Asianet Suvarna News Asianet Suvarna News

ಸ್ಯಾಂಡಲ್‌ವುಡ್‌ನಲ್ಲಿ'ಗಲ್ಲಿ ಬಾಯ್' ಹವಾ; ಲಿಪ್‌‌ಕಿಸ್ ಮಾಡಿ ಗಮನ ಸೆಳೆದ ನಟ ಶ್ರೇಯಸ್

 ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ರಾಣ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಸದ್ಯ ರಾಣ ಸಿನಿಮಾದಿಂದ ಗಲ್ಲಿ ಬಾಯ್ ಹಾಡು ರಿಲೀಸ್ ಆಗಿದ್ದು ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

Actor Shreyas starrer rana movie gully boy song released sgk
Author
First Published Oct 2, 2022, 1:24 PM IST

ಸ್ಯಾಂಡಲ್‌ವುಡ್‌ನಲ್ಲಿ ಗಲ್ಲಿ ಬಾಯ್ ಹುಡುಗ ಸಖತ್ ಸದ್ದು ಮಾಡುತ್ತಿದ್ದಾನೆ. ಸ್ಯಾಂಡಲ್ ವುಡ್ ನಲ್ಲಿ ಗಲ್ಲಿ ಬಾಯ್  ಅಂತ ಅಚ್ಚರಿ ಆಗುತ್ತಿದಿಯಾ? ಹೌದು, ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ರಾಣ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಸದ್ಯ ರಾಣ ಸಿನಿಮಾದಿಂದ ಗಲ್ಲಿ ಬಾಯ್ ಹಾಡು ರಿಲೀಸ್ ಆಗಿದ್ದು ಪ್ರೇಕ್ಷಕರ ಗಮನ ಸೆಳೆಯುತ್ತಿದೆ.   ಗಲ್ಲಿ ಬಾಯ್ ಸಾಲಿನ ಹಾಡು ಇದಾಗಿದ್ದು ನಿರ್ದೇಶಕ ಪ್ರೇಮ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ನಂದಕಿಶೋರ್ ಸಾರಥ್ಯದಲ್ಲಿ ರಾಣ ಸಿನಿಮಾ ಮೂಡಿಬರುತ್ತಿದೆ. ಅಂದಹಾಗೆ ಸದ್ಯ ರಿಲೀಸ್ ಆಗಿರುವ ಗಲ್ಲಿ ಬಾಯ್ ಹಾಡು ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿದ್ದಾರೆ. ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. 

ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದ್ದು ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಅದ್ಭುತವಾಗಿ ನೃತ್ಯ ಮಾಡಿದ್ದಾರೆ. ಈ ಹಾಡನ್ನು ರಿಲೀಸ್ ಮಾಡಿ ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು. ಅಂದಹಾಗೆ ರಾಣ ಸಿನಿಮಾ ನವೆಂಬರ್11 ರಿಲೀಸ್ ಆಗುತ್ತಿದೆ. ಈಗಾಗಲೇ ಹಾಡಿನ ಮೂಲಕ ಕುತೂಹಲ ಹೆಚ್ಚಿಸಿರುವ ರಾಣ ಚಿತ್ರ ಹೇಗಿರಲಿದೆ ಎಂದು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. 

ಫುಲ್ ಖದರ್ನಲ್ಲಿದೆ ಶ್ರೇಯಸ್ ಮಂಜು 'ರಾಣಾ'! ಹೇಗಿದೆ ನೋಡಿ ಸಿನಿಮಾ ಟೀಸರ್

ಈ ಬಗ್ಗೆ ಮಾತನಾಡಿರುವ ನಟ ಶ್ರೇಯಸ್, 'ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ, ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಕರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ' ಎಂದು ಹೇಳಿದರು. ಇನ್ನು ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತಾಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ  ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದು ನಾಯಕಿ ರೀಷ್ಮಾ ನಾಣಯ್ಯ ಹೇಳಿದರು. 

ಕಾಸಿರೋರು ಲೆವೆಲ್‌ ಇರೋರ ಸಹವಾಸ ಬೇಡ ಅಂತಾರೆ ನನ್ನ ತಂದೆ: ಶ್ರೇಯಸ್‌ ಕೆ ಮಂಜು

ಇನ್ನು ಪುತ್ರನ ಸಿನಿಮಾದ ಬಗ್ಗೆ ಕೆ ಮಂಜು ಮಾತನಾಡಿ, 'ರಾಣ ಒಂದೊಳ್ಳೆಯ ಕೌಟುಂಬಿಕ ಚಿತ್ರ. ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ' ಎಂದು ಹೇಳಿದರು. ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ  ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು. ಇನ್ನು ಸಿನಿಮಾದಲ್ಲಿ ಕೋಟೆ ಪ್ರಭಾಕರ್, ಅಶೋಕ್ , ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಸೇರಿದಂತೆ ಅನೇಕರು ಹಾಜರಿದ್ದರು. 

Follow Us:
Download App:
  • android
  • ios