ಮಕ್ಕಳ ಚಿತ್ರ 'ದೇವರ ಕನಸು' ಸಿನಿಮಾಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ದೇವರ ಕನಸು ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಸಿನಿಮಾತಂಡಕ್ಕೆ ಶುಭಹಾರೈಸಿದ್ದಾರೆ ಅಪ್ಪು ಪತ್ನಿ.
ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ 'ದೇವರ ಮಕ್ಕಳು' ಮಕ್ಕಳ ಚಿತ್ರ ರಿಲೀಸ್‌ಗೆ ಸಿದ್ಧವಾಗಿದೆ. ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ 'ದೇವರ ಕನಸು' ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಅಂದಹಾಗೆ ಅಶ್ವಿನಿ ಪುನೀತ್ ರಾಜಕುಮಾರ್ ಚಿತ್ರದ ಟ್ರೈಲರ್ ರಿಲೀಸ್ ಮಾಡುವ ಮೂಲಕ ಸಿನಿಮಾತಂಡಕ್ಕೆ ಶುಭಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರದ ಮೂರು ಹಾಡುಗಳನ್ನು ಪ್ರದರ್ಶಿಸಲಾಯಿತು. ಪಿ.ಆರ್.ಕೆ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆ ಮಾಡಲಾಗಿದೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಸದ್ಯ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅನೇಕ ಸಿನಿಮಾಗಳಿಗೆ ಅಪ್ಪು ಪತ್ನಿ ಬೆಂಬಲ ನೀಡಿದ್ದಾರೆ. ಪೋಸ್ಟರ್, ಟ್ರೈಲರ್, ಟೀಸರ್ ರಿಲೀಸ್ ಮಾಡುವುದು ಸೇರಿದಂತೆ ಅನೇಕ ವಿಚಾರಗಳಿಗೆ ಅನೇಕ ಸಿನಿಮಾತಂಡಕ್ಕೆ ಅಶ್ವಿನಿ ಪುನೀತ್ ರಾಜ್ ಬೆಂಬಲ ನೀಡುತ್ತಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಶುರು ಕ್ರಿಕೆಟ್ ಹಬ್ಬ: ದುಬೈನಲ್ಲಿ ಸೆಲೆಬ್ರೆಟಿ ಆಟಗಾರರ ಬಿಡ್ಡಿಂಗ್.!
ದೇವರ ಮಕ್ಕಳು ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಸುರೇಶ್ ಲಕ್ಕೂರ್, 'ದೇವರ ಕನಸು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಮಕ್ಕಳ ಚಿತ್ರ ಈಗಾಗಲೇ ಪ್ರತಿಷ್ಠಿತ ಕಾನ್ ಫಿಲಂ ಫೆಸ್ಟಿವಲ್ ಸೇರಿದಂತೆ ಅನೇಕ ಫಿಲಂ ಫೆಸ್ಟಿವಲ್ ಗಳಲ್ಲಿ ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ. ದೇವ ಎನ್ನುವುದು ಈ ಚಿತ್ರದ ಮುಖ್ಯ ಪಾತ್ರದಾರಿಯ ಹೆಸರು. ಈ ಪಾತ್ರದಲ್ಲಿ ಮಾಸ್ಟರ್ ದೀಪಕ್ ಅಭಿನಯಿಸಿದ್ದಾರೆ. ಈ ಹುಡುಗ ಕಾಣುವ ಕನಸು ಈಡೇರುವುದೊ ಅಥವಾ ಇಲ್ಲವೋ? ಎಂಬುದು ಕಥಾಹಂದರ. ದೀಪಕ್, ಅಮೂಲ್ಯ, ಅಋಷಿ ವೇದಿಕ ಹಾಗೂ ಮಾಕ್ ಮಣಿ ಚಿತ್ರದ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ. ಜುಲೈ 21 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ' ಎಂದರು.
ಕರ್ನಾಟಕ ಡಿಸಿಎಂ ಜೊತೆ ರಾಜ್ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !
ಜಯ್ ಕುಮಾರ್ ಚಿತ್ರಕ್ಕೆ ನಿರ್ಮಾಣ ಮಾಡಿದ್ದಾರೆ. ಶೇಖರ್ ದೇವರ ಮಕ್ಕಳ ಸಿನಿಮಾಗೆ ಕಥೆ ಬರೆದಿದ್ದಾರೆ. ಸುನೀಲ್ ರಾಮ್ ಹಾಡುಗಳನ್ನು ಬರೆದಿದ್ದಾರೆ. ಚಿತ್ರಕ್ಕೆ ಸ್ಯಾಂಡಿ ಅವರ ಸಂಗೀತವಿದೆ. ಚಿತ್ರದಲ್ಲಿ ನಟಿಸಿರುವ ಮಾಸ್ಟರ್ ದೀಪಕ್, ಬೇಬಿ ಅಮೂಲ್ಯ, ಅಋಷಿ ವೇದಿಕ, ಮಾಕ್ ಮಣಿ ಸೇರಿದಂತೆ ಅನೇಕ ಮಕ್ಕಳು ನಟಿಸಿದ್ದಾರೆ.
