ಸೂರ್ಯಂ, ಬಿನಯಕುದು ಖ್ಯಾತಿಯ ತೆಲುಗು ನಟಿ ಪೂನಂ ಕೌರ್ 36 ಯೂಟ್ಯೂಬ್ ಚಾನಲ್ ಮೇಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅವರ ಘನತೆ, ಗೌರವಕ್ಕೆ ಧಕ್ಕೆ ತರುವಂತಹ ವಿಡಿಯೋಗಳನ್ನು ಯೂಟ್ಯೂಬ್ ಗೆ ಕಿಡಿಗೇಡಿಗಳು ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದ್ದು ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ. 

ಜಮೀರ್ ಅಹ್ಮದ್ ಪುತ್ರ ಸ್ಯಾಂಡಲ್‌ವುಡ್‌ಗೆ

ನಾನು ಕಳೆದ ಒಂದು ವರ್ಷದಿಂದ ಮಾನಸಿಕ ಒತ್ತಡದಲ್ಲಿದ್ದೇನೆ. ಕೆಲವು ಕಿಡಿಗೇಡಿಗಳು ನನ್ನ ವೈಯಕ್ತಿಕ ಜೀವನವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ. ಅಂತವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ. 

ಮದುವೆ ನಂತರ ಸರ್ಪ್ರೈಸ್ ಕೊಟ್ಟ ಐಂದ್ರಿತಾ ರೈ?

ನಾವು ದೂರು ದಾಖಲಿಸಿಕೊಂಡಿದ್ದೇವೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ ಎಂದಿದ್ದಾರೆ. 

ನಟ, ರಾಜಕಾರಣಿ ಪವನ್ ಕಲ್ಯಾಣ್ ವಿರುದ್ಧ ಮಾತನಾಡಿದ್ದಾರೆ ಎನ್ನುವ ಆಡಿಯೋ ಕ್ಲಿಪ್ ಒಂದನ್ನು ಯುಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಇದನ್ನು ಪೂನಂ ತಳ್ಳಿ ಹಾಕಿದ್ದು ಇದು ಕಿಡಿಗೇಡಿಗಳ ಕೃತ್ಯ ಎಂದಿದ್ದಾರೆ.