ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ, 'ಕಾಟನ್ ಕ್ಯಾಂಡಿ' ಪಾರ್ಟಿ ಸಾಂಗ್‌ ಇನ್ ಟ್ರಬಲ್!

ಇತ್ತೀಚೆಗೆ ಬಿಡುಗಡೆ ಅಗಿರುವ 'ಕಾಟನ್ ಕ್ಯಾಂಡಿ' ಮ್ಯೂಸಿಕ್ ಆಲ್ಬಂ ಬಗ್ಗೆ ಆರೋಪ ಮಾಡಲಾಗಿದ್ದು, ಆ ಟ್ಯೂನ್ ಕದ್ದಿದ್ದು ಎನ್ನಲಾಗಿದೆ. 6 ವರ್ಷಗಳ ಹಿಂದೆಯೇ 'ವೈ ಬುಲ್ ಪಾರ್ಟಿ (Y Bull Party)' ಅನ್ನೋ ಸಾಂಗ್ ಮಾಡಿದ್ದ ಯುವರಾಜ್ (Rock Star Yuvaraj) ಇದೀಗ ಈ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಕ್‌ಸ್ಟಾರ್ ಯುವರಾಜ್..

Chandan shetty is facing copyright issues for his music album Cotton Candy

ರಾಪರ್ ಚಂದನ್ ಶೆಟ್ಟಿಗೆ (Chandan Shetty) ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬಿಡುಗಡೆ ಅಗಿರುವ 'ಕಾಟನ್ ಕ್ಯಾಂಡಿ' ಮ್ಯೂಸಿಕ್ ಆಲ್ಬಂ (Cotton Candy) ಬಗ್ಗೆ ಆರೋಪ ಮಾಡಲಾಗಿದ್ದು, ಆ ಟ್ಯೂನ್ ಕದ್ದಿದ್ದು ಎನ್ನಲಾಗಿದೆ. 6 ವರ್ಷಗಳ ಹಿಂದೆಯೇ 'ವೈ ಬುಲ್ ಪಾರ್ಟಿ (Y Bull Party)' ಅನ್ನೋ ಸಾಂಗ್ ಮಾಡಿದ್ದ ಯುವರಾಜ್ (Rock Star Yuvaraj) ಇದೀಗ ಈ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಕ್‌ಸ್ಟಾರ್ ಯುವರಾಜ್ 'ಕಾಟನ್ ಕ್ಯಾಂಡಿ' ಟ್ಯೂನ್  ನನ್ನ ಈ ಹಿಂದಿನ ಪಾರ್ಟಿ ಸಾಂಗ್‌ ನಕಲಿನಂತೆಯೇ ಇದ್ದು, ದೂರು ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. 

ನಟ-ಗಾಯಕ ಹಾಗು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ  (Chandan Shetty) ಮ್ಯೂಸಿಕ್ ವಿಡಿಯೋ 'ಕಾಟನ್ ಕ್ಯಾಂಡಿ' ರಿಲಿಸ್ ಆಗಿದ್ದು ಸದ್ಯ ಟ್ರೆಂಡಿಂಗ್ ಕ್ರಿಯೇಟ್ ಮಾಡಿದೆ. 'ಕಾಟನ್ ಕ್ಯಾಂಡಿ' ಹೆಸರಿನ ಮ್ಯೂಸಿಕ್ ವಿಡಿಯೋದಲ್ಲಿ ನಟ, ಗಾಯಕ ಚಂದನ್ ಶೆಟ್ಟಿ ಜೋಡಿಯಾಗಿ ಸುಷ್ಮಿತಾ ಗೋಪಿನಾಥ್ ನಟಿಸಿದ್ದಾರೆ. ಈ ಹಾಡಿನಲ್ಲಿ ಚಂದನ್-ಸುಷ್ಮಿತಾ ಜೋಡಿ ಸಕತ್ ಮೋಡಿ ಮಾಡಿದ್ದಾರೆ, ಮೇಡ್ ಫಾರ್ ಈಚ್ ಅದರ್' ಎಂಬಂತೆ ಚಿಂದಿ ಮಾಡಿದ್ದಾರೆ. 

ಸುಷ್ಮಿತಾ ಜೊತೆ ನ್ಯೂ ಇಯರ್ ಟೈಮಲ್ಲಿ'ಕಾಟನ್ ಕ್ಯಾಂಡಿ' ತಂದ ಚಂದನ್ ಶೆಟ್ಟಿ!

