ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ 'ಅಮೃತಮತಿ' ಸಿನಿಮಾ ಆಯ್ಕೆ!
ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಮತ್ತೊಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ ಆಗಿದೆ.
ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಮತ್ತೊಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ ಆಗಿದೆ. ಅಮೆರಿಕಾದ ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ ಆಯ್ಕೆ ಆಗಿರುವ ವಿಚಾರವನ್ನು ಸ್ವತಃ ಬರಗೂರು ರಾಮಚಂದ್ರಪ್ಪ ಅವರೇ ಖುಷಿಯಿಂದ ಹೇಳಿಕೊಂಡಿದ್ದಾರೆ.
ಬರಗೂರು 'ಅಮೃತಮತಿ'ಗೆ ಅಂತಾರಾಷ್ಟ್ರೀಯ ಪ್ರಶಸ್ತಿ!
ಇಲ್ಲಿಯವರೆಗೂ ಹತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆ ಆಗುವ ಮೂಲಕ ಕನ್ನಡ ಚಿತ್ರವೊಂದು ದಾಖಲೆ ಮಾಡಿದೆ ಎನ್ನಬಹುದು. ನಟಿ ಹರಿಪ್ರಿಯಾ ಹಾಗೂ ದುನಿಯಾ ಕಿಶೋರ್ ಚಿತ್ರದ ಮುಖ್ಯ ಜೋಡಿಯಾಗಿ ನಟಿಸಿರುವ ಈ ಚಿತ್ರವು 13ನೇ ಶತಮಾನದಲ್ಲಿ ಕನ್ನಡ ಕವಿ ಜನ್ನ ಬರೆದಿರುವ ಯಶೋಧರ ಚರಿತೆ ಕಾವ್ಯವನ್ನು ಆಧರಿಸಿದೆ.
‘ಕನ್ನಡ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗ ಹಾಗೂ ಕನ್ನಡ ಸಾಹಿತ್ಯಕ್ಕೆ ಗೌರವ ತಂದುಕೊಟ್ಟಿದೆ. ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ ಆಯ್ಕೆ ಆಗಿರುವುದು ನಮ್ಮ ಅಮೃತಮತಿ ಚಿತ್ರದ ಮತ್ತೊಂದು ಹೆಮ್ಮೆ’ ಎನ್ನುತ್ತಾರೆ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು. ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಮೂಲಕ ಪುಟ್ಟಣ್ಣ ನಿರ್ಮಿಸಿರುವ ಚಿತ್ರವಿದು.