ಕನ್ನಡ ಚಿತ್ರರಂಗದಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ ಅವರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬುರುಡೇಲಿ ಮೆದುಳೇ ಇಲ್ಲವೆಂದು ಹೇಳಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ (Ramya) ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೂ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ಸಖತ್ ಆಕ್ಟೀವ್ ಆಗಿದ್ದು, ತಮ್ಮ ದಿನಚರಿ ವಿಷಯಗಳ ಬಗ್ಗೆ ಮಾಹಿತಿಯನ್ನು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ 'ಆ ದಿನಗಳು' ಖ್ಯಾತಿಯ ನಟ ಚೇತನ್ ಕುಮಾರ್ (Chetan Kumar)​​ ಅವರ ಹೊಸ ಸಿನಿಮಾ '100 ಕ್ರೋರ್ಸ್' (100 Crores Movie) ಚಿತ್ರದ ಟೀಸರ್ ಲಾಂಚ್ ಮಾಡಿದ್ದರು. ಇದೀಗ ರಮ್ಯಾ ಅವರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಬುರುಡೇಲಿ ಮೆದುಳೇ ಇಲ್ಲವೆಂದು ಹೇಳಿದ್ದಾರೆ.

ಹೌದು! ಇತ್ತೀಚೆಗೆ ಸಂಸದ ತೇಜಸ್ವಿ ಸೂರ್ಯ, ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ನಟಿ ರಮ್ಯಾ ತಮ್ಮದೇ ಶೈಲಿಯಲ್ಲಿ ಇನ್‌ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ, ತೇಜಸ್ವಿ ಸೂರ್ಯ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಭಾಷಣ ಮಾಡುತ್ತಿರುವ ವಿಡಿಯೋದ ಝಲಕ್‌ನ್ನು ಹಂಚಿಕೊಂಡು ಅವರ ತಲೆಯಲ್ಲಿ ಮೆದುಳೇ ಇಲ್ಲವೆಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Sociaal Media) ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. 

Hindu Temples : ದೇವಾಲಯಗಳನ್ನು ಹಿಂದುಗಳ ವಶಕ್ಕೆ ನೀಡಬೇಕು : ತೇಜಸ್ವಿ ಸೂರ್ಯ

ಈ ಹಿಂದೆ ತೇಜಸ್ವಿ ಸೂರ್ಯ ಅವರಿಗೆ 5 ಪದಗಳನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ (BV Srinivas) ವಾಗ್ದಾಳಿ ನಡೆಸಿದ್ದರು. ಓರ್ವ ಸಂಸದರಾಗಿ ತೇಜಸ್ವಿ ಸೂರ್ಯ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಪಾಕಿಸ್ತಾನ, ಮುಸ್ಲಿಂ, ಹಿಂದುತ್ವ, ನರೇಂದ್ರ ಮೋದಿ, ರಾಷ್ಟ್ರೀಯತೆ ಈ 5 ಪದಗಳನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು. ಸಂಸದರಾಗಿ ದ್ವೇಷದ ಭಾಷಣ ಮಾಡುವುದನ್ನು ಮೊದಲು ನಿಲ್ಲಿಸಬೇಕು. ತಮ್ಮದೇ ಕ್ಷೇತ್ರದಲ್ಲಿ ಎರಡು ಬ್ಯಾಂಕ್ ಗಳು ಮುಳುಗಿ ಗ್ರಾಹಕರು ಹಣ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಜನರಲ್ಲಿ ಒಮ್ಮತದ ಭಾವನೆ ಮೂಡಿಸುವ ಬದಲು ಒಡಕು ಮೂಡಿಸಲು ಹೊರಟಿದ್ದಾರೆ. ಸಂಸದರಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಏನಿದು ವಿವಾದ?: ಡಿಸೆಂಬರ್ 25, ಶನಿವಾರ ಉಡುಪಿ ಶ್ರೀಕೃಷ್ಣ ಮಠದ ವಿಶ್ವಾರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದ್ದ ತೇಜಸ್ವಿ ಸೂರ್ಯ, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. 

ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ತೇಜಸ್ವಿ ಸೂರ್ಯ ಬೇಷರತ್ ಆಗಿ ತಮ್ಮ ಹೇಳಿಕೆ ವಾಪಸ್ ಪಡೆದುಕೊಂಡಿದ್ದರು. ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುಜ್ಜೀವನ' ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿಷಾದನೀಯವಾಗಿ ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರ ಟ್ವೀಟ್ (Tweet) ಮಾಡಿದ್ದರು.

Ghar Wapsi: ಮುಸ್ಲಿಂ, ಕ್ರಿಶ್ಚಿಯನ್ನರಿಗೆ ಘರ್‌ ವಾಪಸಿಯಾಗಲು ಕರೆ ಕೊಟ್ಟ ತೇಜಸ್ವಿ ಸೂರ್ಯ!

ಇನ್ನು ರಮ್ಯಾ ರಾಜಕೀಯ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಪಕ್ಷದ ಜೊತೆ ಗುರುತಿಸಿಕೊಂಡು, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಸದೆ ಕೂಡಾ ಆಗಿದ್ದರು. ಹಾಗೂ ಕೆಲ ತಿಂಗಳುಗಳ ಕಾಲ ಕಾಂಗ್ರೆಸ್ ಪಕ್ಷದ ಮುಖ್ಯ ಹುದ್ದೆಯನ್ನು ನಿಭಾಯಿಸಿದ್ದರು. ಅನಂತರ ಆ ಕೆಲಸಕ್ಕೂ ರಾಜೀನಾಮೆ ನೀಡಿ ಎಲ್ಲದರಿಂದ ಅಂತರ ಕಾಯ್ದುಕೊಂಡಿದ್ದಾರೆ. ವಿಶೇಷವಾಗಿ ರಮ್ಯಾ ಚಿತ್ರರಂಗಕ್ಕೆ ಪುನೀತ್​ ರಾಜ್​ಕುಮಾರ್​ ಜತೆಗಿನ ಸಿನಿಮಾ ಮೂಲಕವೇ ಕಮ್​ಬ್ಯಾಕ್​ ಮಾಡಲು ಬಯಸಿದ್ದರು. ಆ ಕುರಿತು ಅಪ್ಪು​ ಜತೆ ಮಾತುಕತೆ ಕೂಡ ನಡೆಯುತ್ತಿತ್ತು. ಅಷ್ಟರಲ್ಲಾಗಲೇ ಪುನೀತ್ ನಿಧನ ಹೊಂದಿದ್ದರು. ಈ ಬಗ್ಗೆ ಅಪ್ಪು ಅವರ ಅಂತಿಮ ದರ್ಶನಕ್ಕೆ ಬಂದಾಗ ರಮ್ಯಾ ಭಾವುಕರಾಗಿ ಮಾತನಾಡಿದ್ದರು.