Garuda Gamana Vrishabha Vahana: ರಾಜ್ ಬಿ. ಶೆಟ್ಟಿ ಚಿತ್ರದ ಬಗ್ಗೆ ಟ್ವೀಟ್ ಮಾಡಿದ ರಾಮ್ ಗೋಪಾಲ್ ವರ್ಮಾ
ರಿಷಬ್ ಶೆಟ್ಟಿ ಹಾಗೂ ರಾಜ್ ಬಿ. ಶೆಟ್ಟಿ ಕಾಂಬಿನೇಷನ್‌ನ ಗರುಡಗಮನ ವೃಷಭವಾಹನ ಚಿತ್ರವನ್ನು ಟಾಲಿವುಡ್‌ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮೆಚ್ಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ರಾಜ್ ಬಿ. ಶೆಟ್ಟಿ (Raj B Shetty) ಹಾಗೂ ರಿಷಬ್ ಶೆಟ್ಟಿ (Rishab Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು 'ಜೀ5' (Zee5) ಒಟಿಟಿಯಲ್ಲಿ ಧೂಳೆಬ್ಬಿಸಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ 'ಜೀ5' ಒಟಿಟಿಗೆ (OTT) ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡಗಮನ ವೃಷಭವಾಹನ' ಸಿನಿಮಾ ಮೊದಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ನಿಮಿಷಗಳ ವೀಕ್ಷಣೆ ದಾಖಲಿಸಿದೆ. ಇದೀಗ ಈ ಸಿನಿಮಾವನ್ನು ಟಾಲಿವುಡ್‌ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಮೆಚ್ಚಿಕೊಂಡಿದ್ದಾರೆ.
ಹೌದು! 'ಗರುಡಗಮನ ವೃಷಭವಾಹನ' ಚಿತ್ರವು ಸಿನಿರಸಿಕರಿಗೂ ಮಾತ್ರವಲ್ಲದೇ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಇಷ್ಟವಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಮನಸೂರೆಗೊಳಿಸಿದೆ. ಇಡೀ ಸಿನಿಮಾಕ್ಕೆ ಫಿದಾ ಆಗಿರುವ ಆರ್‌ಜಿವಿ ಚಿತ್ರದ ನಟ ಕಮ್ ನಿರ್ದೇಶಕ ರಾಜ್ ಬಿ.ಶೆಟ್ಟಿಯನ್ನು ಹೊಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ (Tweet) ಮಾಡಿರುವ ರಾಮ್ ಗೋಪಾಲ್ ವರ್ಮಾ, ಚಿತ್ರವನ್ನು ಹಾಗೂ ರಾಜ್ ಬಿ.ಶೆಟ್ಟಿ ಅಭಿನಯವನ್ನು ಒಂದಷ್ಟು ವಿಜ್ಞಾನ ಪದಗಳಲ್ಲಿ ಬಣ್ಣಿಸಿದ್ದಾರೆ.
Garuda Gamana Vrishabha Vahana: ಓಟಿಟಿಯಲ್ಲಿ ಧೂಳೆಬ್ಬಿಸಿದ ರಾಜ್ ಬಿ. ಶೆಟ್ಟಿ ಚಿತ್ರ
ಸಿನಿಮಾ ಮತ್ತೊಂದು ಲೆವೆಲ್‌ನಲ್ಲಿದೆ. ರಾಜ್ ಬಿ.ಶೆಟ್ಟಿ ಪಾತ್ರಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಈ ಮೂಲಕ ಅವರು ಸಂಪೂರ್ಣ ರೂಪಾಂತರ ಹೊಂದಿದ್ದಾರೆ ಎಂದಿದ್ದು, ಇಡೀ ಚಿತ್ರ 'ಅಲ್ಟ್ರಾಸ್ಕೋಪಿಕ್' ಎಂದು ಹಾಡಿ ಹೊಗಳಿದ್ದಾರೆ. ಮುಖ್ಯವಾಗಿ ರಾಮ್‌ಗೋಪಾಲ್ ವರ್ಮಾಗೂ ಮೊದಲೇ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಕೂಡಾ 'ಗರುಡಗಮನ ವೃಷಭವಾಹನ' ಸಿನಿಮಾವನ್ನು ಇಷ್ಟಪಟ್ಟಿದ್ದರು. ಇದೀಗ ಆರ್‌ಜಿವಿ ಕೂಡ ರಾಜ್ ಸಿನಿಮಾಗೆ ಫಿದಾ ಆಗಿದ್ದಾರೆ. ಕಳೆದ ವರ್ಷ ನವೆಂಬರ್ 19ರಂದು ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿದ್ದ ಈ ಸಿನಿಮಾ ಥಿಯೇಟರ್‌ನಲ್ಲೂ ಹವಾ ಎಬ್ಬಿಸಿತ್ತು. ಇದೀಗ 'ಜೀ5' ಒಟಿಟಿಯಲ್ಲಿ ಬಿಡುಗಡೆಯಾಗಿ ಸಿನಿರಸಿಕರಿಂದ ಮೆಚ್ಚುಗೆಯನ್ನು ಪಡೆಯುತ್ತಿದೆ.
