ಪುನೀತ್ ಅವರು ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಅಲ್ಲದೆ, ರಾಜ್‌ಕುಮಾರ್ ಕುಟುಂಬದಿಂದ ಬಂದಿರುವ ಪ್ರತಿಭಾವಂತ ನಟನಾಗಿದ್ದ ಪುನೀತ್, ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಪುನೀತ್ ನಿಧನಕ್ಕೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು (ಅ. 29): ಸ್ಯಾಂಡಲ್‌ವುಡ್‌ನ (Sandalwood) ಪವರ್‌ಸ್ಟಾರ್ ನಟ ಪುನೀತ್ ರಾಜ್‌ ಕುಮಾರ್ (Puneeth Rajkumar) ಹೃದಯಾಘಾತದಿಂದ ( Heart attack) ಇಂದು ನಿಧನರಾಗಿದ್ದಾರೆ. ನಟ ಪುನೀತ್ ರಾಜ್ ಕುಮಾರ್‌ಗೆ ಲಘು ಹೃದಯಾಘಾತ ಸಂಭವಿಸಿ, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ (Vikram Hospital) ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುನೀತ್ ಅವರು ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಅಲ್ಲದೆ, ರಾಜ್‌ಕುಮಾರ್ ಕುಟುಂಬದಿಂದ ಬಂದಿರುವ ಪ್ರತಿಭಾವಂತ ನಟನಾಗಿದ್ದ ಪುನೀತ್, ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಪುನೀತ್ ನಿಧನದ ಸುದ್ದಿ ಖಚಿತವಾಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು, ಸಚಿವರು ಮತ್ತು ಅಧಿಕಾರಿ ವರ್ಗ ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು. ಇನ್ನು ಪುನೀತ್ ನಿಧನಕ್ಕೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

"

ಫಿಟ್ನೆಸ್ ವಿಚಾರವಾಗಿ ಯುವಕರಿಗೆ ರೋಲ್ ಮಾಡೆಲ್: ಡಿ.ಕೆ. ಶಿವಕುಮಾರ್
ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೋಯ್ದ ವಿಧಿ ಬಹಳ ಕ್ರೂರಿ ಎಂದು ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ಪುನೀತ್ ಅವರು ನನಗೆ ಆತ್ಮೀಯರಾಗಿದ್ದರು. ಕುಟುಂಬದ ಸ್ನೇಹಿತರಾಗಿದ್ದರು. ನಮ್ಮಿಬ್ಬರ ಕುಟುಂಬ ಸದಸ್ಯರ ನಡುವೆ ಉತ್ತಮ ಒಡನಾಟವಿತ್ತು ಎಂದು ಹೇಳಿಕೆಯಲ್ಲಿ ಸ್ಮರಿಸಿಕೊಂಡಿದ್ದಾರೆ. ನಾವಿಬ್ಬರೂ ಒಟ್ಟಿಗೆ ವಾಕಿಂಗ್ ಮಾಡಿದ್ದೇವೆ. ಜಿಮ್ ಮಾಡಿದ್ದೇವೆ. ಚಿತ್ರರಂಗ ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶಿಸ್ತುಬದ್ಧ ಜೀವನ, ಕಟ್ಟುನಿಟ್ಟಿನ ವ್ಯಾಯಾಮದ ಮೂಲಕ ಪುನೀತ್ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದರು. ಫಿಟ್ನೆಸ್ ವಿಚಾರವಾಗಿ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಶಿವಕುಮಾರ್ ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. 

