Asianet Suvarna News Asianet Suvarna News

ನಟ ರಮೇಶ್ ಅರವಿಂದ್‌ ಮುಡಿಗೆ ಗೌರವ ಡಾಕ್ಟರೇಟ್: ರಾಣಿ ಚೆನ್ನಮ್ಮ ವಿವಿಯಿಂದ ಘೋಷಣೆ

ಕನ್ನಡ ಚಿತ್ರರಂಗದಲ್ಲಿ ಮಾಡಿದ ಸಾಧನೆಗೆ ನಟ ರಮೇಶ್ ಅರವಿಂದ್ ಅವರಿಗೆ ಮತ್ತೊಂದು ಗೌರವ ಸಿಕ್ಕಿದೆ

Belagavi rani Chennamma university announces honorary doctorate to Actor ramesh aravind rbj
Author
First Published Sep 13, 2022, 6:26 PM IST

ಕನ್ನಡ ಖ್ಯಾತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಬೆಳಗಾವಿಯ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯ ಘೋಷಿಸಿದೆ.

ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ. ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಎಂದು ಫೋನ್ ನಂಬರ್ ಕೊಟ್ಟ ರಮೇಶ್ ಅರವಿಂದ್

 ನಾಳೆ (ಸೆಪ್ಟೆಂಬರ್.14) ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. 

ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರ ಪ್ರದೇಶದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಣಿ ‌ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ತಿಳಿಸಿದ್ದಾರೆ.

ರಾಣಿ ಚನ್ನಮ್ಮ‌ ವಿಶ್ವವಿದ್ಯಾಲಯಕ್ಕೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳ 418 ಮಹಾವಿದ್ಯಾಲಯಗಳು ವಿಶ್ವವಿದ್ಯಾಲಯಗಳು ವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿವೆ. ಸುಮಾರು 1.64 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂದರು. 

10ನೇ ಘಟಿಕೋತ್ಸವದಲ್ಲಿ ಒಟ್ಟು 43,607 ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲಿದ್ದಾರೆ. ಇದರಲ್ಲಿ 11 ಚಿನ್ನದ ಪದಕವನ್ನು ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Follow Us:
Download App:
  • android
  • ios