ದುನಿಯಾ ವಿಜಯ್ ಹೊಸ ಚಿತ್ರದ ಹೆಸರು ರಾಚಯ್ಯ: ಪುತ್ರಿ ರಿತನ್ಯಾ ಎಂಟ್ರಿ ಹೇಗಿರುತ್ತೆ?
ದುನಿಯಾ ವಿಜಯ್ ನಟನೆಯಲ್ಲಿ ಸೆಟ್ಟೇರಿರುವ, ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಚಿತ್ರಕ್ಕೆ ‘ರಾಚಯ್ಯ’ ಎಂಬ ಶೀರ್ಷಿಕೆ ಇಡಲಾಗಿದೆ. ಆ್ಯಕ್ಷನ್ ಹಾಗೂ ಮಾಸ್ ಕತೆಯಾಗಿರುವುದರಿಂದ ‘ರಾಚಯ್ಯ’ ಹೆಸರು ಸೂಕ್ತ ಎಂಬುದು ಚಿತ್ರತಂಡದ ಆಲೋಚನೆ.
ದುನಿಯಾ ವಿಜಯ್ ನಟನೆಯಲ್ಲಿ ಸೆಟ್ಟೇರಿರುವ, ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಚಿತ್ರಕ್ಕೆ ‘ರಾಚಯ್ಯ’ ಎಂಬ ಶೀರ್ಷಿಕೆ ಇಡಲಾಗಿದೆ. ಆ್ಯಕ್ಷನ್ ಹಾಗೂ ಮಾಸ್ ಕತೆಯಾಗಿರುವುದರಿಂದ ‘ರಾಚಯ್ಯ’ ಹೆಸರು ಸೂಕ್ತ ಎಂಬುದು ಚಿತ್ರತಂಡದ ಆಲೋಚನೆ. ಚಿತ್ರಕ್ಕೆ ಶೇ.60 ಭಾಗ ಚಿತ್ರೀಕರಣ ಆಗಿದೆ. ಈ ಚಿತ್ರದ ಮೂಲಕ ದುನಿಯಾ ವಿಜಯ್ ಅವರ ಮೊದಲ ಪುತ್ರಿ ರಿತನ್ಯಾ ನಟಿಯಾಗಿ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಇವರಿಗೆ ಜೋಡಿಯಾಗಿ ‘ಡೇರ್ ಡೆವಿಲ್ ಮುಸ್ತಾಪಾ’ ಚಿತ್ರದ ಶಿಶಿರ ಬೈಕಾಡಿ ನಾಯಕನಾಗಿ ನಟಿಸುತ್ತಿದ್ದಾರೆ. ಕೆ ವಿ ಸತ್ಯಪ್ರಕಾಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕನ್ನಡದ ಹಿರಿಯ ನಟಿ ಉಮಾಶ್ರೀ ಅವರು ವಿಜಯ್ ಜೊತೆಗೆ ಮತ್ತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಭೀಮಾ ತೀರದಲ್ಲಿ ಉಮಾಶ್ರೀ ಅವರು ವಿಜಯ್ ಅಮ್ಮನ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲೂ ಅಮ್ಮನ ಪಾತ್ರ ಮಾಡಿದ್ದಾರೆ ಅನ್ನೋ ಸುದ್ದಿನೂ ಇದೆ ನೋಡಿ. ಚಿತ್ರದಲ್ಲಿ ಉಮಾಶ್ರೀ ಅವರು ಇರೋ ಬಗ್ಗೆ ಜಡೇಶ್ ಹೇಳಿಕೊಂಡಿದ್ದಾರೆ. ಹೌದು, ನಮ್ಮ ಚಿತ್ರದಲ್ಲಿ ಉಮಾಶ್ರೀ ಅವರು ಇದ್ದಾರೆ. ಬುಲ್ ಬುಲ್ ರಚಿತಾ ರಾಮ್ ಈ ಚಿತ್ರದ ನಾಯಕಿ ಆಗಿದ್ದಾರೆ. ಈ ಮೂಲಕ ತಮ್ಮ ಚಿತ್ರದ ನಾಯಕಿ ಇವರೇ ಅನ್ನೋದನ್ನ ಹೇಳಿಕೊಂಡಿದ್ದಾರೆ. ಬುಲ್ ಬುಲ್ ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಈ ಹಿಂದೆ ಜಾಣಿ ಜಾನಿ ಯೆಸ್ ಪಪ್ಪಾ ಚಿತ್ರ ಮಾಡಿದ್ದರು. ಈ ಸಿನಿಮಾ ಆದ್ಮೇಲೆ ಈಗಲೇ ಈಗ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.
