Asianet Suvarna News Asianet Suvarna News

'ರಾಕ್ಷಸ'ನಾದ ಡೈನಾಮಿಕ್ ಪ್ರಿನ್ಸ್: ಹಾರರ್‌ ಲೂಪ್ ಸಿನಿಮಾದಲ್ಲಿ ಪ್ರಜ್ವಲ್‌ ದೇವರಾಜ್‌

ಹಾರರ್‌ ಟೈಮ್‌ ಲೂಪ್‌ ಕಾನ್ಸೆಪ್ಟ್‌ನಲ್ಲಿ ಪ್ರಜ್ವಲ್‌ ದೇವರಾಜ್‌ ನಟಿಸುತ್ತಿರುವ ಸಿನಿಮಾ ಹೆಸರು ‘ರಾಕ್ಷಸ’. ಮಮ್ಮಿ ಖ್ಯಾತಿಯ ಲೋಹಿತ್ ಹೆಚ್‌ ಇದರ ನಿರ್ದೇಶಕ. ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬದಂದು ಪೋಸ್ಟರ್‌ ಬಿಡುಗಡೆಯಾಗಿದೆ. 

dynamic prince prajwal devaraj starrer rakshasa movie poster out gvd
Author
First Published Jul 5, 2024, 2:19 PM IST

ಹಾರರ್‌ ಟೈಮ್‌ ಲೂಪ್‌ ಕಾನ್ಸೆಪ್ಟ್‌ನಲ್ಲಿ ಪ್ರಜ್ವಲ್‌ ದೇವರಾಜ್‌ ನಟಿಸುತ್ತಿರುವ ಸಿನಿಮಾ ಹೆಸರು ‘ರಾಕ್ಷಸ’. ಮಮ್ಮಿ ಖ್ಯಾತಿಯ ಲೋಹಿತ್ ಹೆಚ್‌ ಇದರ ನಿರ್ದೇಶಕ. ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬದಂದು ಪೋಸ್ಟರ್‌ ಬಿಡುಗಡೆಯಾಗಿದೆ. 55 ದಿನಗಳ ಕಾಲ ಚಿತ್ರೀಕರಣ ಮುಗಿಸಿರುವ ಈ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂಪೂರ್ಣ ಚಿತ್ರೀಕರಣ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಮಾಡಿರುವುದು ವಿಶೇಷ. 

ಇತ್ತೀಚಿನ ದಿನಗಳಲ್ಲಿ ಪ್ರಜ್ವಲ್ ವಿಭಿನ್ನ ರೀತಿಯ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಹಾರರ್ ಸಿನಿಮಾವೊಂದಕ್ಕೆ ಕೈ ಹಾಕಿದ್ದಾರೆ. ಹಾರರ್ ಚಿತ್ರಗಳ ಮೂಲಕವೇ ಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆ್ಯಕ್ಷನ್​​​ ಕಟ್ ಹೇಳಿದ್ದಾರೆ. ಈ ಚಿತ್ರದ ಶೀರ್ಷಿಕೆ 'ರಾಕ್ಷಸ'. ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಹೌದು, ಇದೇ ಮೊದಲ ಬಾರಿಗೆ ವರ್ಲ್ಡ್ ಸಿನಿಮಾದಲ್ಲಿ ಹಾರರ್ ಟೈಂ ಲೂಪ್ ವರ್ಷನ್ ಟ್ರೈ ಮಾಡಿದ್ದಾರೆ ನಿರ್ದೇಶಕ ಲೋಹಿತ್.

ಶಾನ್ವಿ ಎಂಟರ್​​ರ್ಪ್ರೈಸಸ್ ಅಡಿಯಲ್ಲಿ ಪ್ರದೀಪ್ ಮಹೀಶಿ ಪ್ರೆಸೆಂಟ್​ ಮಾಡಲಿದ್ದಾರೆ. ದೀಪು ಬಿ.ಎಸ್, ನವೀನ್ ಗೌಡ ಹಾಗೂ ಮಾನಸ ಜಂಟಿಯಾಗಿ ರಾಕ್ಷಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ, ಜೇಬಿನ್ ಪಿ ಜೋಕಬ್ ಕ್ಯಾಮರಾ ವರ್ಕ್ ಈ ಸಿನಿಮಾಗಿದೆ. ಸುಮಾರು 55 ದಿನಗಳ ಚಿತ್ರೀಕರಣ ಮಾಡಲಾಗಿದೆ. ಸಂಪೂರ್ಣ ಶೂಟಿಂಗ್​​​ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಮಾಡಿರೋದು ಚಿತ್ರದ ವಿಶೇಷ. 

ಕನ್ನಡ ಚಿತ್ರಗಳಿಗೆ ಅಮೆಜಾನ್ ಕ್ರೈಮ್ ಮಾಡುತ್ತಿದೆಯಾ: ಪ್ರೈಮ್ ಬಗ್ಗೆ 10 ವಿಚಾರಗಳು ಇಲ್ಲಿವೆ!

ಪ್ರಜ್ವಲ್ ಜೊತೆಯಾಗಿ ಅರುಣ್ ರಾಥೋಡ್, ಶ್ರೀಧರ್, ಗೌತಮ್, ಸೋಮಶೇಖರ್, ವಿಹಾನ್ ಕೃಷ್ಣ ಜಯಂತ್ ಸೇರಿದಂತೆ ಇನ್ನೂ ಅನೇಕರು ಅಭಿನಯಿಸಿದ್ದಾರೆ. ಸದ್ಯ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಿದ್ಧತೆ ನಡೆಸುತ್ತಿದೆ. ಪ್ರಜ್ವಲ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಶುರು ಮಾಡಿದೆ. ಇಷ್ಟು ದಿನಗಳ ಕಾಲ ಕಮರ್ಷಿಯಲ್ ಚಿತ್ರಗಳಲ್ಲಿ ಕಾಣಿಸಿಕೊಳ್ತಿದ್ದ ಪ್ರಜ್ವಲ್ ಇದೇ ಮೊದಲ ಬಾರಿಗೆ ವಿಭಿನ್ನವಾಗಿ ಹಾರರ್ ಲುಕ್​​ನಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

Latest Videos
Follow Us:
Download App:
  • android
  • ios