ಕಳೆದ ತಿಂಗಳು, ಅಂದರೆ 27 ಡಿಸೆಂಬರ್ 2024ರಂದು ಈ ಕಾಟನ್ ಕ್ಯಾಂಡಿ ರಿಲೀಸ್ ಆಗಿದೆ. ಈ ಮೊದಲಿನ ಎಲ್ಲದಕ್ಕಿಂತ ವಿಶೇಷವಾದ ಸಂಗೀತದ ರಸದೌತಣ ಇದರಲ್ಲಿದೆ ಎನ್ನಬಹುದು. ಏಕೆಂದರೆ, ಈ ವಿಡಿಯೋವನ್ನು ಹೆಚ್ಚು ಅದ್ದೂರಿಯಾಗಿ ಶೂಟ್ ಮಾಡಲಾಗಿದೆ, ಈ ಮ್ಯೂಸಿಕ್ ಸಾಂಗ್‌ಗೆ ಹೆಚ್ಚಿನ ತಯಾರಿ ಮಾಡಿಕೊಂಡಿದ್ದರು ಚಂದನ್ ಶೆಟ್ಟಿ. ಈ ಮ್ಯೂಸಿಕ್ ವಿಡಿಯೋವನ್ನು ಸ್ವತಃ ಚಂದನ್ ಶೆಟ್ಟಿಯವರೇ ನಿರ್ದೇಶನ ಕೂಡ ಮಾಡಿದ್ದಾರೆ. 

ಈ ಬಗ್ಗೆ ಚಂದನ್ ಶೆಟ್ಟಿ ಅವರು 'ನನಗೆ ಈ ಕಾಟನ್ ಕ್ಯಾಂಡಿ ತುಂಬಾ ಮುಖ್ಯವಾದ ಪ್ರಾಜೆಕ್ಟ್ ಆಗಿದೆ. ಏಕೆಂದರೆ, ಇತ್ತೀಚೆಗೆ ನನ್ನ ಯಾವುದೇ ಹೊಸ ಸಾಂಗ್ ಬಿಡುಗಡೆ ಆಗಿಲ್ಲ. ನನ್ನ ಅಭಿಮಾನಿಗಳು ಬೇಡಿಕೆ ಇಟ್ಟಿದ್ದರು, ಆದರೆ ನನಗೆ ನನ್ನ ಬೇರೆಬೇರೆ ಕೆಲಸಗಳ ಕಾರಣಕ್ಕೆ ಕೊಡಲು ಅಸಾಧ್ಯವಾಗಿತ್ತು. ಇದೀಗ ಎಲ್ಲವೂ ಅಂದುಕೊಂಡಂತೆ ಮೂಡಿ ಬಂದಿದ್ದು, ವಿಡಿಯೋ ಸಾಂಗ್ ಲಾಂಚ್ ಬಳಿಕ ಇದೊಂದು ಟ್ರೆಂಡ್ ಸಾಂಗ್ ಆಗಿದೆ. ಇದು ನಾನು ನನ್ನ ಫ್ಯಾನ್ಸ್ ಹಾಗೂ ಮ್ಯೂಸಿಕ್ ಲವರ್‌ ಗಳಿಗೆ ಕೊಟ್ಟ ನ್ಯೂ ಈಯರ್‌ಗೆ ಗಿಫ್ಟ್' ಎಂದಿದ್ದಾರೆ. 

ಕನ್ನಡ ಸಿನಿಮಾಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿರುವ, ಟ್ರೆಂಡಿಂಗ್‌ನಲ್ಲಿರುವ ಗಾಯಕ, ಮ್ಯೂಸಿಕ್ ಕಂಪೋಸರ್, ಲಿರಿಸಿಸ್ಟ್ ಮತ್ತು ರ್‍ಯಾಪರ್ ಅಂದ್ರೆ ಅದು ಚಂದನ್ ಶೆಟ್ಟಿ ಮತ್ತೆ ಹೊಸ ಹುರುಪಿನೊಂದಿಗೆ ಪುಟಿದೇಳುತ್ತಿದ್ದಾರೆ. ತಮ್ಮ ಹೊಚ್ಚ ಹೊಸ ಶೈಲಿಯ ಕಾಟನ್ ಕ್ಯಾಂಡಿ ಹಾಡಿನ ಮೂಲಕ ಯುವ ಜನತೆ ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ. ಈ ಮೊದಲು ಬಂದಿದ್ದ 'ಪಾರ್ಟಿ ಆಂಥಮ್, ಚಾಕಲೇಟ್ ಗರ್ಲ್ (Chocolate Girl) ಹಾಡು, ಮೊದಲಾದ ಹಾಡುಗಳು ಸೋಶಿಯಲ್ ಮೀಡೀಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 

ವೈರಾಗ್ಯಕ್ಕೆ ಒಳಗಾದ್ರಾ ನಿತ್ಯಾ ಮೆನನ್, ಸನ್ಯಾಸಿನಿ ಆಗೋದು ಪಕ್ಕಾ ಆಗೋಯ್ತಾ?

