Asianet Suvarna News Asianet Suvarna News

ರಾಕೇಶ್ ಬಿರಾದಾರ್ 'ಧೀರ ಸಾಮ್ರಾಟ್‌'ಗೆ ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ಸಾಥ್!

ಕುಟುಂಬ ಸಮೇತ ನೋಡಬಹುದಾದ ಸೆಸ್ಪನ್ಸ್ ಥ್ರಿಲ್ಲರ್ ಕಥೆಯಲ್ಲಿ, ಐದು ಧೀರ ಹುಡುಗರ ಗೆಳತನ ಹೇಗಿರುತ್ತೆ ಎಂಬುದನ್ನು ಹೇಳಲಾಗಿದೆ. 'ಸಾವಿಗೆ ಸಾವಿಲ್ಲ' ಅಂತ ಅಡಿಬರಹವಿದೆ. ಒಬ್ಬ ವ್ಯಕ್ತಿಗೆ ಸಂಬಂಧಿಸಿದಂತೆ ಸಮಾಜದಲ್ಲಿ ಯಾವುದೋ ಒಂದು ವರ್ಗದಲ್ಲಿ ಶೋಷಣೆ ಆಗುತ್ತಿರುತ್ತದೆ. 

Dynamic Prince Prajwal Devaraj supports newcomers movie Dheera Samrat srb
Author
First Published Feb 2, 2024, 7:28 PM IST | Last Updated Feb 3, 2024, 2:35 PM IST

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ 'ಧೀರಸಾಮ್ರಾಟ್' ಚಿತ್ರಕ್ಕೆ ತನ್ವಿ ಪ್ರೊಡಕ್ಷನ್ ಹೌಸ್ ಮುಖಾಂತರ ಗುಲ್ಬರ್ಗಾದ ಗುರುಬಂಡಿ ನಿರ್ಮಾಣ ಮಾಡಿರುವುದು ಎರಡನೇ ಅನುಭವ. ಈಗಾಗಲೇ ಎರಡು ಹಾಡುಗಳು ಬಿಡುಗಡೆಗೊಂಡಿದ್ದು, ವೈರಲ್ ಆಗಿ ಸದ್ದು ಮಾಡುತ್ತಿದೆ. ಮೊನ್ನೆ ನಡೆದ ಸಮಾರಂಭದಲ್ಲಿ ಪ್ರಜ್ವಲ್ ದೇವರಾಜ್ (Prajwal Devaraj)ಹಾಡು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ.  

ಈ ಸಂದರ್ಭದಲ್ಲಿ ನಾಯಕ ರಾಕೇಶ್ ಬಿರದಾರ್, ನಾಯಕಿ ಅದ್ವಿತಿಶೆಟ್ಟಿ, ನಾಗೇಂದ್ರಅರಸು, ಯತಿರಾಜ್, ರವೀಂದ್ರನಾಥ್, ಇಂಚರ, SankalpaPatil, ಹರೀಶ್ಅರಸು, ಸಾಹಸ ಸಂಯೋಜಕ ಕೌರವ ವೆಂಕಟೇಶ್, ಸಂಭಾಷಣೆಕಾರ ಸಾಯಿರಾಮ್ ಉಪಸ್ಥಿತರಿದ್ದರು.       

ಸುಮಾರು ಒಂದೂವರೆ ದಶಕಕ್ಕೂ ಹೆಚ್ಚು ಕಾಲ ವಾಹಿನಿಯಲ್ಲಿ ನಿರೂಪಕ, ಕಾರ್ಯಕ್ರಮದ ಮುಖ್ಯಸ್ಥನಾಗಿ ಸೇವೆ ಸಲ್ಲಿಸಿದ ಅನುಭವ ಇರುವ Pavankumar(ಪಚ್ಚಿ) ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡುವ ಜತೆಗೆ ನೋಡುಗರು ಇಷ್ಟಪಡುವಂತಹ ನಕರಾತ್ಮಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಾಗೂ ಶೀರ್ಷಿಕೆ ಗೀತೆಗೆ ಸಾಹಿತ್ಯ ಮತ್ತು ಸಂಭಾಷಣೆಯಲ್ಲಿ ತೊಡಗಿಕೊಂಡಿದ್ದಾರೆ. 

