ವಿಷ್ಣುವರ್ಧನ್ ನಟನೆಯ ಸಿನಿಮಾಗೀತೆಗಳಿಗೆ ಅಭಿಮಾನಿಗಳು ಹೆಜ್ಜೆ ಹಾಕುವ ಮೂಲಕ ಅಮೃತ ಮಹೋತ್ಸವಕ್ಕೆ ಅದ್ದೂರಿ ತೆರೆ ಬೀಳಲಿದೆ. ಈ ಅದ್ದೂರಿ ಅಮೃತ ಮಹೋತ್ಸವಕ್ಕೆ ಈಗಾಗಲೇ ಹಲವು ಸಾವಿರ ಅಭಿಮಾನಿಗಳು ಆಗಮಿಸಿದ್ದು, 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದೆ.

ಡಾ.ವಿಷ್ಣುವರ್ಧನ್ 75ನೇ ಅಮೃತ ಮಹೋತ್ಸವ; ಅದ್ದೂರಿ ಆಚರಣೆ

ಕನ್ನಡದ ಮೇರು ನಟ, 'ಕರ್ನಾಟಕ ರತ್ನ' ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮವು ಇಂದು, ಅಂದರೆ 27 ಸೆಪ್ಟೆಂಬರ್ 2026 ರಂದು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯುತ್ತಿದೆ. ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಈಗಾಗಲೇ ಕನ್ನಡ ಚಿತ್ರರಂಗದ ಬಹಳಷ್ಟು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಹಲವು ಕಲಾವಿದರು ಬರುವ ನಿರೀಕ್ಷೆ ಇದೆ.

ಯಾರೆಲ್ಲಾ ಬಂದಿದ್ದಾರೆ?

ನಟ ಶ್ರೀನಾಥ್, ಸಿಹಿ ಕಹಿ ಚಂದ್ರು, ಮಾಲವೀಕ ಅವಿನಾಶ್, ಅಬಿಜಿತ್, ಜಯಮಾಲ, ಅವಿನಾಶ್, ರಮೇಶ್ ಭಟ್, ಭವ್ಯ, ರಮೇಶ್ ಅರವಿಂದ್, ರಾಜೇಂದ್ರಸಿಂಗ್ ಬಾಬು, ಶ್ರೀನಿವಾಸ್ ಮೂರ್ತಿ, ಶೃತಿ, ರಮೇಶ್ ಭಟ್, ಮುಂಖ್ಯಮಂತ್ರಿ ಚಂದ್ರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ದೀಪ ಬೆಳಗಿಸುವ ಮೂಲಕ ಕಲಾವಿದರು ಈ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದಾರೆ.

ಏನೆಲ್ಲಾ ಕಾರ್ಯಕ್ರಮಗಳಿವೆ?

ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಅತ್ಯಂತ ಅದ್ದೂರಿ ಕಾರ್ಯಕ್ರಮ

ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ವಿಷ್ಣು ಹಬ್ಬ

ದಾದಾ ನೆನಪಲ್ಲಿ ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ

ಡಾ. ವಿಷ್ಣುವರ್ಧನ್ ಕಲಾ ರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಣೆ

ಬೆಳಿಗ್ಗೆ 6 ಗಂಟೆಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಭವ್ಯ ಮೆರವಣಿಗೆ ಮಾಡಿದ್ದಾರೆ. 1.5 ಕಿ.ಮೀ ಉದ್ದದ ಕನ್ನಡ ಧ್ವಜದೊಂದಿಗೆ ಭವ್ಯ ಮೆರವಣಿಗೆ ಆಗಿದೆ. 2 ಸಾವಿರ ಅಭಿಮಾನಿಗಳಿಂದ ಕನ್ನಡ ಧ್ವಜ ಮೆರವಣಿಗೆ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ವಿಷ್ಣು ಅಭಿಮಾನಿಗಳು ಈ ಧ್ವಜದ ಮೆರವಣಿಗೆಯನ್ನು ನೋಡಿ ಖುಷಿಯಾಗಿದ್ದಾರೆ, ದಿವಂಗತ ನಟ ವಿಷ್ಣುವರ್ಧನ್ ಅವರನ್ನು ಸ್ಮರಿಸಿದ್ದಾರೆ.

ವಿಷ್ಣು ಅಮೃತ ಮಹೋತ್ಸವಕ್ಕೆ ಚಿತ್ರರಂಗದ ಗಣ್ಯರ ಸಮಾಗಮ

ನಟರು, ಕಲಾವಿದರು ಹಾಗೂ ಡಾ. ವಿಷ್ಣು ಸೇನಾ ಸಮಿತಿಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗಿ ಆಗಿದ್ದಾರೆ.

