ಆರ್ಯನ್ ಸಂತೋಷ್ ಅಭಿನಯದ 'ಡಿಯರ್ ಸತ್ಯ' ಸಿನಿಮಾದ ಟ್ರೇಲರ್‌ನ್ನು ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ಶ್ರೀಮುರಳಿ ಲಾಂಚ್ ಮಾಡಿ, ಇಡೀ ಚಿತ್ರತಂಡಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು, ಹಳ್ಳಿ ಹೈದ ಪ್ಯಾಟೇಗ್ ಬಂದ ಎಂಬೆರಡು ರಿಯಾಲಿಟಿ ಶೋಗಳ ನಿರೂಪಕರಾಗಿ, ಬಿಗ್ ಬಾಸ್ ಸೀಸನ್ 2ರ ಸ್ಪರ್ಧಿಯಾಗಿದ್ದ ಆರ್ಯನ್ ಸಂತೋಷ್ (Aryann Santosh) ಅಭಿನಯದ 'ಡಿಯರ್ ಸತ್ಯ' (Dear Sathya) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 10ರಂದು ಅದ್ದೂರಿಯಾಗಿ ಸಿನಿಮಾವನ್ನು ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಅದಕ್ಕೂ ಮುನ್ನ ಚಿತ್ರದ ಟ್ರೇಲರ್ (Trailer) ಬಿಡುಗಡೆ ಮಾಡುವ ಮೂಲಕ ಗಮನಸೆಳೆಯುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಹೌದು! 'ಡಿಯರ್ ಸತ್ಯ' ತಂಡದ ಈ ಪ್ರಯತ್ನಕ್ಕೆ ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ಶ್ರೀಮುರಳಿ (Sriimurali) ಸಾಥ್ ನೀಡಿದ್ದಾರೆ. 'ಡಿಯರ್ ಸತ್ಯ' ಸಿನಿಮಾದ ಟ್ರೇಲರ್ ಲಾಂಚ್ ಮಾಡಿ, ಇಡೀ ಚಿತ್ರತಂಡಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಪರ್ಪಲ್ ರಾಕ್ ಎಂಟರ್‌ಟೈನರ್ ಹಾಗೂ ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಲಾಂಛನದಲ್ಲಿ ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್, ಶ್ರೀನಿವಾಸ್ ಶ್ರೀಭಕ್ತ ಹಾಗೂ ಅಜಯ್ ಅಪರೂಪ ಅವರು 'ಡಿಯರ್ ಸತ್ಯ' ಚಿತ್ರಕ್ಕೆ ಹಣ ಹಾಕಿದ್ದಾರೆ. ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ಶ್ರೀಮುರಳಿ, 'ಸಂತೋಷ್ ನನಗೆ ತುಂಬಾ ವರ್ಷಗಳ ಸ್ನೇಹಿತ. ಈಗ ಆರ್ಯನ್ ಸಂತೋಷ್ ಆಗಿದ್ದಾರೆ. ನಿರ್ಮಾಪಕ ಯತೀಶ್, ಗಣೇಶ್ ಪಾಪಣ್ಣ ಕೂಡ ನನಗೆ ಬಹಳ ದಿನಗಳ ಪರಿಚಯ. ಟ್ರೇಲರ್ ತುಂಬಾ ಚೆನ್ನಾಗಿ ‌ಮೂಡಿಬಂದಿದೆ. ಈ ಚಿತ್ರದಲ್ಲಿ ಉಪ್ಪಿ ಸರ್ ಹಾಡಿರುವ ಹಾಡು ನನ್ನಗಿಷ್ಟ. ಎಲ್ಲದಕ್ಕಿಂತ ನನ್ನ ಸ್ನೇಹಿತ ಸಂತೋಷ್‌ಗೆ ಈ ಚಿತ್ರ ಯಶಸ್ಸು ತಂದುಕೊಡಲಿ' ಎಂದು ಶ್ರೀಮುರಳಿ ಹಾರೈಸಿದರು.

KGF Chapter 2: ಗೂಗಲ್ ಮ್ಯಾಪ್​ನಲ್ಲಿ ಶೋ ಆಯ್ತು 'ಕೆಜಿಎಫ್ ಫಿಲ್ಮ್ ಸೆಟ್'​ ಲೋಕೆಶನ್!

