ಏ. 24 ರಂದು ವರನಟ ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಸಂಭ್ರಮ. ಅಣ್ಣಾವ್ರ ಜನ್ಮದಿನವನ್ನು ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಸಿಎಂ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. 

 

ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ. ನಿಜಜೀವನದಲ್ಲೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟುಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ. ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಸಿಎಂ ಟ್ವಿಟರ್ ನಲ್ಲಿ ಶುಭ ಕೋರಿದ್ದಾರೆ. 

ಡಾ. ರಾಜ್ ಕನ್ನಡ ಚಿತ್ರರಂಗ ಕಂಡ ಎವರ್ ಗ್ರೀನ್ ನಟ. ಕನ್ನಡ ಚಿತ್ರರಂಗವನ್ನು ಎತ್ತರಕ್ಕೇರಿಸಿದ ಮೇರು ಕಲಾವಿದ. ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟನೆಯಲ್ಲಿ ಮಾತ್ರ ಸೈ ಎನಿಸಿಕೊಂಡಿಲ್ಲ, ಸಂಗೀತಕ್ಕೂ ಅಪಾರ ಕೊಡುಗೆ ಕೊಟ್ಟಿದ್ದಾರೆ. ಇವರ ಅದ್ಭತ ಕಂಠಸಿರಿಯಿಂದ ಅನೇಕ ಹಾಡುಗಳು ಮೂಡಿ ಬಂದಿವೆ.