ಬೆಳಿಗ್ಗೆ 9.30ಕ್ಕೆ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ನಡೆದಿದೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ. ಶ್ರೀನಾಥ್, ಡಾ. ರಮೇಶ್ ಅರವಿಂದ್, ಶ್ರುತಿ, ಡಾ. ಜಯಮಾಲಾ, ಅವಿನಾಶ್, ಮಾಳವಿಕಾ ಅವಿನಾಶ್, ಎಸ್. ನಾರಾಯಣ್, ರಾಜೇಂದ್ರ ಸಿಂಗ್ ಬಾಬು, ಡಾ. ಸುಂದರರಾಜ್, ಅಭಿಜಿತ್, ಸಿಹಿಕಹಿ ಚಂದ್ರು, ಶ್ರೀಮುರಳಿ, ರಮೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದಾರೆ

ಬೆಳಿಗ್ಗೆ 11 ಗಂಟೆಯಿಂದ ಗಾಯಕ ರಾಜೇಶ್ ಕೃಷ್ಣನ್ ನೇತೃತ್ವದಲ್ಲಿ ಸಂಗೀತ ರಸ ಮಂಜರಿ ಕಾರ್ಯಕ್ರಮ ನಡೆಯುತ್ತಿದೆ.

ಬಳಿಕ ‘ಸಂಪಾದಕರ ಕಣ್ಣಲ್ಲಿ ವಿಷ್ಣುವರ್ಧನ್’ ವಿಶೇಷ ಸಂವಾದ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 3.30ಕ್ಕೆ 75 ಕಲಾವಿದರಿಗೆ ಗೌರವ ಸಲ್ಲಿಕೆ

ಸಂಜೆ 5 ಗಂಟೆಗೆ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಪ್ರಮುಖ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.

ಶಿವರಾಜ್‌ಕುಮಾರ್, ರವಿಚಂದ್ರನ್, ಸುದೀಪ್, ದುನಿಯಾ ವಿಜಯ್, ಗಣೇಶ್, ನೀನಾಸಂ ಸತೀಶ್, ನೆನಪಿರಲಿ ಪ್ರೇಮ್, ಶ್ರುತಿ, ಜಯಮಾಲಾ, ಶ್ರೀನಗರ ಕಿಟ್ಟಿ, ನಟಿ ರಚಿತಾ ರಾಮ್ ಈಗಾಗಲೇ ಆಗಮಿಸಿದ್ದಾರೆ.

ಸಂಜೆ 7:00 ಘಂಟೆಯಿಂದ ವಸಿಷ್ಠ ಸಿಂಹ, ನವೀನ್ ಕೃಷ್ಣ, ಕಾರುಣ್ಯ ರಾಮ್...ಅಂಕುಶ್ ಏಕಲವ್ಯ..ಸೇರಿದಂತೆ ಹಲವಾರು ಕಲಾವಿದರಿಂದ ಸಾಂಸ್ಕೃತಿಕ ಹಾಗೂ ಕಲಾ ಪ್ರದರ್ಶನ ನಡೆಯಲಿದೆ.

ರಾತ್ರಿ 10 ಗಂಟೆಗೆ ಲೇಸರ್ ಶೋ, ‘ದಾದಾ DJ’ ವಿಶೇಷ ನೃತ್ಯ ರೂಪಕ

ವಿಷ್ಣುವರ್ಧನ್ ನಟನೆಯ ಸಿನಿಮಾಗೀತೆಗಳಿಗೆ ಅಭಿಮಾನಿಗಳು ಹೆಜ್ಜೆ ಹಾಕುವ ಮೂಲಕ ಅಮೃತ ಮಹೋತ್ಸವಕ್ಕೆ ಅದ್ದೂರಿ ತೆರೆ ಬೀಳಲಿದೆ. ಈ ಅದ್ದೂರಿ ಅಮೃತ ಮಹೋತ್ಸವಕ್ಕೆ ಈಗಾಗಲೇ ಹಲವು ಸಾವಿರ ಅಭಿಮಾನಿಗಳು ಆಗಮಿಸಿದ್ದು, 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ನೇತೃತ್ವವನ್ನು ಡಾ. ವಿಷ್ಣು ಸೇನಾ ಸಮಿತಿ ವಹಿಸಿಕೊಂಡಿದೆ.

ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.