6 ತಿಂಗಳ ಮಗುವಾಗಿದ್ದಾಗಿನಿಂದಲೇ (ಪ್ರೇಮದ ಕಾಣಿಕೆ) ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ನಟಿಸಿದ್ದ ಪುನೀತ್, ನಂತರ ವಸಂತಾ ಗೀತಾ, ಚಲಿಸುವ ಮೋಡಗಳು, ಬೆಟ್ಟದ ಹೂವು ಸೇರಿದಂತೆ ಅನೇಕ ಚಿತ್ರಗಳಲ್ಲಿ ಬಾಲ ನಟರಾಗಿ ಮನಗೆದ್ದಿದ್ದರು. ಬೆಟ್ಟದ ಹೂವು ಚಿತ್ರದ ನಟನೆಗೆವರಾಷ್ಟ್ರ ಪ್ರಶಸ್ತಿ ಬಂದಿದಗದು ಮಾತ್ರವಲ್ಲದೇ, ತಂದೆಗೆ ತಕ್ಕ ಮಗನಂತೆ ಕೌಟುಂಬಿಕ ಚಿತ್ರಗಳಲ್ಲಿ ಅಭಿನಯಿಸಿ ಎಲ್ಲ ವರ್ಗದ ಜನರ ಅಭಿಮಾನ ಗಳಿಸಿದ ಧ್ರುವ ನಕ್ಷತ್ರ ಪುನೀತ್ ಅವರು. ಕನ್ನಡ ಪ್ರೇಕ್ಷಕರು ಮಾತ್ರವಲ್ಲದೆ ಅನ್ಯ ಭಾಷಿಕ ಪ್ರೇಕ್ಷಕರನ್ನು ತಮ್ಮ ಅಭಿಮಾನಿಯಾಗಿ ಮಾಡಿಕೊಂಡಿದ್ದು ಪುನೀತ್ ಅವರಲ್ಲಿದ್ದ ಕಲಾ ಶಕ್ತಿಗೆ ಸಾಕ್ಷಿ. ನಾನು ರಾಜ್ ಕುಮಾರ್ ಚಿತ್ರಗಳನ್ನು ನೋಡುತ್ತಾ ಬೆಳೆದವನು. ಅದೇ ರೀತಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ಅವರ ಚಿತ್ರಗಳನ್ನು ನೋಡುತ್ತಾ ಬಂದಿದ್ದೇನೆ. ಒಬ್ಬರಿಗಿಂತ ಮತ್ತೊಬ್ಬರು ಮಿಗಿಲಾದ ನಟರು ಎಂದು ಮೆಲುಕು ಹಾಕಿದರು. ಪುನೀತ್ ಅವರ ಅಗಲಿಕೆ ಕೇವಲ ಚಿತ್ರರಂಗಕ್ಕಷ್ಟೇ ಅಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ' ಎಂದರು. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗಷ್ಟೇ ಅಲ್ಲ, ಇಡೀ ನಾಡಿಗೇ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

Puneeth Rajkumar Death ನಮ್ಮನ್ನು ಅಗಲಿದ ನಮ್ಮ ಪ್ರೀತಿಯ ರಾಜಕುಮಾರ

ಕರ್ನಾಟಕದ ಪಾಲಿಗೆ ಕರಾಳ ದಿನ: ಎಸ್.ಟಿ.ಸೋಮಶೇಖರ್ ಸಂತಾಪ
ಈ ನಾಡು ಕಂಡ ಅಪ್ರತಿಮ‌ ನಟ, ಕನ್ನಡಿಗರ ಕಣ್ಮಣಿ, ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ. ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ. ನಟನಾಗಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದರು. ಅವರ ಸೇವೆ, ತ್ಯಾಗ ಎಂದಿಗೂ ಮರೆಯಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗದಲ್ಲಿ ಪುನೀತ್ ಹೆಸರು ಅಜರಾಮರವಾಗಿ ಉಳಿಯಲಿದೆ. ಬಾಲ ನಟನಾಗಿಯೇ ಎಲ್ಲರ ಮನ ಗೆದ್ದಿದ್ದ ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳಬಾರದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಶಾಂತಿ ಕಾಪಾಡಿ, ಪುನೀತ್ ಅವರ ಆತ್ಮಕ್ಕೆ ಶಾಂತಿ ಕೋರಬೇಕು.

