ಪುಟ್ಟಣ್ಣ ಕಣಗಾಲ್ ನಿರ್ದೇಶನದ ಆರತಿ ಹಾಗೂ ಅಂಬರೀಶ್ ನಟನೆಯ ಭ್ಲಾಕ್ ಬಸ್ಟರ್ ಚಿತ್ರ ’ರಂಗನಾಯಕಿ’. 

’ರಂಗನಾಯಕಿ’ ಚಿತ್ರ ಮಹಿಳಾ ಪ್ರಧಾನ ಚಿತ್ರ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ಹೇಗೆ ಸಮಾಜವನ್ನು ಎದುರಿಸುತ್ತಾಳೆ ಎನ್ನುವ ಕಥೆಯನ್ನು ಇಟ್ಟುಕೊಂಡು ಪುಟ್ಟಣ್ಣ ಕಣಗಾಲ್ ಸಿನಿಮಾ ಮಾಡಿದ್ದರು. 

ಆರತಿ ಮಹಿಳಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡು ಮನೋಜ್ಞವಾಗಿ ನಟಿಸಿದ್ದರು. ಆ ಕಾಲದಲ್ಲಿ ಈ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. 38 ವರ್ಷಗಳ ನಂತರ ಇದೇ ಸಿನಿಮಾ ಮತ್ತೊಮ್ಮೆ ತೆರೆ ಮೇಲೆ ಬರಲು ಸಿದ್ಧವಾಗಿದೆ. 

ವಿಭಿನ್ನ ಕಥೆಯೊಂದಿಗೆ ಈ ಸಿನಿಮಾ ತೆರೆಗೆ ಬರಲಿದೆ. ರಂಗನಾಯಕಿ ಪಾತ್ರದಲ್ಲಿ ಅದಿತಿ ಪ್ರಭುದೇವ್ ಕಾಣಿಸಿಕೊಳ್ಳಲಿದ್ದಾರೆ.  ಕೆಲವೇ ದಿನಗಳಲ್ಲಿ ಶೂಟಿಂಗ್ ಶುರುವಾಗಲಿದೆ.