ಇದೀಗ ಚಂದನ್ ಶೆಟ್ಟಿ ಹೊಸ ವರ್ಷಕ್ಕೆ ಮತ್ತೊಂದು ಪಾರ್ಟಿ ಹಾಡಿನ (party song) ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಬಾರಿಯ ಈ ಪಾರ್ಟಿ ಹಾಡಲ್ಲಿ ನಟಿ ಸುಷ್ಮಿತಾ ಗೋಪಿನಾಥ್ ಕಾಣಿಸಿಕೊಂಡಿದ್ದಾರೆ. ಸುಷ್ಮಿತಾ ಅವರು ಕನ್ನಡ ಹಾಗೂ ತೆಲುಗು ಸಿನಿಮಾಗಳು, ಜಾಹೀರಾತುಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿರುವ ನಟಿ. ಇದೀಗ ಚಂದನ್ ಹಾಗೂ ಸುಷ್ಮಿತಾ ಜೋಡಿ ತಮ್ಮ ಕಾಟನ್ ಕ್ಯಾಂಡಿ ಹಾಡಿನ ಮೂಲಕ ಮೋಡಿ ಮಾಡಿದ್ದಾರೆ. ಗ್ರೀಷ್ಮಾ ಗೌಡ ಅವರು ಈ ಹಾಡಿನ ಸಹ-ನಿರ್ಮಾಪಕರು.

ಚಂದನ್ ಶೆಟ್ಟಿ 2011 ರಿಂದಲೂ ತಮ್ಮ ರ್‍ಯಾಪ್ ಸಾಂಗ್ಸ್‌ಗಳ (Rap songs) ಮೂಲಕ ಸದ್ದು ಮಾಡುತ್ತಿದ್ದಾರೆ. ಇಲ್ಲಿವರೆಗೆ ಬರೋಬ್ಬರಿ 15ಕ್ಕಿಂತ ಹೆಚ್ಚು ಹಾಡುಗಳನ್ನು ಇವರು ಕಂಪೋಸ್ ಮಾಡಿ ಹಾಡಿದ್ದಾರೆ. ಜೊತೆಗೆ, ಸಿನಿಮಾಗಳಲ್ಲೂ ಹಾಡುವ ಮೂಲಕ ಅಲ್ಲೂ ಗೆಲುವಿನ ನಗೆ ಬೀರಿದ್ದಾರೆ. ಇದೀಗ ಹೊಸ ವರ್ಷಕ್ಕೆ 'ಕಾಟನ್ ಕ್ಯಾಂಡಿ' ಹೆಸರಿನ ಹೊಸ ಹಾಡಿನೊಂದಿಗೆ ಫ್ಯಾನ್ಸ್‌ ಮುಂದೆ ಬಂದಿದ್ದಾರೆ. 

ಪುನೀತ್ ಜೊತೆ ದಿನಕರ್ ಮಾಡಬೇಕಿದ್ದ ಸಿನಿಮಾ ಅಪ್ಡೇಟ್; 'ಅಪ್ಪು' ಜಾಗದಲ್ಲಿ ಯಾರು?

ಚಂದನ್ ಶೆಟ್ಟಿಯವರ ಮೂರೇ ಮೂರು ಪೆಗ್ಗಿಗೆ ಹಾಡು, ಇವತ್ತಿಗೂ ಯುವಕರ ಫೇವರಿಟ್ ಆಗಿದೆ. ಅಷ್ಟೇ ಅಲ್ಲದೇ  'ಲಕಲಕ ಲ್ಯಾಂಬರ್ಗಿನಿ, ಟಕೀಲಾ, ತ್ರೀ ಪೆಗ್, ಪಾಟಿ ಫ್ರೀಕ್, ಟಾಪ್‌ ಟು ಗಾಂಚಾಲಿ, ಕರಾಬು, ಕೋಲುಮಂಡೆ' ಹಾಡುಗಳು ಸಖತ್ ಸೌಂಡ್ ಮಾಡಿದ್ದವು. ಇದೀಗ ಹೊಸ ಹಾಡು 'ಕಾಟನ್ ಕ್ಯಾಂಡಿ' ಮೂಲಕ ಹೊಸ ವರ್ಷದ ಗಿಫ್ಟ್ ಕೊಟ್ಟು ಫ್ಯಾನ್ಸ್ ಹಾಗೂ ಸಿನಿಪ್ರೇಕ್ಷಕರನ್ನು ಕುಣಿಸುತ್ತಿದ್ದಾರೆ ಚಂದನ್ ಶೆಟ್ಟಿ. ಆದರೆ, ಇದೀಗ ಕಾಟನ್ ಕ್ಯಾಂಡಿ ಕದ್ದ ಟ್ಯೂನ್ ಎಂಬ ಆರೋಪ ಎದುರಾಗಿದ್ದು, ಅದಕ್ಕೆ ಚಂದನ್ ಶೆಟ್ಟಿ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕಿದೆ. 

Latest Videos
Follow Us:
Download App:
  • android
  • ios