ಕನ್ನಡ ನಾಡು ಅಕ್ಷರಶಃ ಬಡವಾಗಿದೆ: ಡಾ.ಸಿ.ಎನ್.ಅಶ್ವತ್ಥನಾರಾಯಣ
ಜನಪ್ರಿಯ ನಟ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 'ಪುನೀತ್ ಅವರು ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದ್ದರು. ನಾಡು-ನುಡಿ ಮತ್ತು ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಅವರನ್ನು ಕಳೆದುಕೊಂಡಿರುವುದರಿಂದ ಕನ್ನಡ ನಾಡು ಅಕ್ಷರಶಃ ಬಡವಾಗಿದೆ' ಎಂದು ಅವರು ತಮ್ಮ ಶೋಕಸಂದೇಶದಲ್ಲಿ ದುಃಖಿಸಿದ್ದಾರೆ. ರಚನಾತ್ಮಕ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ನಿಂತುಕೊಳ್ಳುತ್ತಿದ್ದ ಪುನೀತ್ ಅವರು ಇನ್ನಿಲ್ಲವೆಂದರೆ ನಂಬುವುದು ಕಷ್ಟವಾಗುತ್ತದೆ. ಅವರ ಸ್ಥಾನವನ್ನು ಬೇರೆ ಯಾರಿಂದಲೂ ತುಂಬುವುದು ಸಾಧ್ಯವಿಲ್ಲ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ. ಪುನೀತ್ ಅವರ ನಿಧನದ ನೋವನ್ನು ತಡೆದುಕೊಳ್ಳುವಂತಹ ಶಕ್ತಿಯನ್ನು ಭಗವಂತನು ಅವರ ಕುಟುಂಬದ ಸದಸ್ಯರಿಗೆ, ಬಂಧುಬಾಂಧವರಿಗೆ ಮತ್ತು ಅಭಿಮಾನಿ ಬಳಗಕ್ಕೆ ನೀಡಲಿ; ಪರಮಾತ್ಮನು ಅವರ ಆತ್ಮಕ್ಕೆ ಶಾಂತಿಯನ್ನು ಕೊಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ
ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.

Scroll to load tweet…


ದುಃಖ ಕಣ್ಣೀರು ತಡೆಯೋಕೆ ಆಗುತ್ತಿಲ್ಲ: ನಟಿ ಅಂಬಿಕಾ
ನಾನು ಅಪ್ಪುಗೆ ಫೇವರಿಟ್ ಹೀರೋಯಿನ್ ಆಗಿದ್ದೆ. ನನ್ನೊಂದಿಗೆ ಚಳಿ ಚಳಿ ಹಾಡಿಗೆ ನೃತ್ಯ ಮಾಡಬೇಕು ಎನ್ನುತ್ತಿದ್ದರು. ನಾನು ಬರೋಕೆ ಆಗುತ್ತಿಲ್ಲ ಕಾರಣ ವಿದೇಶದಲ್ಲಿದ್ದೇನೆ ಎಂದು ಅಪ್ಪು ಜೊತೆಗಿನ ನೆನಪನ್ನು ನಟಿ ಅಂಬಿಕಾ ಹಂಚಿಕೊಂಡಿದ್ದಾರೆ.

Scroll to load tweet…


ಪುನೀತ್ ಸಾವು ತುಂಬಲಾಬಾರದ ನಷ್ಟ: ಸಿದ್ಧರಾಮಯ್ಯ
ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಲಾಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.

Scroll to load tweet…

ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ: ಎಚ್.ಡಿ.ಕುಮಾರಸ್ವಾಮಿ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ. ಅಣ್ಣಾವ್ರ ಪುತ್ರರಾದರೂ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು; ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು. ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

Scroll to load tweet…

ಸಾಂಸ್ಕೃತಿಕ ರಾಯಭಾರಿಯನ್ನೂ ಕಳೆದುಕೊಂಡಂತಾಗಿದೆ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ
ಕನ್ನಡದ ಖ್ಯಾತ ಚಿತ್ರನಟರಾದ ಪುನೀತ್‌ ರಾಜಕುಮಾರ್ ಇನ್ನಿಲ್ಲವಾದದುದ ಅತ್ಯಂತ ನೋವಿನ ಸಂಗತಿ. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್‌ರವರು ಇಪ್ಪತ್ತೈದಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕ ನಟರಾಗಿ ನಟಿಸಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದರು. ತಮ್ಮ ನಟನೆ ಹಾಗೂ ಸ್ನೇಹಮಯಿ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದರು. ತಮ್ಮ ಸರಳ ನಡೆ, ನುಡಿ, ಹಾಆಗೂ ನಟನಾ ಕೌಶಲ್ಯದಿಂದ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿದ್ದ ಇವರು ಇತರೆಲ್ಲ ಯುವ ನಟರಿಗೆ ಮಾದರಿಯಾಗಿದ್ದರು. ಚಿತ್ರನಟರಾಗಿ, ಹಿನ್ನಲೆ ಗಾಯಕರಾಗಿ, ಚಿತ್ರ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದ ಬಹು ದೊಡ್ಡ ಆಸ್ತಿಯಾಗಿದ್ದರು. ಪುನೀತ್‌ರವರು ಇನ್ನಿಲ್ಲವಾದುದರಿಂದ ಚಿತ್ರರಂಗ ಮಾತ್ರವಲ್ಲ ಇಡೀ ಕನ್ನಡ ನಾಡು ಓರ್ವ ಸಾಂಸ್ಕೃತಿಕ ರಾಯಭಾರಿಯನ್ನೂ ಕಳೆದುಕೊಂಡಂತಾಗಿದೆ. ಭಗವಂತನು ಇವರ ನಿಧನದಿಂದ ದುಃಖತಪ್ತರಾಗಿರುವ ಕುಟುಂಬ ವರ್ಗ ಹಾಗೂ ಅಭಿಮಾನಿ ವೃಂದಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನೂ, ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲೆಂದು ಆಶಿಸುತ್ತೇವೆ.

ಚಿತ್ರರಂಗಕ್ಕೆ ಅತಿದೊಡ್ಡ ನಷ್ಟ: ಸಿ.ಟಿ. ರವಿ
ಅಂತಕನ ದೂತರಿಗೆ ಕಿಂಚಿತ್ತು ದಯವಿಲ್ಲ. ಜನಪ್ರಿಯ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಜನತೆ ಹಾಗೂ ಚಿತ್ರರಂಗಕ್ಕೆ ಅತಿದೊಡ್ಡ ನಷ್ಟ. ದೇವರು ಅವರ ಅಗಲುವಿಕೆಯ ದುಃಖ ಸಹಿಸುವ ಶಕ್ತಿಯನ್ನು ಅವರ ಕುಟುಂಬ ಮತ್ತು ಅಭಿಮಾನಿ ವರ್ಗಕ್ಕೆ ನೀಡಲಿ. ಅಗಲಿದ ಅವರ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ.

Scroll to load tweet…


ಅಪ್ಪು ಅಮರರಾಗಿಯೇ ಉಳಿಯಲಿದ್ದಾರೆ: ಬಿ.ಎಸ್.ಯಡಿಯೂರಪ್ಪ
ನಾಡಿನ ಜನಪ್ರಿಯ ಕಲಾವಿದ,ಡಾ.ರಾಜ್ ವಂಶದ ಕುಡಿ ಪುನೀತ್ ರಾಜಕುಮಾರ್ ಹಠಾತ್ ನಿಧನರಾದ ವಿಷಯ ದಿಗ್ಭ್ರಮೆ ಮೂಡಿಸಿದೆ. ಕಿರುವಯಸ್ಸಿನಲ್ಲೇ ಅವರು ನಮ್ಮನ್ನು ಅಗಲಿದ್ದು ತೀವ್ರ ಆಘಾತ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಆಘಾತವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಣ್ಣಾವ್ರ ಜೊತೆ ಬಾಲ ಕಲಾವಿದರಾಗಿ ಭಕ್ತ ಪ್ರಹ್ಲಾದ, ಚಲಿಸುವ ಮೋಡಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ಅವರ ಅಭಿನಯ, ಬೆಟ್ಟದ ಹೂವು, ನಟಸಾರ್ವಭೌಮ ಮೊದಲಾದ ಅನೇಕ ಯಶಸ್ವಿ ಚಿತ್ರಗಳ ಮೂಲಕ ಕನ್ನಡಿಗರ ಹೃದಯದಲ್ಲಿ ಚಿರಸ್ಥಾನ ಪಡೆದ ಅಭಿಮಾನಿಗಳ ಪ್ರೀತಿಯ ಅಪ್ಪು ಅಮರರಾಗಿಯೇ ಉಳಿಯಲಿದ್ದಾರೆ. ನಿಮ್ಮ ನೆನಪು ಚಿರಾಯು ಪುನೀತ್. ಓಂ ಶಾಂತಿ

