ ಅಮೋಘವಾದ ಕನಸಿನ ಪಯಣ. ಹಿಂದೆಂದೂ ಕಾಣದ ರೋಮಾಂಚಕ ಅನುಭವ' ಸಾಕ್ಷ್ಯ ಚಿತ್ರದ ಟೈಟಲ್​​​ ಟೀಸರ್ (Title Teaser) ಬಿಡುಗಡೆ ಮಾಡುವುದಾಗಿ ಪುನೀತ್ ಪತ್ನಿ ಅಶ್ವಿನಿ ನಿನ್ನೆಯಷ್ಟೇ ತಿಳಿಸಿದ್ದರು. ಇದೀಗ ಟೈಟಲ್​ ಟೀಸರ್​ ಬಿಡುಗಡೆಗೆ ಡಾ. ರಾಜ್​ಕುಮಾರ್​ (Dr.Rajkumar) ಕುಟುಂಬದವರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಹೌದು! ಸಾಕ್ಷ್ಯ ಚಿತ್ರದ ಟೈಟಲ್​ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು (Basavaraj Bommai) ನಟ ಶಿವರಾಜ್​ ಕುಮಾರ್ (Shiva Rajkumar) ದಂಪತಿ ಆಹ್ವಾನಿಸಿದ್ದಾರೆ. 'ಗಂಧದ ಗುಡಿ' ಸಾಕ್ಷ್ಯ ಚಿತ್ರ ಪಿಆರ್​ಕೆ ಆಡಿಯೋ (PRK Audio) ಮೂಲಕ ಬಿಡುಗಡೆಯಾಗಲಿದೆ. ಹೀಗಾಗಿ ಇಂದು ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸಕ್ಕೆ ಶಿವಣ್ಣ ಪತ್ನಿ ಗೀತಾ ಅವರೊಂದಿಗೆ ತೆರಳಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ 'ಗಂಧದ ಗುಡಿ' ಸಾಕ್ಷ್ಯ ಚಿತ್ರದ ಟೀಸರ್ ಟೈಟಲ್​ ಬಿಡುಗಡೆಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದು ಪುನೀತ್ ಅವರ ಕನಸಿನ ಪ್ರಾಜೆಕ್ಟ್ ಆಗಿದ್ದು, ಎಲ್ಲರಲ್ಲೂ ಹೆಚ್ಚಿನ ನಿರೀಕ್ಷೆ ಇದೆ. 

Puneeth Rajkumar: ಅಪ್ಪು ಡ್ರೀಮ್ ಪಾಜೆಕ್ಟ್ ಟೈಟಲ್​ ಟೀಸರ್ ಬಿಡುಗಡೆ ದಿನಾಂಕ ಘೋಷಿಸಿದ ಅಶ್ವಿನಿ

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟರ್ (Twitter) ಖಾತೆಯಲ್ಲಿ 'ಇಂದು ಬೆಂಗಳೂರಿನಲ್ಲಿ ಹಿರಿಯ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ 'ಪುನೀತ್ ನಮನ' (Puneeth Namana) ಕಾರ್ಯಕ್ರಮದಲ್ಲಿ ಸಿಎಂ ಅವರು ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರವನ್ನು ಪುನೀತ್‌ಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ (Karnataka Ratna Award) ನೀಡುವುದಾಗಿ ಘೋಷಿಸಿದ್ದರು. ಅಲ್ಲದೇ ಅಪ್ಪು ಪತ್ನಿ ಅಶ್ವಿನಿ ಅವರಿಗೆ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನವನ್ನು ಹೇಳಿದ್ದರು.

'ವೈಲ್ಡ್​ ಕರ್ನಾಟಕ' ಡಾಕ್ಯುಮೆಂಟರಿ (Wild Karnataka Documentary) ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ (Karnataka) ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾ ಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು. ಇದಕ್ಕೆ 'ಗಂಧದಗುಡಿ' ಎಂದು ಹೆಸರಿಡಲಾಗಿತ್ತು. ಅಪ್ಪು ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ನವೆಂಬರ್ 1ರಂದು ರಿಲೀಸ್​ ಆಗಬೇಕಿತ್ತು. ನವೆಂಬರ್​ 1 ಕನ್ನಡ ರಾಜ್ಯೋತ್ಸವ ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಅಕ್ಟೋಬರ್​ 29ರಂದು ಪುನೀತ್​ ನಿಧನ ಹೊಂದಿದ್ದರು. ಹೀಗಾಗಿ ಆ ಟೀಸರ್​ ರಿಲೀಸ್​ ಆಗಿಲ್ಲ.

Puneeth Rajkumar: ಅಪ್ಪು-ಅಶ್ವಿನಿ 22ನೇ ವಿವಾಹ ವಾರ್ಷಿಕೋತ್ಸವ! ಆದರೆ...

ಇನ್ನು, ಅಪ್ಪು ಕನಸನ್ನು ನನಸು ಮಾಡುವ ಕುರಿತು ಕೆಲ ದಿನಗಳ ಹಿಂದಷ್ಟೇ ಟ್ವೀಟ್‌ (Tweet) ಮಾಡಿದ್ದ ಅಶ್ವಿನಿ, 'ಅಪ್ಪು ಅವರ ಕನಸೊಂದು ನವೆಂಬರ್‌ 1ರಂದು ಬೆಳಕು ಕಾಣಬೇಕಿತ್ತು. ಆದರೆ ಆ ಕನಸಿಗಿದು ಅಲ್ಪ ವಿರಾಮವಷ್ಟೆ. ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ' ಎಂದು ಬರೆದುಕೊಂಡಿದ್ದರು. ಇನ್ನು ಪುನೀತ್ ಸಾಯುವ ಮೊದಲು, 'ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ' ಎಂದು ಪೋಸ್ಟ್ ಮಾಡಿದ್ದರು. 
 

Follow Us:
Download App:
  • android
  • ios