ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ್ ಅವರು ಒಂದು ವರ್ಷದ ಮಗಳ ಕ್ಯೂಟ್ ವಿಡಿಯೋಶೂಟ್ ಶೇರ್ ಮಾಡಿದ್ದಾರೆ. ಆದರೆ ನೆಟ್ಟಿಗರು ಹೇಳ್ತಿರೋದೇ ಬೇರೆ. ಏನಂದ್ರು ನೋಡಿ ಅಭಿಮಾನಿಗಳು...
ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ್ (Aditi Prabhudev) ಈಗ ಕೇವಲ ಚಿತ್ರನಟಿ ಮಾತ್ರವಲ್ಲದೇ ಅಪ್ಪಟ ಗೃಹಿಣಿ ಕೂಡ. ಕಿರುತೆರೆ ನಟಿಯಾಗಿ ಬಣ್ಣದ ಬದುಕಿಗೆ ಪದಾರ್ಪಣೆ ಮಾಡಿದ ನಟಿ, ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಇರುವಾಗಲೇ ಹಸೆಮಣೆ ಏರಿದರು. ಅದಿತಿ, ಕೂರ್ಗ್ ಮೂಲದ ಉದ್ಯಮಿ ಯಶಸ್ ಜೊತೆ ದಾಂಪತ್ಯ ಬದುಕನ್ನು ಎಂಜಾಯ್ ಮಾಡ್ತಿದ್ದಾರೆ. ಜೊತೆಗೆ, ರಿಯಾಲಿಟಿ ಷೋಗಳಲ್ಲಿಯೂ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ, ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ ನಟಿ ಸದ್ಯ ಸಂಪೂರ್ಣ ಅಮ್ಮ ಆಗಿದ್ದಾರೆ. ಮಗಳು ನೇಸರಳ ಲಾಲನೆ ಪಾಲನೆಯಲ್ಲಿ ತೊಡಗಿದ್ದಾರೆ. ಕಳೆದ ಏಪ್ರಿಲ್ 4ರಂದು ಅದಿತಿ ಅವರು ಮಗಳ ಮೊದಲ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಈ ಕಾರ್ಯಕ್ರಮಕ್ಕೆ ತಾರಾದಂಡೇ ಹರಿದು ಬಂದಿತ್ತು.
ಈ ಸಂದರ್ಭದಲ್ಲಿ, ಪುಟಾಣಿಯ ವಿಡಿಯೋಶೂಟ್ ಮಾಡಿಸಿದ್ದಾರೆ ನಟಿ ಅದಿತಿ. ಅಮ್ಮನಂತೆಯೇ ಮಗಳು ಕೂಡ ಸಕತ್ ಕ್ಯೂಟ್ ಆಗಿ ಕಾಣಿಸುತ್ತಿದ್ದಾಳೆ. ಇನ್ನು ಮೇಕಪ್ ಮಾಡಿ ಸ್ಟೈಲಿಷ್ ಡ್ರೆಸ್ ಹಾಕಿದ ಮೇಲೆ ಕೇಳಬೇಕೆ? ಇನ್ನೂ ಕ್ಯೂಟ್ ಆಗಿ ಕಾಣಿಸುತ್ತಾಳೆ ನೇಸರ. ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ನೇಸರ ಕಾಣಿಸಿಕೊಂಡಿದ್ದಾಳೆ. ಈ ವಿಡಿಯೋಗೆ ಹಾರ್ಟ್ ಎಮೋಜಿಗಳ ಮಹಾಪೂರವೇ ಹರಿದುಬಂದಿದೆ. ಆದರೆ ಹಲವರು ನಟಿಗೆ ಮನವಿಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಅದೇನೆಂದರೆ, ಇಷ್ಟು ಕ್ಯೂಟ್ ಆಗಿರೋ ಮಗಳಿಗೆ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಸಾರ್ವಜನಿಕವಾಗಿ ಎಕ್ಸ್ಪೋಸ್ ಮಾಡಬೇಡಿ. ಕೆಟ್ಟ ದೃಷ್ಟಿ ಬೀಳುತ್ತದೆ ಎನ್ನುತ್ತಿದ್ದಾರೆ.
ಇನ್ನು ನಟಿಯ ಕುರಿತು ಹೇಳುವುದಾದರೆ, ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ್ (Aditi Prabhudev) ಈಗ ಕೇವಲ ಚಿತ್ರನಟಿ ಮಾತ್ರವಲ್ಲದೇ ಅಪ್ಪಟ ಗೃಹಿಣಿ ಕೂಡ. ಕಿರುತೆರೆ ನಟಿಯಾಗಿ ಬಣ್ಣದ ಬದುಕಿಗೆ ಪದಾರ್ಪಣೆ ಮಾಡಿದ ನಟಿ, ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಇರುವಾಗಲೇ ಹಸೆಮಣೆ ಏರಿದರು. ಅದಿತಿ, ಕೂರ್ಗ್ ಮೂಲದ ಉದ್ಯಮಿ ಯಶಸ್ ಜೊತೆ ದಾಂಪತ್ಯ ಬದುಕನ್ನು ಎಂಜಾಯ್ ಮಾಡ್ತಿದ್ದಾರೆ.
ಸಿನಿಮಾ ಜೊತೆಗೆ ವೈವಾಹಿಕ ಬದುಕನ್ನು ಬ್ಯಾಲೆನ್ಸ್ ಮಾಡ್ತಿದ್ದಾರೆ. ‘ಧೈರ್ಯಂ’, ‘ಬಜಾರ್’, ‘ಸಿಂಗ್’, ‘ಬ್ರಹ್ಮಚಾರಿ’, ‘ಒಂಬತ್ತನೆ ದಿಕ್ಕು’, ‘ತೋತಾಪುರಿ’, ‘ತ್ರಿಬಲ್ ರೈಡಿಂಗ್’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಅದಿತಿ ಪ್ರಭುದೇವ ಅವರು ಸದ್ಯ ಗೃಹಿಣಿಯಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ, ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದವರು. ಇದರ ಹೊರತಾಗಿಯೂ ಅಡುಗೆಯಲ್ಲಿಯೂ ಇವರದ್ದು ಎತ್ತಿದ ಕೈ. ಅಡುಗೆ, ಆರೋಗ್ಯಕ್ಕೆ ಸಂಬಂಧಿಸಿದ ಕೆಲವೊಂದು ಟಿಪ್ಸ್ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ.
