Asianet Suvarna News Asianet Suvarna News

'ಶಾಖಾಹಾರಿ'ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್ ; ಸದ್ಯದಲ್ಲೇ 'ಮಲೆನಾಡ ಥ್ರಿಲ್ಲರ್' ದರ್ಬಾರ್..!

ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೂ ಸಾಲದು. ನನ್ನದು 350 ಸಿನಿಮಾ ಆಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ, ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ.

Ashwini Puneeth Rajkumar supports Rangayana Raghu lead Shakhahari movie srb
Author
First Published Feb 9, 2024, 10:47 PM IST

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದರಲ್ಲಿ ಒಬ್ಬರು ರಂಗಾಯಣ ರಘು. ಅವರ ಅಮೋಘ ಅಭಿನಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ವಿಶೇಷ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ರಂಗಾಯಣ ರಘು ಅವರಿಗೀಗ 'ಅಭಿನಯಾಸುರ' ಎಂಬ ಬಿರುದು ನೀಡಿ ಗೌರವಿಸಲಾಗಿದೆ. 

ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ಶಾಖಾಹಾರಿ.. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ.  ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರ ಶಾಖಾಹಾರಿ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ  ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ. 

ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ 'ನಾನು ಈ ರೀತಿ ಮೈಕ್ ಹಿಡಿದು ಮಾತನಾಡುತ್ತಿದ್ದೇನೆ. ನನ್ನ ನಿರ್ದೇಶಕ ಅಂತಾ ಕರೆಯುತ್ತಾರೆ ಎಂದರೆ,  ಈ ಹಿಂದೆ ನಾನು, ಯೋಗರಾಜ್ 'ಮಣಿ' ಅಂತಾ ಸಿನಿಮಾ ಮಾಡಬೇಕಾದರೆ ರಘು ಸರ್ ಸಿಕ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜೊತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. 

ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ದ್ದೂ ದೊಡ್ಡ ಪಾಲು. ನಮ್ಮ ಬರವಣಿಗೆಯನ್ನು ಸ್ಕ್ರೀನ್ ಗೆ ತರುವುದು ಇದೆಯಲ್ಲ. ಅದಕ್ಕೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಘು ಸರ್ ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ? ಅನಿಸುತ್ತೆ ಎಂದರು.

ರಂಗಾಯಣ ರಘು ಮಾತನಾಡಿ, ನನ್ನ ಒಟ್ಟು ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂತಹವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರೀ್ಗೆ ಬಂದು ಸುಮಾರು 35 ವರ್ಷವಾಯ್ತು. ನಾನು ಒಂದು ಸಿನಿಮಾಗೋಸ್ಕರ ಬಂದವನು. 94 ರಿಂದ 2001ರವರೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲೆಲ್ಲಾ ಹಾಗೇ ಮಾಡಿದ್ದೇನೆ, ಹೀಗೆ ಮಾಡಿದ್ದೇನೆ  ಹೇಳಿಕೊಂಡು ಬರುತ್ತಿದ್ದೆ. 

ಎಂಥಾ ನಟಿಗೆ ಅದೆಂಥಾ ಸ್ಥಿತಿ ಬಂತು; ಕೆಲಸವೇ ದೇವರು ಎಂದಿದ್ದ ಸಮಂತಾಗೆ ಕೆಲಸವನ್ನೇ ಮಾಡಲಾಗುತ್ತಿಲ್ಲ!

ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೂ ಸಾಲದು. ನನ್ನದು 350 ಸಿನಿಮಾ ಆಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ, ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ  ಸಿಕ್ಕಿದೆ. ಇಡೀ ಇಂಡಸ್ಟ್ರೀಯ ಎಲ್ಲಾ ನಟರ ಜೊತೆ ಮಾಡಿದ್ದೇನೆ. ಹೊಸಬರ ಜೊತೆಯೂ ಮಾಡಿದ್ದೇನೆ. ಹೊಸಬರು ಮತ್ತಷ್ಟು ಬರಲಿ ಎಂದರು.

ಶ್ರುತಿ ಹರಿಹರನ್ ಹೇಳ್ತಿದಾರೆ 'ತೀರದಾಚೆಗೆ ಹಾರಿ ಹೋಗುವಾಸೆ'; ಯಾಕೆ ಹಾಗೆ ಹೇಳ್ತಿದಾರೋ ಏನೋ.!

