Asianet Suvarna News Asianet Suvarna News

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಬಾಲಿವುಡ್ ಖ್ಯಾತ ನಟಿ ಅತಿಥಿ

ಮಾರ್ಚ್ ಮೊದಲ ವಾರದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಾರಂಭವಾಗಲಿದ್ದು ಬಾಲಿವುಡ್ ಖ್ಯಾತ ನಟಿ ವಿಶೇಷ ಅತಿಥಿಯಾಗಿ ಭಾಗಿಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. 

bollywood Actress rekha likely to special guest for bengaluru international film festival sgk
Author
First Published Feb 7, 2023, 2:41 PM IST

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಅತಿಥಿಗಳ ಲಿಸ್ಟ್ ಕೂಡ ಫೈನಲ್ ಆಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. 14ನೇ ಫಿಲ್ಮ್ ಫೆಸ್ಟಿವಲ್ ಗೆ ನಾಲ್ಕು ಕೋಟಿ ಅನುದಾನ ನೀಡಲಾಗಿದ್ದು ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ನಡೆಯಲಿದೆ. ಈಗಾಗಲೇ ಫಿಲ್ಮ್ ಫೆಸ್ಟಿವಲ್ ಲೋಗೋ ಕೂಡ ಅನಾವರಣ ಮಾಡಲಾಗಿದೆ. ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಬಾಲಿವುಡ್ ಸ್ಟಾರ್, ಎವರ್ ಗ್ರೀನ್ ನಟಿ ರೇಖಾ ವಿಶೇಷ ಇತಿಥಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 bollywood Actress rekha likely to special guest for bengaluru international film festival sgk

ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದೆ. ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರ್ಕಾರದಿಂದ ಇದೂವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದ ಚಿತ್ರೋತ್ಸವ ಈ ತಿಂಗಳಿಂದ ಮುಂದಿನ ತಿಂಗಳಿಗೆ ಶಿಫ್ಟ್ ಆಗಿದೆ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ. 

Bengaluru International Film Festival: ಮಾ.3 ವಿಶ್ವ ಕನ್ನಡ ಚಲನಚಿತ್ರ ದಿನ: ಸಿಎಂ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣ ನೀತಿ ಸಂಹಿತೆ ಜಾರಿ ಆಗುವ ಮುನ್ನವೇ ಚಿತ್ರೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಬೇಕು ಎನ್ನುವುದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.  ನಾಲ್ಕು ವರ್ಷಗಳಿಂದ ಚಲನಚಿತ್ರ ಪ್ರಶಸ್ತಿಗಳನ್ನೂ ನೀಡಿಲ್ಲ. ಕನಿಷ್ಠ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾಡುವ ತರಾತುರಿ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮಾರ್ಚ್ ನಲ್ಲಿ ಅಂದುಕೊಂಡಿರುವ ಕಾರ್ಯಕ್ರಮಗಳು ನಡೆಯುತ್ತಿವೆಯಾ ಎಂದು ಕಾದು ನೋಡಬೇಕು.

Follow Us:
Download App:
  • android
  • ios