Asianet Suvarna News Asianet Suvarna News

ದೊಡ್ಮನೆ ಬ್ಯೂಟಿ ಧನ್ಯಾ ರಾಮ್‌ಕುಮಾರ್ ರೊಮಾನ್ಸ್; ಚೌಕಿದಾರ್ ಜೊತೆ ಏನಿದು ಹೊಸ ಸ್ಟೋರಿ..?

ಈ ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರಲಿರುವ ಸಿನಿಮಾ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌, ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ..

dhanya ramkumar to act in movie chowkidar lead role by pruthvi ambar srb
Author
First Published Jul 1, 2024, 5:34 PM IST

ಸ್ಯಾಂಡಲ್‌ವುಡ್ ಅಂಗಳದಲ್ಲಿ ಒಮ್ಮೆ 'ರಥಾವರ' ಸಿನಿಮಾ ಮಾಡಿ ಖ್ಯಾತಿ ಗಳಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್.. ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಈ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್ ಗೆ ನಾಯಕಿ ಕೂಡ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ ಧನ್ಯರಾಮ್ ಕುಮಾರ್ ಪೃಥ್ವಿ ಅಂಬಾರ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ ಈ ಚೌಕಿದಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿಸಲಾಗಿದ್ದ ಧನ್ಯಾ, ಇತ್ತೀಚೆಗಷ್ಟೇ 'ಜಡ್ಜಮೆಂಟ್' ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ಕಾಲಪತ್ತರ್ ರಿಲೀಸ್ ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಇದೀಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ.

ಅದನ್ನ ಮಾಡ್ಬೇಡ ಮನೆಗೋಗು ಅಂದ್ರು ವಿಷ್ಣು ಸರ್; ಆದ್ರೆ ವಾಸು ಸರ್ ಅದೇನೋ ಮಾಡ್ಬಿಟ್ರು: ನಟ ರಾಜೇಶ್

ಈ ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರಲಿರುವ ಸಿನಿಮಾ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌, ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್ ಎಂದಿದ್ದಾರೆ ಚಂದ್ರಶೇಖರ್ ಬಂಡಿಯಪ್ಪ. 

ಕೊಳಕು ಕಾಮೆಂಟ್ಸ್ ಮಾಡೋರ್ನ ಬ್ಲಾಕ್ ಮಾಡ್ಬಿಡಿ, ದರ್ಶನ್ ಸರ್ ನಿರಪರಾಧಿ ಆಗಿ ಹೊರ ಬರ್ಲಿ: ಅದ್ವಿತಿ ಶೆಟ್ಟಿ

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

ನಟನೆ ಮಾಡು ಅಂದ್ರೆ ಮಾಡ್ಬಿಡ್ತೀನಿ, ಮಾಡ್ಬೇಡ ಅಂದ್ರೆ ತುಂಬಾ ಕಷ್ಟ: ಡಾ ರಾಜ್ ಹೀಗ್ ಹೇಳಿದ್ಯಾಕೆ?

ಜುಲೈ ಮೂರನೇ ತಾರೀಖಿನಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ, ಈ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. 

ಅದಿಲ್ಲ ಅಂದ್ರೆ ಮನುಷ್ಯ ಸತ್ತೋಗ್ಬಿಡ್ಬೇಕು, ಅದೂ ಒಂದ್ ಲೈಫಾ; ಯಶ್ ಪ್ರಶ್ನೆಗೆ ಉತ್ರ ಕೊಟ್ರಾ ಅನುಶ್ರೀ..?

 

Latest Videos
Follow Us:
Download App:
  • android
  • ios