Asianet Suvarna News Asianet Suvarna News
breaking news image

ಕಾನೂನು ಬದಲಾಯಿತೇ; ಚಂದನ್ ಶೆಟ್ಟಿ, ನಿವೇದಿತಾ ಗೌಡ ಸಡನ್ ವಿಚ್ಛೇದನಕ್ಕೆ ದಿಗ್ಭ್ರಮೆ!

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ ಇಂದು (ಜೂನ್ 07) ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಸ್. ಜ್ಯೋತಿ ಶ್ರೀ ಅವರ ಬೆಂಚ್​ ಮುಂದೆ ಬಂದಿತ್ತು. ಆದ್ರೆ, ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಮಾಡಬೇಕಾಗುತ್ತದೆ.

Chandan Shetty And Niveditha Gowda quick divorce matter goes viral in Social Media srb
Author
First Published Jun 7, 2024, 6:21 PM IST

ನಟ, ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ವಿಚ್ಛೇದನಕ್ಕೆ ಕೋರ್ಟ್​ ಮಂಜೂರು ನೀಡಿದೆ. ಅವರಿಬ್ಬರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ  ಈ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನದಿಂದ ಬೇರೆಬೇರೆ ಆಗಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (Chandan Shetty and Niveditha gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿ ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನವನ್ನು  ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. 

ಈ ಮೂಲಕ ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ. ಬಹಿರಂಗವಾಗಿ ಹೇಳಿಕೊಳ್ಳದ ಕೆಲವು ಕಾರಣಗಳಿಂದ ಒಟ್ಟಿಗೇ ಇರಲು ಇಚ್ಚಿಸದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಹೀಗಾಗಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ವಿಚ್ಛೇದನಕ್ಕೆ 06 ಜೂನ್ 2024ರಂದು ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ, ಕೋರ್ಟ್, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಅನಂತನ ಅವಾಂತರದಲ್ಲಿ 'ಅಂಜಲಿ'ಯಾದ ಶಾಂತ ಈಗ ತ್ರಿಬ್ಬಲ್ ರೈಡಿಂಗ್ ಮಾಡ್ತಿದಾರೆ!

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ ಇಂದು (ಜೂನ್ 07) ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಸ್. ಜ್ಯೋತಿ ಶ್ರೀ ಅವರ ಬೆಂಚ್​ ಮುಂದೆ ಬಂದಿತ್ತು. ಆದ್ರೆ, ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಮಾಡಬೇಕಾಗುತ್ತದೆ. ಅದರಂತೆ ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆಗೆ ಅವಕಾಶ ನೀಡಲಾಯಿತು. ವಿಚ್ಛೇದನಕ್ಕೆ ಮೊದಲು ಈ ಸಂಧಾನ ಪ್ರಕ್ರಿಯೆ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗಿ ಅಂತಿಮವಾಗಿ ಕೋರ್ಟ್​, ವಿಚ್ಛೇದನ ನೀಡಿ ಆದೇಶಿಸಿದೆ.

ಬಾಲಿವುಡ್ 'ಹಮಾರೆ ಬಾರಾ' ಚಿತ್ರದ ಬಿಡುಗಡೆಗೆ ಕರ್ನಾಟಕದಲ್ಲಿ ನಿಷೇಧ!

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರಿಬ್ಬರ ವಿಚ್ಛೇದನ ಹಲವರ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತೆ. ಆದರೆ, ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಕಾರಣ ಇವರಿಬ್ಬರು ನಗು ನಗುತ್ತಲೇ, ಒಪ್ಪಂದದ ಮೇಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಕೋರ್ಟ್​ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ನೀಡಿ ಆದೇಶ ಹೊರಡಿಸಲಾಗಿದೆ. 

ಪುರುಷೋತ್ತಮನ ಕಥೆ 'ಓಂ' ಆಯ್ತು, ಯಾರವರು? ಸುಧೀಂದ್ರ ಸ್ನೇಹಿತ ರೌಡಿ ಆಗಿದ್ರಾ?

ಚಂದನ್ ಹಾಗು ನಿವೇದಿತಾ ವಿಚ್ಛೇದನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಕಾಮೆಂಟ್‌ಗಳು ಹರಿದಾಡುತ್ತಿವೆ. ಸೋಷಿಯಲ್ ಮೀಡಿಯಾಗಳಲ್ಲಿ 'ಕ್ಯೂಟ್ ಕಪಲ್' ಎಂದೇ ಕರೆಯಿಸಿಕೊಂಡಿದ್ದ ಈ ಜೋಡಿ ಏಕಾಏಕಿ ಡಿವೋರ್ಸ್​ ನಿರ್ಧಾರ ಕೈಗೊಂಡಿದ್ಯಾಕೆ? ಅದರ ಹಿಂದನ ಕಾರಣವೇನು? ಇವರಿಬ್ಬರಲ್ಲಿ ತಪ್ಪು ಯಾರದಿರಬಹುದು ಎಂಬೆಲ್ಲ ಚರ್ಚೆಗಳು ಆರಂಭವಾಗಿವೆ. ಈ ಇಬ್ಬರಲ್ಲಿ ಮೊದಲಿಗೆ ಡಿವೋರ್ಸ್ ಬಯಸಿದ್ದು ಯಾರು? ಹೀಗೇ ನಾನಾ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ. ಆದರೆ, ಅವರಿಬ್ಬರು ಮಾತ್ರ ನಿರ್ಧಿಷ್ಟ ಕಾರಣವನ್ನು ಬಹಿರಂಗ ಪಡಿಸಿಲ್ಲ. 

ನಟ ದರ್ಶನ್ ಪ್ಯಾಲೆಸ್ ಗ್ರೌಂಡ್‌ನಿಂದ ಅಳುತ್ತಾ ಬಂದಿದ್ದೇಕೆ? ಜಿರಾಫೆ ತರ ಇದೀಯ ಅಂದಿದ್ಯಾರು?

Latest Videos
Follow Us:
Download App:
  • android
  • ios