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, ಈ ರೀತಿ ಕಥೆಯನ್ನು ಪ್ರೊಡ್ಯೂಸರ್ ಮಾಡೋದಕ್ಕೆ ಧೈರ್ಯ ಬೇಕು. ಒಂದು ಸಾಹಿತ್ಯದ ಹಿನ್ನೆಲೆ ಬೇಕು. ಅಷ್ಟೇ ಪ್ರಬಲ ಪ್ರಜ್ಞೆ ಬೇಕು. ಬ್ಯುಸಿನೆಸ್ ಮೈಡ್ ಸೆಟ್ ಬೇಕು. ಎಲ್ಲಾ ತರಹದ ಅನುಕೂಲ ಕಲ್ಪಿಸಿಕೊಟ್ಟು, ಅಷ್ಟೇ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಯಾವುದೇ ಟೈಮ್ ನಲ್ಲಿಯೂ ಇಲ್ಲ ಅಂದಿಲ್ಲ. ಬಜೆಟ್ ಹೆಚ್ಚು ಕಮ್ಮಿಯಾದ್ರೂ ಯಾವುದೇ ಅಡ್ಡಿ ಆತಂಕ ತೆಗೆದುಕೊಳ್ಳದೇ ಫ್ರೀಡಂ ಕೊಟ್ಟಿದ್ದಾರೆ. 

ವಿಷ್ಣುವರ್ಧನ್‌-ಭಾರತಿ ಮಕ್ಕಳನ್ನು ದತ್ತು ತೆಗೆದುಕೊಂಡಿದ್ದು ಯಾಕೆ; ಎರಡೂ ಹೆಣ್ಣು ಮಕ್ಕಳೇ ಯಾಕೆ..!?

ಇದೇ ಕಾರಣಕ್ಕೆ ಚಿತ್ರ ನಿರ್ಮಾಣಕ್ಕೆ ಕಾರಣವಾಗಿದ್ದು, ಇದೇ ತಿಂಗಳ 16 ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ರೆಡಿಯಾಗುವವರೆಗೂ ಅದೊಂದು ಆರ್ಟ್. ರೆಡಿಯಾದ್ಮೇಲೆ ಅದೊಂದು ಪ್ರಾಡೆಕ್ಟ್. ಪ್ರಾಡೆಕ್ಟ್ ಬಳಿಕ ಬ್ಯುಸಿನೆಸ್ ಆಗುತ್ತದೆ. ಬ್ಯುಸಿನೆಸ್ ಬಳಿಕ ಮಾರ್ಕೆಟ್ ಗೆ ಬರುತ್ತದೆ. ಒಂದೊಳ್ಳೆ ಪ್ರಾಡೆಕ್ಟ್ ಗೆ ಒಂದೊಳ್ಳೆ ಬ್ಯುಸಿನೆಸ್ ಆಗುತ್ತೇ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಸಿನಿಮಾ ತೆರೆಗೆ ಬರ್ತಿದ್ದು, ನಿಮ್ಮ ಬೆಂಬಲ ಇರಲಿ ಎಂದರು. 

ನಾನ್ಯಾಕೆ 'ರಾಗಿಣಿ ರೂಂ'ಗೆ ಹೋಗ್ಲಿ ಎಂದ್ಬಿಟ್ರು ಉಪೇಂದ್ರ; ಬಿದ್ದು ಬಿದ್ದು ನಕ್ಕ ಶಿವರಾಜ್‌ಕುಮಾರ್!

ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ. ಮಲೆನಾಡಿನಲ್ಲಿ ನಡೆಯುವ ಒಂದಿಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಕಥೆಯನ್ನು ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕಿಕ್ಕೇರಿಸೋ ಶೈಲಿಯ 'ಕೈಲಾಸ' ಟ್ರಾನ್ಸ್ ಸಾಂಗ್; ಹೊಸ ಶೈಲಿಗೆ ಪ್ರೇಕ್ಷಕರು ಫಿದಾ ಆಗೋದು ಗ್ಯಾರಂಟಿ ಗುರೂ!

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ 'ಶಾಖಾಹಾರಿ' ಸಿನಿಮಾ ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಸಂದೀಪ್ಗೆ ಜೊತೆಗಾಗಿ ವಿಶ್ವಜಿತ್ ರಾವ್ ಕ್ಯಾಮರಾ, ಶಶಾಂಕ್ ನಾರಾಯಣ ಎಡಿಟಿಂಗ್, ಮಯೂರ್ ಅಂಬೆಕಲ್ಲು ಸಂಗೀತ ಈ ಸಿನಿಮಾಗಿದೆ. ಪ್ರಚಾರದ ಪಡಸಾಲೆಯಲ್ಲಿರುವ ಚಿತ್ರತಂಡ ಇದೇ ತಿಂಗಳ 16ರಂದು (16 ಫೆಬ್ರವರಿ 2024 ) ಚಿತ್ರವನ್ನು ತೆರೆಗೆ ತರ್ತಿದೆ.

Follow Us:
Download App:
  • android
  • ios