ಬೆಂಗಳೂರು(ಜೂ.  07)  ಸ್ಯಾಂಡಲ್ ವುಡ್ ನಟ ಚೇತನ್  ಕುಮಾರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. ಬ್ರಾಹ್ಮಣರ ಬಗ್ಗೆ ನಟ ಚೇತನ್ ಅವಹೇಳನಕಾರಿ ಹೇಳಿಕೆ  ನೀಡಿದ್ದ ಆರೋಪವಿದೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದನೆ ಎಂಬ ರೀತಿಯಲ್ಲಿ ಚೇತನ್  ಮಾತನಾಡಿದ್ದರು ಎಂದು ಆರೋಪಿಸಿದ್ದರು.

ಸರಳವಾಗಿ ಮದುವೆಯಾದ ಚೇತನ್

ಈ ಬಗೆಯ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ಉಂಟುಮಾಡಿದೆ ಹೀಗಾಗಿ ನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು.  ನಟ ಚೇತನ್ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಲಾಗಿದೆ.