Asianet Suvarna News Asianet Suvarna News

ಸಿನಿ ಪ್ರೀಯರೇ ಗುಡ್ ನ್ಯೂಸ್: ಮಾ.24ರಿಂದ 31ರವರೆಗೆ 31ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ!

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚಲನ ಚಿತ್ರೋತ್ಸವ ಸಂಘಟನಾ ಸಮಿತಿ ಸಭೆ ನಡೆದಿದೆ. ಅಧಿಕೃತವಾಗಿ ಚಿತ್ರೋತ್ಸವಕ್ಕೆ ದಿನಾಂಕ ಘೋಷಣೆ ಮಾಡಲಾಗಿದೆ...
 

Bengaluru 13th international film festival 2021 begins from march 24th to 31st vcs
Author
Bangalore, First Published Feb 20, 2021, 3:47 PM IST

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಇತ್ತೀಚಿಗೆ ನಡೆಸಿದ ಸಭೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ದಿನಾಂಕವನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಸಭೆಯಲ್ಲಿ ಭಾಗಿಯಾಗಿದ್ದರು. 

13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಧಾನ ಸೌಧದಲ್ಲಿ ಸಭೆ! 

ಈ ವರ್ಷ 'ಭಾರತೀಯ ಪ್ರದರ್ಶನ ಕಲೆಗಳ ಮಹತ್ವ' ವಿಷಯದ ಮೇಲೆ ಚಿತ್ರೋತ್ಸವ ಏರ್ಪಡಿಸಲಾಗಿದೆ. ಬೆಂಗಳೂರಿನ ಓರಾಯನ್ ಮಾಲ್‌ನಲ್ಲಿ  11 ಪರದೆಗಳಲ್ಲಿ 50ಕ್ಕೂ ಹೆಚ್ಚು ದೇಶಗಳ 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.  ಏಳು ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಮೂರು ಭಾಗವಿರುತ್ತದೆ. ಏಷಿಯನ್ ಸಿನಿಮಾ, ಭಾರತೀಯ ಸಿನಿಮಾ ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗ. 

Bengaluru 13th international film festival 2021 begins from march 24th to 31st vcs

ಚಿತ್ರೋತ್ಸವದಲ್ಲಿ ಸಿನಿಮಾಗಳಿಗೆ ಸಂಬಂಧ ಪಟ್ಟಂತೆ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರಿಂದ ಸಿನಿಮಾ ಆಸಕ್ತಿ ಉಳ್ಳವರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸನೀಲ್ ಪುರಾಣಿಕ್‌ ಹೇಳಿದ್ದಾರೆ.  ಇದೇ ಸಭೆಯಲ್ಲಿ ಮುಖ್ಯಮಂತ್ರಿಗಳು BIFFನ  ಲಾಂಛನವನ್ನು ಬಿಡುಗಡೆ ಮಾಡಿದ್ದಾರೆ.

Follow Us:
Download App:
  • android
  • ios