Asianet Suvarna News Asianet Suvarna News

12 ಕಿ.ಮೀ ಉದ್ದದ ಬೆಂಗಳೂರು ರಸ್ತೆಗೆ ಅಪ್ಪು ಹೆಸರು; ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದೇನು?

12 ಕಿ.ಮೀ ಉದ್ದದ ಬೆಂಗಳೂರು ರಸ್ತೆಗೆ ಅಪ್ಪು ಹೆಸರಿಟ್ಟ ಬಗ್ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. 

ashwini puneeth rajkumar reacts to after inaugurated puneeth rajkumar road by CM Basavaraj bommai sgk
Author
First Published Feb 8, 2023, 10:10 AM IST

ಬೆಂಗಳೂರಿನ ಮೈಸೂರು ರಸ್ತೆಯಿಂದ ವೆಗಾಸಿಟಿ ಮಾಲ್ ಜಂಕ್ಷನ್​ವರೆಗಿನ 12 ಕಿ.ಮೀ ರಸ್ತೆಗೆ ಪುನೀತ್ ರಾಜ್​ಕುಮಾರ್ ಅವರ ಹೆಸರು ಇಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಫೆಬ್ರವರಿ 7ರಂದು ಅದ್ದೂರಿಯಾಗಿ ಉದ್ಘಾಟನೆ ಮಾಡಿದರು. ಪವರ್ ಸ್ಟಾರ್ ಹೆಸರು 12 ಕಿ.ಮೀ ಉದ್ದದ ರಸ್ತೆಗೆ ಇಟ್ಟಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ. ಪುನೀತ್ ರಾಜ್ ಕುಮಾರ್ ಕುಟುಂಬ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಚಿತ್ರರಂಗದ ಅನೇಕರು ಸರ್ಕಾರಕ್ಕೆ ಧನ್ಯವಾದ ಹೇಳುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್ ಪತ್ನಿ ಅಶ್ವಿನಿ  ಅವರು ಕೂಡ ಪ್ರತಿಕ್ರಿಯೆ ನೀಡಿದ್ದು ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಶ್ವಿನಿಪುನೀತ್ ರಾಜ್‌ಕುಮಾರ್ ಈ ಬಗ್ಗೆ ಪೋಸ್ ಮಾಡಿದ್ದಾರೆ. 

ಗ್ರಾಫಿಕ್ಸ್​ ಫೋಟೋವನ್ನು ಶೇರ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ರಸ್ತೆ ಪಕ್ಕದಲ್ಲಿ ಅಪ್ಪು ಫೋಟೋ ಹಾಕಿ ‘ಡಾ||ಪುನೀತ್ ರಾಜ್​ಕುಮಾರ್ ರಸ್ತೆ’ ಎಂದು ಬರೆದಿರುವ ಗ್ರಾಫಿಕ್ಸ್​ ಫೋಟೋವನ್ನು ಅಶ್ವಿನಿ ಪುನೀತ್ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ನಾಯಂಡಹಳ್ಳಿ ಜಂಕ್ಷನ್ ಯಿಂದ  ವೆಗಾಸಿಟಿ ಮಾಲ್ ಜಂಕ್ಷನ್ ವರೆಗೆ ಎಂದು ಬರೆಯಲಾಗಿದೆ.  ಜೊತೆಗೆ ‘ಕರ್ನಾಟಕ ಸರ್ಕಾರಕ್ಕೆ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು’ ಎಂದು ಅಶ್ವಿನಿ ಪುನೀತ್ ಹೇಳಿದ್ದಾರೆ. ಜೊತೆಗೆ ಒಂದು ಪತ್ರವನ್ನು ಬರೆದು ಶೇರ್ ಮಾಡಿದ್ದಾರೆ.

‘ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಂಡಹಳ್ಳಿ ಜಂಕ್ಷನ್​ನಿಂದ ವೆಗಾಸಿಟಿ ಮಾಲ್ ಜಂಕ್ಷನ್​ವರೆಗಿನ 12 ಕಿ.ಮೀ. ಹೊರ ವರ್ತುಲ ರಸ್ತೆಯನ್ನು ಅಪ್ಪು ಗೌರವಾರ್ಥ ಡಾ|| ಪುನೀತ್ ರಾಜ್‌ಕುಮಾರ್ ರಸ್ತೆಯನ್ನು ಲೋಕಾರ್ಪಣೆ ಮಾಡಿದಕ್ಕಾಗಿ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ಈ ಮೂಲಕ ಅಪ್ಪು ಅವರನ್ನು ನಮ್ಮನಡುವೆ ಸದಾ ಜೀವಂತವಾಗಿರಿಸಿದಕ್ಕಾಗಿ ರಾಜ್ಯ ಸರ್ಕಾರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಚಿತ್ರರಂಗದ ಬಂಧುಗಳು ಮತ್ತು ಅವರ ಅಸಂಖ್ಯಾತ ಅಭಿಮಾನಿಗಳಿಗೆ ಎಂದೆದಿಗೂ ಚಿರಋಣಿ’ ಎಂದು ಅಶ್ವಿನಿ ಅವರು ಬರೆದಿದ್ದಾರೆ.

ಪದ್ಮನಾಭ ನಗರದಲ್ಲಿ ನಡೆದ ಪುನೀತ್ ರಾಜ್ ಕುಮಾರ್ ರಸ್ತೆ ಉದ್ಘಾಟನೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಹಲವು ಮನರಂಜನಾ ಕಾರ್ಯಗಳು ನಡೆದವು. ಸಮಾರಂಭದಲ್ಲಿ ಪುನೀತ್ ರಾಜ್​ಕುಮಾರ್ ಕುಟುಂಬ, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. 

ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರಿಡುವುದಾಗಿ ಸಿಎಂ ಹೇಳಿಕೆ 

‘ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರನ್ನು ಇಡಬೇಕು ಎಂದು ಅವರ ಅನೇಕ ಸ್ನೇಹಿತರು ಆಸೆಪಟ್ಟಿದ್ದಾರೆ. ಆ ರಸ್ತೆಗೆ ಅವರ ಹೆಸರು ಸೂಕ್ತ. ಅವರ ವ್ಯಕ್ತಿತ್ವದ ಬಗ್ಗೆ ತಿಳಿದಿರುವ ಎಲ್ಲರೂ ಹೌದು ಎನ್ನುತ್ತಾರೆ. ಜೊತೆಗೆ ನಮ್ಮ ಚಿತ್ರೋದ್ಯಮದ ವಾಣಿಜ್ಯ ಮಂಡಳಿ ಕೂಡ ಅಲ್ಲೇ ಇದೆ. ಗಾಂಧಿನಗರವೂ ಹತ್ತಿರ ಇದೆ. ಹಾಗಾಗಿ ಆ ರಸ್ತೆಗೆ ರೇಸ್​ ಕೋರ್ಸ್​ ರಸ್ತೆ ಎನ್ನುವುದಕ್ಕಿಂತ ರೆಬೆಲ್​ ಸ್ಟಾರ್​ ರಸ್ತೆ ಎಂದರೆ ಬಹಳ ಚೆನ್ನಾಗಿ ಇರುತ್ತದೆ’  ಬಸವರಾಜ ಬೊಮ್ಮಾಯಿ ಹೇಳಿದರು. 

Follow Us:
Download App:
  • android
  • ios