ಕೆಣಕಿ, ಹಂಗಿಸಿದವರಿಗೆ ಭೀಮನ ಯಶಸ್ಸೇ ಉತ್ತರ: ದುನಿಯಾ ವಿಜಯ್ ಅವರ ‘ಭೀಮ’ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಾಣುತ್ತಿದೆ. ಈ ಖುಷಿಯಲ್ಲೇ ಚಿತ್ರತಂಡ ಸಂಭ್ರಮಾಚರಿಸಿತು. ಈ ಸಂದರ್ಭದಲ್ಲಿ ದುನಿಯಾ ವಿಜಯ್, ‘ನನಗೆ ಸ್ವತಂತ್ರವಾಗಿ ಸಿನಿಮಾ ಮಾಡುವ ಅವಕಾಶ ಕೊಟ್ಟ ನಿರ್ಮಾಪಕರಾದ ಜಗದೀಶ್ ಗೌಡ ಹಾಗೂ ಕೃಷ್ಣಸಾರ್ಥಕ್ ಅವರಿಗೆ ಋಣಿಯಾಗಿದ್ದೇನೆ. ನಮ್ಮನ್ನು ಕೆಣಕಿ, ಹಂಗಿಸಿದವರಿಗೆ ಈ ಚಿತ್ರದ ಯಶಸ್ಸು ಉತ್ತರ ಕೊಟ್ಟಿದೆ. ಎಲ್ಲರೂ ಇಂಥ ಚಿತ್ರಗಳನ್ನು ನೋಡಬೇಕು, ಮಕ್ಕಳು, ಪೋಷಕರು ಎಲ್ಲರೂ ಕೂತು ನೋಡುವ ಚಿತ್ರವಿದು ಎಂದು ಮೆಚ್ಚಿಕೊಳ್ಳುತ್ತಿದ್ದಾರೆ. ಒಳ್ಳೆಯ ವಿಚಾರ- ಸಂದೇಶ ಹೇಳುವುದಕ್ಕೆ ನಾನು ರಗಡ್ ದಾರಿಯನ್ನು ಆಯ್ಕೆ ಮಾಡಿಕೊಂಡೆ.
ಭೀಮ ಕತೆ ನಾನು ನೋಡಿದ್ದು, ಕೇಳಿದ್ದು, ಅನುಭವಿಸಿದ್ದು: ದುನಿಯಾ ವಿಜಯ್ Exclusive Interview
ಇರೋ ಸಂಗತಿಗಳನ್ನು ಯಥಾವತ್ತಾಗಿ ಹೇಳಿದ್ದೇನೆ. ಭೀಮ ಚಿತ್ರದಲ್ಲಿರುವ ಕತೆ ಸಮಾಜಕ್ಕೆ ಎಚ್ಚರಿಕೆಯ ಗಂಟೆ’ ಎಂದರು. ಕೃಷ್ಣಸಾರ್ಥಕ್, ಜಗದೀಶ್ ಗೌಡ, ‘ಪ್ರೀ ರಿಲೀಸ್ ಬಿಸಿನೆಸ್ ಇಲ್ಲದೆ ಇರುವ ಹೊತ್ತಿನಲ್ಲಿ ಶೇ.99ರಷ್ಟು ರಿಸ್ಕ್‌ನಲ್ಲಿ ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು ನಮ್ಮ ಚಿತ್ರವನ್ನು ಬಿಡುಗಡೆ ಮಾಡಿದ್ದೆವು. ಆ ನಂಬಿಕೆ ಈಗ ನಿಜವಾಗಿದೆ. ನಮ್ಮ ಚಿತ್ರದ ಓಟಿಟಿ, ಟೀವಿ ಹಕ್ಕು ಯಾವುದೇ ವ್ಯಾಪಾರ ಆಗಿಲ್ಲ. ಚಿತ್ರಮಂದಿರ ನಂಬಿಕೊಂಡು ಸಿನಿಮಾ ಮಾಡಿದರೆ ಗೆದ್ದೇ ಗೆಲ್ಲುತ್ತೇವೆ ಎಂಬುದು ಸಾಬೀತಾಗಿದೆ. ಹಿಂದಿನಂತೆ ಈಗ ಚಿತ್ರಮಂದಿರಗಳನ್ನೇ ನಂಬಿಕೊಂಡು ಸಿನಿಮಾ ಮಾಡಬೇಕಿದೆ’ ಎಂದರು.