ಈ ಚಿತ್ರವನ್ನು ಮೊದಲು ತಮಿಳಿನಲ್ಲಿ ಮಾಡಬೇಕೆಂದುಕೊಂಡಿದ್ದೆ. ಚೆನ್ನೈನ ಹೈಕೋರ್ಟ್ ಎದುರು ಪ್ಯಾರಿಸ್ ಕಾರ್ನರ್ ಎಂಬ ಸ್ಥಳವಿದೆ. ಆ ಜಾಗವೇ ನನಗೆ ಕಥೆ ರಚಿಸಲು ಸ್ಪೂರ್ತಿ. ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಕಥೆ ಸಿದ್ದಮಾಡಿಕೊಂಡ ಮೇಲೆ ನಿರ್ಮಾಪಕರ ಹುಡುಕಾಟದಲ್ಲಿ ಸಾಕಷ್ಟು ವರ್ಷ ಕಳೆದಿದ್ದೇನೆ.‌ ನಂತರ ಗಣೇಶ್ ಪಾಪಣ್ಣ ಅವರು ಫೋನ್ ಮಾಡಿ ಕಥೆ ಕೇಳಿದರು.‌ ಗಣೇಶ್, ಯತೀಶ್, ಶ್ರೀನಿವಾಸ್ ಶ್ರೀಭಕ್ತ ಹಾಗೂ ಅಜಯ್ ಸಹ ಪರ್ಪಲ್ ರಾಕ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಚಿತ್ರೀಕರಣ ಮುಗಿದ ತಕ್ಷಣ ಕೋವಿಡ್ (Covid19) ಶುರುವಾಯಿತು. ಎಲ್ಲಾ ಮುಗಿದು, ಈಗ ನಮ್ಮ ಚಿತ್ರ ಮಾರ್ಚ್ 10ರಂದು ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗೆಳೆಯ ಶ್ರೀಮುರಳಿ ಹಾಗೂ ನನ್ನ ಗೆಳೆತನ ದಶಕಕ್ಕೂ ಮೀರಿದ್ದು. ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ನಾನು ಆಭಾರಿ' ಎಂದರು ನಾಯಕ ಸಂತೋಷ್. 



ಚಿತ್ರದ ನಿರ್ದೇಶಕ ಶಿವಗಣೇಶ್ (Shivaganesh) ಚಿತ್ರ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದರು. ಚಿತ್ರದ ನಾಯಕಿ ಅರ್ಚನಾ ಕೊಟ್ಟಿಗೆ (Archana Kottige) ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್, ಛಾಯಾಗ್ರಾಹಕ ವಿನೋದ್ ಭಾರತಿ ಸೇರಿದಂತೆ ಅನೇಕ ತಂತ್ರಜ್ಞರು 'ಡಿಯರ್ ಸತ್ಯ'ನ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ನಾನು ಈ ಹಿಂದೆ ನಟಿಸಿದ ಸಿನಿಮಾಗಳಲ್ಲಿ ನನ್ನನ್ನು ನಾನು ನೋಡಿಕೊಳ್ಳುತ್ತಿದ್ದೆ. ಆದರೆ ಈ ಸಿನಿಮಾದ ಡಬ್ಬಿಂಗ್ ಮಾಡಬೇಕಾದರೆ ನನಗೆ ಅನ್ನಿಸಿದ್ದು, ಇಲ್ಲಿ ನಾನು ಸತ್ಯನಾಗಿ ಪೂರ್ತಿ ಬದಲಾಗಿದ್ದೇನೆ ಅನ್ನೋದು. ಈ ಚಿತ್ರದಲ್ಲಿ ಸತ್ಯ ಮತ್ತು ರಿವೇಂಜ್ ಸತ್ಯ ಎಂಬ ಎರಡು ಶೇಡ್‌ಗಳಿವೆ. 

James 2022: ಪುನೀತ್ ರಾಜ್‍ಕುಮಾರ್ ಪವರ್‌ಪ್ಯಾಕ್ಡ್ ಚಿತ್ರಕ್ಕೆ ಸೆನ್ಸಾರ್‌ನಿಂದ ಯು/ಎ ಸರ್ಟಿಫಿಕೇಟ್

ಒಂದರಲ್ಲಿ ಹ್ಯಾಂಡ್ಸಮ್ಮಾಗಿ ಕಾಣಿಸಿಕೊಂಡಿದ್ದೇನೆ ಮತ್ತೊಂದು ಲುಕ್‌ಗಾಗಿ ಉದ್ದುದ್ದ ಗಡ್ಡ ಬಿಟ್ಟು ರಗಡ್ ಆಗಿ ಕಾಣಿಸಿಕೊಂಡಿದ್ದೇನೆ. ನೂರು ಜನ್ಮಕೂ ಮತ್ತು ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗಿಯಾದ ನಂತರ ನಂದಕಿಶೋರ್ ಮೂಲಕ ನಿರ್ದೇಶಕ ಶಿವಗಣೇಶ್ ಪರಿಚಯವಾಯಿತು. ಆರಂಭದಲ್ಲಿ ಐವತ್ತು ಲಕ್ಷ ರುಪಾಯಿಗಳಲ್ಲಿ ಸಿನಿಮಾ ಮಾಡಿಕೊಡಿ ಅಂತಾ ಕೇಳಿಕೊಂಡಿದ್ದೆ. ಆ ಮೂಲಕ ಸಿನಿಮಾ ಶುರುವಾಯಿತು. ಸಾಕಷ್ಟು ಅಡೆತಡೆಗಳೂ ಎದುರಾದವು. ಪರ್ಪಲ್ ರಾಕ್ ಸಂಸ್ಥೆ ಕೈ ಜೋಡಿಸಿದಮೇಲೆ ಎಲ್ಲವೂ ಸಲೀಸಾಗಿ ನೆರವೇರಿತು. ಸಿನಿಮಾ ಅಂದುಕೊಂಡದ್ದಕ್ಕಿಂತಾ ಬೇರೆಯದ್ದೇ ಲೆವೆಲ್ಲಿಗೆ ತಯಾರಾಗಿದೆ ಎಂದು ಆರ್ಯನ್ ಸಂತೋಷ್ ಈ ಹಿಂದೆ ತಿಳಿಸಿದ್ದಾರೆ.

YouTube video player