ಇತ್ತೀಚೆಗಷ್ಟೇ ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ ಶಿವಣ್ಣ (Shivarajkumar) 'ಗರುಡ ಗಮನ ವೃಷಭ ವಾಹನ' ಸಿನಿಮಾಗೆ ಸಂಬಂಧಪಟ್ಟಂತೆ ಚಿತ್ರದ ನಾಯಕ ರಾಜ್ ಬಿ ಶೆಟ್ಟಿಗೆ ಸರ್ಪ್ರೈಸ್ ಕರೆ ಮಾಡಿದ್ದರು. ಈಗಾಗಲೇ ಜೀ5 ನಲ್ಲಿ ಬಿಡುಗಡೆಯಾಗಿರುವ 'ಭಜರಂಗಿ 2' (Bhajarangi 2) ದಾಖಲೆಯ ವೀಕ್ಷಣೆಯೊಂದಿಗೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಂತಸದಲ್ಲಿರುವ ಶಿವಣ್ಣ ರಾಜ್ ಬಿ ಶೆಟ್ಟಿಗೆ ಕರೆ ಮಾಡಿ ಮಾತನಾಡಿದ್ದರು. ಮಂಗಳಾದೇವಿಗೆ ನೀನೇನು ದೊಡ್ಡ ಡಾನಾ? ಎಂದು ಕೇಳಿದ್ದಾರೆ. ಯಾರು ಯಾರು ಎಂದು ಗೊಂದಲದಲ್ಲಿ ಕೇಳಿರುವ ರಾಜ್ ಶೆಟ್ಟಿಗೆ, ಅಲ್ಲೇ ಬರ್ಲಾ?
Garuda Gamana Vrishabha Vahana: ಚಿತ್ರಕ್ಕೆ ಶುಭ ಹಾರೈಸಿದ ವಿಕಟಕವಿ ಯೋಗರಾಜ್ ಭಟ್
ನಾನೋ ನೀನೋ ನೋಡೇ ಬಿಡೋಣ ಎಂದು ಖಡಕ್ ಆಗಿ ನುಡಿದಿದ್ದಾರೆ ಶಿವಣ್ಣ. ಸರಿ ಬನ್ನಿ, ನೋಡೇ ಬಿಡೋಣ ಎಂದು ಪ್ರತ್ಯುತ್ತರ ನೀಡಿದ್ದಾರೆ ರಾಜ್. ಜತೆಗೆ ನೀವ್ಯಾರು ಎಂದು ಪ್ರಶ್ನಿಸಿದ್ದಾರೆ. ಆಗ ಶಿವಣ್ಣ ನಾನು ಭಜರಂಗಿ ಎಂದು ನಕ್ಕಿದ್ದಾರೆ. ಒಂದು ಕ್ಷಣ ಯೋಚಿಸಿದ ರಾಜ್ ಬಿ ಶೆಟ್ಟಿಯವರಿಗೆ ನಂತರ ಅರಿವಾಗಿದೆ. ನಂತರ ಇಬ್ಬರೂ ಮಾತು ಮುಂದುವರೆಸಿದ್ದಾರೆ. ನೀವು ಭಜರಂಗಿ ಮಾಡಿದ ನಂತರ ನಮ್ಮ ಗರುಡ ಗಮನ ಬಂದಿದ್ದು. ಆದ್ದರಿಂದ ನೀವೇ ದೊಡ್ಡ ಡಾನ್ ಎಂದು ತಮಾಷೆ ಮಾಡಿದ್ದರು ರಾಜ್ ಬಿ ಶೆಟ್ಟಿ. ಶಿವರಾಜ್ಕುಮಾರ್, ರಾಜ್ ಬಿ.ಶೆಟ್ಟಿಯವರ ಚಿತ್ರಗಳನ್ನು ಹಾಗೂ ಅವರ ಅಭಿನಯವನ್ನು ಈ ವೇಳೆ ಶ್ಲಾಘಿಸಿದ್ದರು.