ಕುಟುಂಬ ಸಮೇತ ನೋಡಬಹುದಾದ ಸೆಸ್ಪನ್ಸ್ ಥ್ರಿಲ್ಲರ್ ಕಥೆಯಲ್ಲಿ, ಐದು ಧೀರ ಹುಡುಗರ ಗೆಳತನ ಹೇಗಿರುತ್ತೆ ಎಂಬುದನ್ನು ಹೇಳಲಾಗಿದೆ. 'ಸಾವಿಗೆ ಸಾವಿಲ್ಲ' ಅಂತ ಅಡಿಬರಹವಿದೆ. ಒಬ್ಬ ವ್ಯಕ್ತಿಗೆ ಸಂಬಂಧಿಸಿದಂತೆ ಸಮಾಜದಲ್ಲಿ ಯಾವುದೋ ಒಂದು ವರ್ಗದಲ್ಲಿ ಶೋಷಣೆ ಆಗುತ್ತಿರುತ್ತದೆ. ಇಂತಹ ಮುಖ್ಯ ಅಂಶಗಳನ್ನು ಸನ್ನಿವೇಶಕ್ಕೆ ಬಳಸಲಾಗಿದೆ. ಶೀರ್ಷಿಕೆ ಅಂದರೆ ಏನು? ಯಾತಕ್ಕೆ ಇಡಲಾಗಿದೆ. ಕೊನೆಯಲ್ಲಿ ಯಾರು ಎಂಬುದು ಕ್ಲೈಮಾಕ್ಸ್ದಲ್ಲಿ ತಿಳಿಯಲಿದೆ.

ಶಿವಣ್ಣ ಜತೆ ಸಿನಿಮಾ ಮಾಡಲು ಸಜ್ಜಾಗಿ ಬಂದ್ರು ಹೇಮಂತ್‌ ರಾವ್; ವೈಶಾಖ್ ಗೌಡ ಕೊಟ್ರು ಗ್ರೀನ್ ಸಿಗ್ನಲ್! 

ತಾರಾಗಣದಲ್ಲಿ ಶಂಕರಭಟ್,ಶೋಭರಾಜ್, ಬಲರಾಜವಾಡಿ, Rameshbhat,ManmohanRai, ರವಿರಾಜ್, ಜ್ಯೋತಿಮರೂರು, ಮಂಡ್ಯಚಂದ್ರು, ಗಿರಿಗೌಡ, ಪ್ರೇಮ, ಬೇಬಿ ಪರಿಣಿತ, ನಂದಿತ ಮುಂತಾದವರು ನಟಿಸಿದ್ದಾರೆ. RagavaShubash ಸಂಗೀತ, ವಿನು ಮನಸ್ಸು ಹಿನ್ನೆಲೆ ಸಂಗೀತ, ವೀರೇಶ್.ಎನ್.ಟಿ.ಎ-ArunRamesh ಛಾಯಾಗ್ರಹಣ, SatishChandraiah ಸಂಕಲನ, ಎ.ಆರ್.ಸಾಯಿರಾಮ್,  ಸಾಹಸ ಕೌರವವೆಂಕಟೇಶ್, ನೃತ್ಯ ಮುರಳಿ-ಕಿಶೋರ್-ಸಾಗರ್ ಅವರದಾಗಿದೆ. 

ಶಂಕರ್‌ನಾಗ್ ಜತೆ ಡ್ಯೂಯೆಟ್ ಹಾಡಿದ್ದ ಗೀತಾ ನಟಿ ಈಗೆಲ್ಲಿದ್ದಾರೆ, ಏನ್ ಮಾಡ್ತಿದಾರೆ; ಅಕ್ಕ ನಿಮ್ಗೆಲ್ಲಾ ಗೊತ್ತಲ್ವಾ..!?

ಬೆಂಗಳೂರು, ತುಮಕೂರು, ಚಿತ್ರದುರ್ಗ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಯುಎ ಪ್ರಮಾಣಪತ್ರ ಪಡೆದುಕೊಂಡಿರುವ ಸಿನಿಮಾವು ಫೆಬ್ರವರಿ 16ರಂದು ತೆರೆಗೆ ಬರಲಿದೆ. ಹೊಸಬರ ಚಿತ್ರವಾದರೂ ಸಸ್ಪೆನ್ಸ್‌-ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಎಲ್ಲರ ಇಷ್ಟಪಡುವಂತಿದೆ ಎಂದು ಚಿತ್ರತಂಡ ಹೇಳಿದೆ.

ಸಿಂಪಲ್ ಸುನಿ-ವಿನಯ್ ರಾಜ್ ಜೋಡಿಗೆ ಸಾಥ್ ಕೊಟ್ಟ ರಮ್ಯಾ; ಸೂಫಿ ಶೈಲಿ ಗೀತೆಯ ಝಲಕ್ ಮೆರಗು!

Latest Videos
Follow Us:
Download App:
  • android
  • ios