ಅಮಿತಾಭ್ ಬಚ್ಚನ್ ಅವರಿಗೆ ಧನ್ಯವಾದಗಳನ್ನ ತಿಳಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ 

ಬೆಂಗಳೂರು(ನ.10): ಪುನೀತ್‌ ರಾಜ್‌ಕುಮಾರ್ ಅವರ ಬಗ್ಗೆ ಬಾಲಿವುಡ್‌ ಬಿಗ್‌ಬಿ ಅಮಿತಾಭ್ ಬಚ್ಚನ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಅಮಿತಾಭ್ ಬಚ್ಚನ್ ಅವರಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. 

ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಮಿತಾಭ್ ಬಚ್ಚನ್ ಅವರೇ, ನಿಮ್ಮ ಈ ಭಾವನಾತ್ಮಕ ಮಾತುಗಳಿಗೆ ಮತ್ತು ವಿಶೇಷ ಸಂದೇಶಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು ಅಂತ ತಿಳಿಸಿದ್ದಾರೆ. 

Scroll to load tweet…

Puneeth Parva ಅಪ್ಪು ನಗುವಿನ ಮುಖ ಕಣ್ಣಮುಂದಿದೆ, ಗಂಧದ ಗುಡಿಗೆ ಶುಭೋರಿದ ಅಮಿತಾಬ್!

ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು, ಅಪ್ಪು ಇಲ್ಲ ಎಂಬುದನ್ನು ಅಂದುಕೊಂಡು ಮಾತನಾಡಲು ಕಷ್ಟ ಆಗುತ್ತದೆ. ಅಪ್ಪು ಮಗುವಾಗಿದ್ದಾಗಲೇ ನಾನು ಅವರನ್ನು ಮೊದಲು ನೋಡಿದ್ದು. ಅಪ್ಪುವಿನಲ್ಲಿ ಸದಾ ಸೆಳೆಯುವ ಸಂಗತಿ ಅಂದ್ರೆ ಅವರ ನಗು. ಎಲ್ಲಾ ಕಡೆ, ಎಲ್ಲಾ ಸಂದರ್ಭದಲ್ಲೂ, ಯಾವಾಗಲೂ ಅವರ ಮುಖದಲ್ಲಿ ನಗು ಇರುತ್ತದೆ. ಅಪ್ಪು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಅವರು ಅಭಿನಯಿಸಿಲ್ಲ. ಅವರು ಅವರಾಗಿಯೇ ಕಾಣಿಸಿಕೊಂಡಿದ್ದಾರೆ ಅಂತ ಬರೆದುಕೊಂಡಿದ್ದರು. 

ಇತ್ತೀಚೆಗೆ ತೆರೆಕಂಡ ಗಂಧದ ಗುಡಿ ಚಿತ್ರದ ಬಗ್ಗೆಯೂ ಬಗ್ಗೆ ಮಾತನಾಡಿರುವ ಅಮಿತಾಭ್ ಬಚ್ಚನ್ ಅವರು ‘ಗಂಧದ ಗುಡಿಯಲ್ಲಿ ಕರ್ನಾಟಕ ವೈಭವದ ವನ್ಯ ಸಂಪತ್ತನ್ನು ತೆರೆದಿಟ್ಟಿದ್ದಾರೆ. ಅಪ್ಪು ಜೊತೆಗಿನ ಗಂಧದ ಗುಡಿ ಪಯಣ ಮಿಸ್ ಮಾಡಕೋಬೇ. ಕಡ್ಡಾಯವಾಗಿ ಮಕ್ಕಳು ನೋಡಲೇಬೇಕಾದ ಚಿತ್ರ. ವನ್ಯ ಸಂಪತ್ತಿನ ಕುರಿತು ಅರಿಯ ಬೇಕಾದ ಚಿತ್ರ. ಅಪ್ಪು ನಮ್ಮ ಜೊತೆ ನಮ ನೆನಪಿನಲ್ಲಿ ಸದಾ ಜೀವಂತ’ ಎಂದು ಬರೆದುಕೊಂಡಿದ್ದರು.

ಇದಕ್ಕೂ ಮುನ್ನ ಪುನೀರ್‌ ಪರ್ವ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದ ಬಿಗ್‌ ಬಿ, ಅಪ್ಪು ಅಂದರೆ ಅವರ ನಗುವಿನ ಮುಖ. ಯಾವುದೇ ಸಂದರ್ಭ ಆಗಿರಲಿ, ಯಾವುದೇ ಪರಿಸ್ಥಿತಿ ಇರಲಿ ಪುನೀತ್ ರಾಜ್‌ಕುಮಾರ್ ಮುಖದಲ್ಲಿ ನಗು ಯಾವತ್ತೂ ಮಾಸುತ್ತಿರಲಿಲ್ಲ. ಇದೀಗ ಅಪ್ಪು ಇಲ್ಲ ಅನ್ನೋದನ್ನು ಅರಗಿಸಿಕೊಳ್ಳಲು, ಮಾತನಾಡಲು ಸಾಧ್ಯವಾಗುತ್ತಿಲ್ಲ. ಅಪ್ಪು ಇನ್ನಿಲ್ಲ ಅನ್ನೋ ಸುದ್ದಿ ಬಂದಾಗ ನಂಬಲು ಸಾಧ್ಯವಾಗಲಿಲ್ಲ. ಈಗಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಡಾ. ರಾಜ್‌ಕುಮಾರ್ ಕುಟುಂಬ ನನಗೆ ಆತ್ಮೀಯ. ಹಲವು ಬಾರಿ ಡಾ. ರಾಜ್ ಕುಮಾರ್ ನನ್ನನ್ನು ಹೊಗಳಿದ್ದಾರೆ. ಅಪ್ಪು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ ಎಂದು ಅಮಿತಾಬ್ ಬಚ್ಚನ್ ಹೇಳಿದ್ದರು. ಗಂಧದ ಗುಡಿ ಚಿತ್ರಕ್ಕೆ ಬಿಗ್ ಬಿ ಶುಭಕೋರಿದ್ದರು.