ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ. ಸೂಪರ್ ಅಗಿದೆ ನೋಡಿ ಈ ಪ್ರಮೋಷನ್ ಸಾಂಗ್.

ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ 'ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ - ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.

ನಾನು 'ಕೆಂಪೇಗೌಡ' ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.

ನಿವೇದಿತಾ ಗೌಡ ಪ್ರೆಗ್ನೆಂಟ್ ಆದ್ರೆ ನಾನೇ ಮಗು ನೋಡ್ಕೋಬೇಕು, ಅದೀಗ ನನಗಂತೂ ಆಗಲ್ಲ: ಚಂದನ್ ಶೆಟ್ಟಿ ಸ್ಪಷ್ಟನೆ

ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ, ಚಿತ್ರಕ್ಕೆ ಶುಭ ಕೋರಿದರು. ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು. ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.

ಬೆಳ್ಳಂಬೆಳಗ್ಗೆ ಡೇಟ್‌ ಎಂದು ಚಂದನ್‌ ಕೈಗೆ ಕೇಕ್ ಕೊಟ್ಟ ನಿವೇದಿತಾ ಗೌಡ; ಏನ್ ಕರ್ಮ ಗುರು ಎಂದ ನೆಟ್ಟಿಗರು

ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.

YouTube video player