Scroll to load tweet…

ಅವರ ಆತ್ಮಕ್ಕೆ ಸದ್ಗತಿ ದೊರಕಲಿ: ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥ ಸ್ವಾಮಿ
ಜನಪ್ರಿಯ ಚಲನಚಿತ್ರ ನಟ ಪುನೀತ್‌ ರಾಜಕುಮಾರ್‌ ಅವರು ಅಕಾಲಿಕವಾಗಿ ಮರಣ ಹೊಂದಿದ್ದು, ಚಲನಚಿತ್ರ ರಂಗಕ್ಕೆ ಮಾತ್ರವಲ್ಲ ರಾಘವೇಂದ್ರ ಸ್ವಾಮಿಗಳ ಭಕ್ತ ಸಮುದಾಯಕ್ಕೂ ಅಪಾರವಾದ ಹಾನಿಯಾಗಿದೆ. ಅವರ ಕುಟುಂಬದ ಸದಸ್ಯರೆಲ್ಲರೂ ನಿರಂತರವಾಗಿ ರಾಯರಲ್ಲಿ ಭಕ್ತಿ ಹೊಂದಿದೆ. ರಾಯರ ಕುರಿತು ಮಂತ್ರಾಲಯದಲ್ಲಿ ಭಕ್ತಿಭಾವುಕರಾಗಿ ಪುನೀತ್‌ ರಾಜಕುಮಾರ್‌ ಭಕ್ತಿಗೀತೆ ಹಾಡಿದ್ದರು ಎಂಬುದನ್ನು ಸ್ಮರಿಸಿಕೊಳ್ಳುತ್ತೇನೆ. ಅಂತಹ ವ್ಯಕ್ತಿ ಈಗ ಇಲ್ಲ ಎನ್ನುವುದು ತುಂಬಾ ನೋವಿನ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಂಥ ದುರ್ವಿಧಿ: ನಟ ಜಗ್ಗೇಶ್
ವಾರದ ಹಿಂದೆ ಮಲ್ಲೇಶ್ವರಕ್ಕೆ ಬಂದಿರುವೆ ಬಾಅಣ್ಣ ಎಂದು ಕರೆದು1ಘಂಟೆ ಸಮಯಕಳೆದ ಆತ್ಮೀಯ ತಮ್ಮ ಪುನೀತ ಇಂದಿಲ್ಲಾ ಎಂದರೆ ಎಂಥ ದುರ್ವಿಧಿ! ಕೋಟ್ಯಾಂತರ ಅಭಿಮಾನಿಗಳು ಅವರ ಮನೆಯವರಿಗೆ ಈನೋವು ಬರಿಸುವ ಶಕ್ತಿ ಆದೇವರೆ ನೀಡಬೇಕು!ಕನ್ನಡ ಚಿತ್ರರಂಗದ ಅನರ್ಘ್ಯರತ್ನ ಹೇಳದೆ ಕೇಳದೆ ನಿರ್ಗಮಿಸಿ ಅಪ್ಪಅಮ್ಮನ ಮಡಿಲು ಸೇರಿತು! ನಿಮ್ಮಆತ್ಮಕ್ಕೆ ಚಿರಶಾಂತಿ

Scroll to load tweet…